AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR ಜೊತೆ ಜಿಮ್​ನಲ್ಲಿ ವರ್ಕೌಟ್​ ಮಾಡ್ತಿದ್ದಾರಾ ಊರ್ವಶಿ ರೌಟೇಲಾ? ಫೋಟೋ ವೈರಲ್​

ಟಾಲಿವುಡ್​ನ ಸ್ಟಾರ್​ ನಟ ಜೂನಿಯರ್​ ಎನ್​ಟಿಆರ್​ ಮತ್ತು ಬಾಲಿವುಡ್​ ಬೆಡಗಿ ಊರ್ವಶಿ ರೌಟೇಲಾ ಅವರು ಒಟ್ಟಿಗೆ ಜಿಮ್​ನಲ್ಲಿ ವಕೌಟ್​ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ. ಊರ್ವಶಿ ರೌಟೇಲಾ ಹಂಚಿಕೊಂಡ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ‘ವಾರ್​ 2’ ಚಿತ್ರದ ಸಲುವಾಗಿ ಜೂನಿಯರ್​ ಎನ್​ಟಿಆರ್​ ಅವರು ಮುಂಬೈಗೆ ತೆರಳಿದ್ದಾರೆ.

Jr NTR ಜೊತೆ ಜಿಮ್​ನಲ್ಲಿ ವರ್ಕೌಟ್​ ಮಾಡ್ತಿದ್ದಾರಾ ಊರ್ವಶಿ ರೌಟೇಲಾ? ಫೋಟೋ ವೈರಲ್​
ಊರ್ವಶಿ ರೌಟೇಲಾ, ಜೂನಿಯರ್​ ಎನ್​ಟಿಆರ್​
ಮದನ್​ ಕುಮಾರ್​
|

Updated on: Apr 15, 2024 | 2:36 PM

Share

ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಬಾಲಿವುಡ್​ನಲ್ಲಿ ಬಹಳ ಖ್ಯಾತಿ ಹೊಂದಿದ್ದಾರೆ. ಈಗ ಅವರು ಟಾಲಿವುಡ್​ ಅಂಗಳಕ್ಕೂ ಕಾಲಿಡುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ (Jr NTR) ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಊರ್ವಶಿ ರೌಟೇಲಾ ಅವರು ಹಂಚಿಕೊಂಡಿದ್ದಾರೆ. ಅದನ್ನು ಕಂಡು ನೆಟ್ಟಿಗರಿಗೆ ಅಚ್ಚರಿ ಆಗಿದೆ. ಇದು ಜಿಮ್​ನಲ್ಲಿ ಕ್ಲಿಕ್ಕಿಸಿದ ಫೋಟೋ. ಹಾಗಾದ್ರೆ ಜೂನಿಯರ್​ ಎನ್​ಟಿಆರ್​ ಹಾಗೂ ಊರ್ವಶಿ ರೌಟೇಲಾ ಅವರು ಜೊತೆಯಾಗಿ ಜಿಮ್​ನಲ್ಲಿ ವಕೌಟ್​ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಕೂಡ ಅಭಿಮಾನಿಗಳ ಮನದಲ್ಲಿ ಮೂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

‘ಜೂನಿಯರ್​ ಎನ್​ಟಿಆರ್​ ಅವರು ನಮ್ಮೆಲ್ಲರ ಪ್ರೀತಿಯ ನಿಜವಾದ ಗ್ಲೋಬಲ್​ ಸೂಪರ್​ ಸ್ಟಾರ್​. ಅವರು ತುಂಬ ಶಿಸ್ತಿನ, ಪ್ರಾಮಾಣಿಕ ಹಾಗೂ ನೇರ ನಡೆ-ನುಡಿಯ ವ್ಯಕ್ತಿ. ಬಹಳ ವಿನಯವಂತ ಕೂಡ ಹೌದು. ನಮಗೆಲ್ಲ ಸ್ಫೂರ್ತಿ ಆಗಿದ್ದಕ್ಕೆ ಧನ್ಯವಾಗಳು. ಸಿಂಹದಂತಹ ನಿಮ್ಮ ವ್ಯಕ್ತಿತ್ವ ಮೆಚ್ಚುವಂಥದ್ದು. ಮುಂದಿನ ದಿನಗಳಲ್ಲಿ ನಿಮ್ಮ ಜೊತೆ ಕೆಲಸ ಮಾಡಲು ಕಾದಿದ್ದೇನೆ’ ಎಂದು ಊರ್ವಶಿ ರೌಟೇಲಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ.

ಬಾಲಿವುಡ್​ನ ‘ವಾರ್​ 2’ ಸಿನಿಮಾದ ಶೂಟಿಂಗ್​ ಸಲುವಾಗಿ ಜೂನಿಯರ್​ ಎನ್​ಟಿಆರ್​ ಅವರು ಮುಂಬೈಗೆ ತೆರಳಿದ್ದಾರೆ. ಈ ಸಿನಿಮಾದಲ್ಲಿ ಅವರು ಹೃತಿಕ್​ ರೋಷನ್​ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಬಹಳ ಅದ್ದೂರಿಯಾಗಿ ಈ ಚಿತ್ರ ಮೂಡಿಬರುತ್ತಿದೆ. ಮುಂಬೈನಲ್ಲಿ ಇರುವ ಜೂನಿಯರ್​ ಎನ್​ಟಿಆರ್​ ಅವರು ವರ್ಕೌಟ್​ ತಪ್ಪಿಸಿಲ್ಲ. ಈ ಸಂದರ್ಭದಲ್ಲೇ ಅವರನ್ನು ಊರ್ವಶಿ ರೌಟೇಲಾ ಭೇಟಿ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ವಾರ್​ 2’ ಸಿನಿಮಾಗಾಗಿ ಮುಂಬೈಗೆ ತೆರಳಿದ ಜೂನಿಯರ್​ ಎನ್​ಟಿಆರ್​; 10 ದಿನ ಶೂಟಿಂಗ್​

ಇಷ್ಟು ದಿನ ತೆಲುಗು ಸಿನಿಮಾಗಳಲ್ಲಿ ಸ್ಪೆಷಲ್​ ಸಾಂಗ್​ಗೆ ಹೆಜ್ಜೆ ಹಾಕಿದ್ದ ಊರ್ವಶಿ ರೌಟೇಲಾ ಅವರು ಈಗ ನಂದಮೂರಿ ಬಾಲಕೃಷ್ಣ ನಟನೆಯ ಹೊಸ ಸಿನಿಮಾದಲ್ಲಿ ಒಂದು ಪಾತ್ರ ಮಾಡುವ ಅವಕಾಶ ಪಡೆದುಕೊಂಡಿದ್ದಾರೆ. ಅದು ಬಾಲಯ್ಯ ನಟನೆಯ 109ನೇ ಸಿನಿಮಾ. ಈ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಒಂದಿಲ್ಲೊಂದು ಕಾರಣಕ್ಕೆ ಊರ್ವಶಿ ರೌಟೇಲಾ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಅನೇಕ ಸ್ಟಾರ್​ ಕಲಾವಿದರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಗಮನ ಸೆಳೆಯುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು