AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ವಿಜಯ್ ನಟನೆಯ ಇತ್ತೀಚಿನ ಸಿನಿಮಾಗಳು ಡಬ್​ ಆಗಿ ತೆಲುಗಿನಲ್ಲಿ ರಿಲೀಸ್​ ಆಗುತ್ತಿತ್ತು. ಆದರೆ, ಈ ಬಾರಿ ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಪಡಿಸಲು ನಿರ್ಮಾಪಕ ದಿಲ್​ ರಾಜು ಚಿಂತನೆ ನಡೆಸಿದ್ದಾರೆ

ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​
ರಾಜೇಶ್ ದುಗ್ಗುಮನೆ
|

Updated on: May 30, 2021 | 9:25 PM

Share

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿದ್ದವು. ಈಗ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರಂತೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ವಿಜಯ್ ನಟನೆಯ ಇತ್ತೀಚಿನ ಸಿನಿಮಾಗಳು ಡಬ್​ ಆಗಿ ತೆಲುಗಿನಲ್ಲಿ ರಿಲೀಸ್​ ಆಗುತ್ತಿತ್ತು. ಆದರೆ, ಈ ಬಾರಿ ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಪಡಿಸಲು ನಿರ್ಮಾಪಕ ದಿಲ್​ ರಾಜು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ವಂಶಿ ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು ಮುಂದಿನ ಸಿನಿಮಾ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ, ಫ್ಯಾನ್ಸ್​​ ಈ ಬಗ್ಗೆ ಸಾಕಷ್ಟು ಟ್ವೀಟ್​ ಮಾಡುತ್ತಿದ್ದಾರೆ.

ಹಾಗಾದರೆ, ಈ ಬಗ್ಗೆ ಅಧಿಕೃತ ಘೋಷಣೆ ಯಾವಾಗ? ಅದಕ್ಕೂ ಉತ್ತರವಿದೆ. ಜೂನ್​ 22 ವಿಜಯ್​ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲು ಚಿಂತಿಸಿದೆ ಎನ್ನುವ ಮಾತು ಕೇಳಿ ಬಂದಿದೆ.

ಮಹರ್ಷಿ, ಊಪಿರಿ, ಎವಡು ಮೊದಲಾದ ಚಿತ್ರಗಳನ್ನು ವಂಶಿ ನಿರ್ದೇಶನ ಮಾಡಿದ್ದಾರೆ. ಅವರಿಗೆ ತೆಲುಗಿನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇನ್ನು, ವಿಜಯ್​ ಕಾಲಿವುಡ್​ನಲ್ಲಿ ಬಹುಬೇಡಿಕೆಯ ನಟ. ಇಬ್ಬರ ಕಾಂಬಿನೇಷನ್​ನಿಂದ ಚಿತ್ರ ತೆಲುಗು ಮತ್ತು ತಮಿಳು ಎರಡೂ ಕಡೆ ದೊಡ್ಡ ಮಾರುಕಟ್ಟೆ ಪಡೆದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.

ಈ ವರ್ಷ ತೆರೆಗೆ ಬಂದ ಮಾಸ್ಟರ್​ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ವಿಜಯ್​ 65ನೇ ಚಿತ್ರಕ್ಕೆ ನೆಲ್ಸನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ, ಕೊವಿಡ್ ಕಾರಣಕ್ಕೆ ಶೂಟಿಂಗ್​ ನಿಂತಿದೆ.

ಇದನ್ನೂ ಓದಿ: Radhika Apte: ಕೊವಿಡ್​ ಲಸಿಕೆ ಪಡೆದ ನಟಿ ರಾಧಿಕಾ ಆಪ್ಟೆ; ಸುತ್ತಿಬಳಸಿ ಕಾಲೆಳೆದ ನಟ ವಿಜಯ್​ ವರ್ಮಾ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ