AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ತೊಂದರೆ ಕೊಟ್ಟು, ಮನಸ್ಸಿಗೆ ನೋವು ಮಾಡಿದವರ ಬಗ್ಗೆ ಬಹಿರಂಗ ಪತ್ರ ಬರೆದ ರಶ್ಮಿಕಾ ಮಂದಣ್ಣ

Rashmika Mandanna Troll: ‘ಇತ್ತೀಚಿನ ವರ್ಷಗಳಲ್ಲಿ ನನಗೆ ಕೆಲವು ವಿಚಾರಗಳು ಸಾಕಷ್ಟು ತೊಂದರೆ ನೀಡಿವೆ. ಈ ಬಗ್ಗೆ ನಾನು ಮೊದಲೇ ಮಾತನಾಡಬೇಕಿತ್ತು’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

Rashmika Mandanna: ತೊಂದರೆ ಕೊಟ್ಟು, ಮನಸ್ಸಿಗೆ ನೋವು ಮಾಡಿದವರ ಬಗ್ಗೆ ಬಹಿರಂಗ ಪತ್ರ ಬರೆದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Nov 09, 2022 | 7:39 AM

Share

ಒಂದಿಲ್ಲೊಂದು ಕಾರಣಕ್ಕೆ ರಶ್ಮಿಕಾ ಮಂದಣ್ಣ ಅವರು ಟ್ರೋಲ್​ (Rashmika Mandanna Troll) ಆಗುತ್ತಲೇ ಇರುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವರ್ಗದ ಜನರು ಯಾವಾಗಲೂ ಅವರನ್ನು ಟಾರ್ಗೆಟ್​ ಮಾಡುತ್ತಾರೆ. ರಶ್ಮಿಕಾ ಮಂದಣ್ಣ ಎಷ್ಟೇ ಒಳ್ಳೆಯ ಸಿನಿಮಾ ಮಾಡಿದರೂ, ಎಷ್ಟೇ ದೊಡ್ಡ ಅವಕಾಶ ಪಡೆದುಕೊಂಡರೂ ಬೆನ್ನು ತಟ್ಟುವ ಬದಲು ಕೆಲವರು ದ್ವೇಷಿಸುವ ಕಾಯಕವನ್ನೇ ಮಾಡಿಕೊಂಡು ಬರುತ್ತಿದ್ದಾರೆ. ಅಂಥವರ ಬಗ್ಗೆ ರಶ್ಮಿಕಾ ಮಂದಣ್ಣ (Rashmika Mandanna) ಬಹಿರಂಗ ಪತ್ರ ಬರೆದಿದ್ದಾರೆ. ತಮಗೆ ತೊಂದರೆ ನೀಡಿದ ಮತ್ತು ಮನಸ್ಸಿಗೆ ನೋವು ಮಾಡಿದವರ ಬಗ್ಗೆ ಅವರು ವಿವರವಾಗಿ ತಿಳಿಸಿದ್ದಾರೆ. ಈ ವಿಚಾರದ ಬಗ್ಗೆ ಇಷ್ಟು ದಿನ ಮೌನವಾಗಿದ್ದ ರಶ್ಮಿಕಾ ಈಗ ಎಲ್ಲವನ್ನೂ ಹೇಳಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ (Rashmika Mandanna Instagram) ಈ ಕುರಿತು ಅವರು ಪೋಸ್ಟ್​ ಮಾಡಿದ್ದಾರೆ.

‘ಇತ್ತೀಚಿನ ವರ್ಷಗಳಲ್ಲಿ ನನಗೆ ಕೆಲವು ವಿಚಾರಗಳು ಸಾಕಷ್ಟು ತೊಂದರೆ ನೀಡಿವೆ. ಈ ಬಗ್ಗೆ ನಾನು ಮೊದಲೇ ಮಾತನಾಡಬೇಕಿತ್ತು’ ಎಂದು ರಶ್ಮಿಕಾ ಮಂದಣ್ಣ ಅವರು ಬರಹ ಆರಂಭಿಸಿದ್ದಾರೆ. ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್​ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್​ ಬ್ಯಾಗ್​ ರೀತಿ ಆಗಿದ್ದೇನೆ. ನಾನು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರ ಹಾಗಿದೆ. ಎಲ್ಲರೂ ನನ್ನನ್ನು ಪ್ರೀತಿಸಲೇಬೇಕು ಅಂತೇನಿಲ್ಲ. ನನ್ನ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಮಾತ್ರಕ್ಕೆ ನೀವು ನೆಗೆಟಿವಿಟಿ ಹಬ್ಬಿಸಬಹುದು ಅಂತ ಅರ್ಥವಲ್ಲ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

‘ನಿಮ್ಮೆಲ್ಲರನ್ನು ರಂಜಿಸಲು ನಾನು ಸತತ ಶ್ರಮಪಡುತ್ತಿದ್ದೇನೆ. ಆ ಕೆಲಸದ ಬಗ್ಗೆ ನಾನು ಹೆಚ್ಚು ಯೋಚಿಸುತ್ತೇನೆ. ನಾನು ಮತ್ತು ನೀವು ಇಬ್ಬರೂ ಹೆಮ್ಮೆ ಪಡುವಂತಹ ಕೆಲಸ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ನಾನು ಹೇಳಿಲ್ಲದೇ ಇರುವ ವಿಚಾರಕ್ಕೆ ನನ್ನನ್ನು ಟ್ರೋಲ್​ ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ’ ಎಂದು ರಶ್ಮಿಕಾ ಅವರು ತಮ್ಮ ಬೇಸರ ತೋಡಿಕೊಂಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ಸಂದರ್ಶನಗಳಲ್ಲಿ ನಾನು ಹೇಳಿದ್ದನ್ನು ನನ್ನ ವಿರುದ್ಧವೇ ತಿರುಗಿಸಲಾಗಿದೆ. ನನಗೆ ಮತ್ತು ನನ್ನ ಸಂಬಂಧಗಳಿಗೆ ಹಾನಿ ಆಗುವಂತಹ ತಪ್ಪು ಕಥೆಗಳನ್ನು ಇಂಟರ್​ನೆಟ್​ನಲ್ಲಿ ಹರಡಿಸಲಾಗಿದೆ. ಒಳ್ಳೆಯ ಟೀಕೆಯನ್ನು ನಾನು ಸ್ವಾಗತಿಸುತ್ತೇನೆ. ಅದರಿಂದ ಬೆಳವಣಿಗೆ ಸಾಧ್ಯ. ಆದರೆ ನೆಗೆಟಿವಿಟಿ ಮತ್ತು ದ್ವೇಷದಿಂದ ಏನು ಸಾಧ್ಯ’ ಎಂದು ರಶ್ಮಿಕಾ ಪ್ರಶ್ನಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಈ ಬರಹ ವೈರಲ್​ ಆಗಿದೆ. ದುಲ್ಕರ್​ ಸಲ್ಮಾನ್​, ತಾನ್ಯಾ ಹೋಪ್​ ಮುಂತಾದ ಸೆಲೆಬ್ರಿಟಿಗಳು ಇದಕ್ಕೆ ಕಮೆಂಟ್​ ಮಾಡಿದ್ದಾರೆ. ಆ ಮೂಲಕ ರಶ್ಮಿಕಾಗೆ ಬೆಂಬಲ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:39 am, Wed, 9 November 22