ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ‘ವಲಿಮೈ’; ಅಜಿತ್​ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?

ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಹೈಲೈಟ್​ ಆಗಿವೆ. ಕೆಲವರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಸಾಕಷ್ಟು ಹೈಪ್​ನೊಂದಿಗೆ ಸಿನಿಮಾ ರಿಲೀಸ್​ ಆಗಿದ್ದರಿಂದ ಮೊದಲ ದಿನ ಒಳ್ಳೆಯ ಕಲೆಕ್ಷನ್ ಆಗಿದೆ.

ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ‘ವಲಿಮೈ’; ಅಜಿತ್​ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?
ವಲಿಮೈ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 25, 2022 | 5:01 PM

ಕೊವಿಡ್​ ಕಾಣಿಸಿಕೊಂಡ ನಂತರದಲ್ಲಿ ನಿರ್ಮಾಪಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರೇಕ್ಷಕರು ಮೊದಲಿನಷ್ಟು ಚಿತ್ರಮಂದಿರಕ್ಕೆ ತೆರಳುತ್ತಿಲ್ಲ ಎನ್ನುವ ಮಾತಿದೆ. ಅನೇಕ ಸಂದರ್ಭದಲ್ಲಿ ಇದು ಸಾಬೀತಾಗಿದೆ. ಕೊವಿಡ್ (Covid 19)​ ಕಾಣಿಸಿಕೊಳ್ಳುವುದಕ್ಕೂ ಮೊದಲು ಸಿನಿಮಾ ರಂಗದಲ್ಲಿ ಎಷ್ಟು ಬಿಸ್ನೆಸ್ ಆಗುತ್ತಿತ್ತೋ ಅಷ್ಟು ಬಿಸ್ನೆಸ್ ಈಗ ಆಗುತ್ತಿಲ್ಲ. ಹಲವು ದೊಡ್ಡ ದೊಡ್ಡ ಸಿನಿಮಾಗಳು ಒಟ್ಟಿಗೆ ಬಿಡುಗಡೆ ಆಗುತ್ತಿರುವುದರಿಂದ ಕಲೆಕ್ಷನ್​ಗೆ ಹೊಡೆತ ಬೀಳುತ್ತಿದೆ. ಈಗ ನಿಧಾನವಾಗಿ ಚಿತ್ರಣ ಬದಲಾಗುತ್ತಿದೆ. ಬಹು ನಿರೀಕ್ಷಿತ ಚಿತ್ರಗಳು ಒಳ್ಳೆಯ ರೀತಿಯಲ್ಲಿ ಕಲೆಕ್ಷನ್​ ಮಾಡುತ್ತಿವೆ. ಇದಕ್ಕೆ ಲೇಟೆಸ್ಟ್​ ಉದಾಹರಣೆ ಅಜಿತ್​ ಕುಮಾರ್ (Ajith Kumar) ನಟನೆಯ ತಮಿಳಿನ ‘ವಲಿಮೈ’ (Valimai First Day Collection) ಚಿತ್ರ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಒಳ್ಳೆಯ ಕಲೆಕ್ಷನ್​ ಮಾಡಿ ನಿರ್ಮಾಪಕರ ಮುಖದಲ್ಲಿ ನಗು ಮೂಡಿಸಿದೆ.

ಗುರುವಾರ (ಫೆಬ್ರವರಿ 24) ಬಿಡುಗಡೆ ಆಗಿರುವ ‘ವಲಿಮೈ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಜಿತ್​ ನಟಿಸಿದ್ದಾರೆ. ಎಚ್​. ವಿನೋದ್​ ಅವರು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಬಾಲಿವುಡ್​ನ ಖ್ಯಾತ ನಿರ್ಮಾಪಕ ಬೋನಿ ಕಪೂರ್​ ಅವರು ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಹೈಲೈಟ್​ ಆಗಿವೆ. ಕೆಲವರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಸಾಕಷ್ಟು ಹೈಪ್​ನೊಂದಿಗೆ ಸಿನಿಮಾ ರಿಲೀಸ್​ ಆಗಿದ್ದರಿಂದ ಮೊದಲ ದಿನ ಒಳ್ಳೆಯ ಕಲೆಕ್ಷನ್ ಆಗಿದೆ.

ಮೊದಲ ದಿನ ಈ ಸಿನಿಮಾ ಚೆನ್ನೈ ಒಂದರಲ್ಲೇ 1.82 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ತಮಿಳುನಾಡಿನಾದ್ಯಂತ ಈ ಸಿನಿಮಾ ಗಳಿಕೆ ಮಾಡಿದ್ದು 36 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಈ ಮೂಲಕ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿದಂತಾಗಿದೆ. ಈ ಮೊದಲು ರಜನಿಕಾಂತ್​ ನಟೆಯ ‘ಅಣ್ಣಾಥೆ’ ಸಿನಿಮಾ 34 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಅದನ್ನು ದಾಟಿ, 36 ಕೋಟಿ ರೂಪಾಯಿ ಗಳಿಕೆ ಮಾಡಿದೆ ‘ವಲಿಮೈ’. ವಿಶ್ವಾದ್ಯಂತ ಈ ಸಿನಿಮಾ 62 ಕೋಟಿ ರೂಪಾಯಿ ಬಾಚಿಕೊಂಡಿದೆ.

ಭಾರತ ಮಾತ್ರವಲ್ಲದೆ, ಬೇರೆ ದೇಶದಲ್ಲೂ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಅಮೆರಿಕ, ಮಲೇಷಿಯಾ, ಸಿಂಗಾಪೂರ್​ನಲ್ಲಿಯೂ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಈ ಮೂಲಕ ಅಜಿತ್​ ಸಿನಿಮಾಗೆ ಒಳ್ಳೆಯ ಮೈಲೇಜ್​ ಸಿಕ್ಕಿದೆ.

ಇದನ್ನೂ ಓದಿ: ವಿಮಾನದಲ್ಲಿ ಸಂಚರಿಸುವಾಗ ರಾಧಿಕಾ ಪಂಡಿತ್​ ಮಕ್ಕಳು ಮಾಡೋ ಕೆಲಸವೇನು? ಫೋಟೋ ಹಂಚಿಕೊಂಡ ನಟಿ

ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ