AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ

ಮನೆಯಲ್ಲಿ ಅತಿ ಹೆಚ್ಚು ಜಗಳ ಆಗುವುದು, ಮಿಸ್​ ಅಂಡರ್​​​ಸ್ಟ್ಯಾಂಡಿಗ್​ ಹುಟ್ಟಿಕೊಳ್ಳುವುದು ಅಡುಗೆ ಮನೆಯ ವಿಚಾರಕ್ಕೆ. ಈಗ ವೈಷ್ಣವಿ ಬಗ್ಗೆ ಅಸಮಾಧಾನ ಹುಟ್ಟಿಕೊಳ್ಳಲು ಕಾರಣವಾಗಿದ್ದು ಇದೇ ಅಡುಗೆ ಮನೆ.

ಇದೇ ಮೊದಲ ಬಾರಿಗೆ ವೈಷ್ಣವಿ ವಿರುದ್ಧ ಒಟ್ಟಾಗಿ ತಿರುಗಿಬಿದ್ದ ಮನೆ ಮಂದಿ; ಬಿಕ್ಕಿ ಬಿಕ್ಕಿ ಅತ್ತ ಸನ್ನಿಧಿ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on: May 07, 2021 | 7:20 PM

Share

ಬಿಗ್ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಹೋಗುವವರಲ್ಲ. ತಾವಾಯಿತು ತಮ್ಮ ಕೆಲಸವಾಯಿತು ಎಂದು ಸುಮ್ಮನಿದ್ದು ಬಿಡುತ್ತಾರೆ. ಇತ್ತೀಚೆಗೆ ಅವರು ಮನೆಯವರ ಜತೆ ಹೆಚ್ಚು ಬೆರೆಯುತ್ತಿದ್ದಾರೆ. ಆದಾಗ್ಯೂ ಅವರು ಎಂದಿಗೂ ಲಿಮಿಟ್​ ಕ್ರಾಸ್​ ಮಾಡಿಲ್ಲ. ಆದರೆ, ಈಗ ಮನೆ ಮಂದಿ ಎಲ್ಲರೂ ವೈಷ್ಣವಿ ಬಗ್ಗೆ ಒಟ್ಟಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನು ನೋಡಿದ ವೈಷ್ಣವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಮನೆಯಲ್ಲಿ ಅತಿ ಹೆಚ್ಚು ಜಗಳ ಆಗುವುದು, ಮಿಸ್​ ಅಂಡರ್​​​ಸ್ಟ್ಯಾಂಡಿಗ್​ ಹುಟ್ಟಿಕೊಳ್ಳುವುದು ಅಡುಗೆ ಮನೆಯ ವಿಚಾರಕ್ಕೆ. ಈಗ ವೈಷ್ಣವಿ ಬಗ್ಗೆ ಅಸಮಾಧಾನ ಹುಟ್ಟಿಕೊಳ್ಳಲು ಕಾರಣವಾಗಿದ್ದು ಇದೇ ಅಡುಗೆ ಮನೆ. ಬಿಗ್​ ಬಾಸ್​ ಮನೆ ಸೇರಿದ ದಿನದಿಂದಲೂ ವೈಷ್ಣವಿ ಅಡುಗೆ ಮನೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಅವರ ಕೈರುಚಿ ಎಲ್ಲರಿಗೂ ಇಷ್ಟವಾಗಿದೆ. ಕೆಲ ವಾರಗಳ ಹಿಂದೆ ಕಿಚ್ಚ ಸುದೀಪ್​ ಎದುರು ವೈಷ್ಣವಿ ಅಡುಗೆ ಬಗ್ಗೆ ಮನೆ ಮಂದಿ ಹೊಗಳಿದ್ದರು. ಶಮಂತ್​ ಬ್ರೋ ಗೌಡ ಅವರಂತೂ ವೈಷ್ಣವಿ ಮಾಡುವ ಅಡುಗೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈಗ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ವೈಷ್ಣವಿ ಕಡಿಮೆ ಅಡುಗೆ ಮಾಡಿದ್ದಾರೆ ಹಾಗೂ ಅಡುಗೆ ಮಾಡುವುದು ತಡವಾಗಿದೆ. ಇದಕ್ಕೆ ಮನೆಯವರು ವೈಷ್ಣವಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಎಲ್ಲರೂ ಮಾಡಿದ ಅಡುಗೆ ಕಡಿಮೆ ಆಯಿತು ಎಂದಿದ್ದಾರೆ. ಇದಕ್ಕೆ ವೈಷ್ಣವಿ ಅತ್ತಿದ್ದಾರೆ. ನನ್ನ ಕೈಯ್ಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ನಾನು ಮಾಡುತ್ತೇನೆ. ನಮ್ಮವರು ಅಂದುಕೊಂಡವರೇ ಈ ರೀತಿ ಪ್ರತಿಕ್ರಿಯಿಸಿದರೆ ಯಾರು ನನ್ನನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ರಘು ಗೌಡ ಟಾಸ್ಕ್​ ಪ್ರಾಪರ್ಟಿ ಮುಟ್ಟಿದ್ದಾರೆ. ಇದರಿಂದ ಮನೆಯ ಎಲ್ಲಾ ಸದಸ್ಯರಿಗೆ ಟೀ, ಕಾಫಿ ಹಾಗೂ ಹಾಲನ್ನು ಬಿಗ್​ ಬಾಸ್​ ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ. ಮನೆ ಮಂದಿ ಇಷ್ಟು ದಿನ ಹಾಲು, ಟೀ ಕುಡಿದು ಹಸಿವನ್ನು ತಡೆದಿಟ್ಟುಕೊಳ್ಳುತ್ತಿದ್ದರು. ಈಗ ಅದು ಇಲ್ಲದಾಗಿದೆ. ಹೀಗಾಗಿ ಎಲ್ಲಾ ಸ್ಪರ್ಧಿಗಳಿಗೆ ಹೊಟ್ಟೆ ತುಂಬಿಸಿಕೊಳ್ಳಲು ಊಟ ಒಂದೇ ಆಯ್ಕೆಆಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ