AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu: ಪ್ರಪಂಚದಲ್ಲೇ 2ನೇ ಸ್ಥಾನ ಪಡೆದ ರಶ್ಮಿಕಾ ಮಂದಣ್ಣ ಹೊಸ ಸಾಂಗ್​ ‘ರಂಜಿದಮೆ..’

Rashmika Mandanna | Ranjithame Song: ವಿಜಯ್​ ಜೊತೆ ರಶ್ಮಿಕಾ ಮಂದಣ್ಣ ಅವರು ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಸದ್ಯಕ್ಕಂತೂ ‘ರಂಜಿದಮೆ..’ ಹಾಡು ಸಖತ್​ ಸೆನ್ಸೇಷನ್​ ಸೃಷ್ಟಿ ಮಾಡಿದೆ.

Varisu: ಪ್ರಪಂಚದಲ್ಲೇ 2ನೇ ಸ್ಥಾನ ಪಡೆದ ರಶ್ಮಿಕಾ ಮಂದಣ್ಣ ಹೊಸ ಸಾಂಗ್​ ‘ರಂಜಿದಮೆ..’
ದಳಪತಿ ವಿಜಯ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Nov 20, 2022 | 5:55 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದಕ್ಷಿಣ ಭಾರತದಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಕನ್ನಡದಿಂದ ವೃತ್ತಿಜೀವನ ಆರಂಭಿಸಿದ ಅವರು ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲದೇ ಗ್ಲೋಬಲ್​ ಲೆವೆಲ್​ನಲ್ಲೂ ಅವರು ಹವಾ ಮಾಡುತ್ತಿದ್ದಾರೆ. ನಟ ‘ದಳಪತಿ’ ವಿಜಯ್​ (Thalapathy Vijay) ಜೊತೆ ಅವರು ‘ವಾರಿಸು’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಥಮನ್​ ಎಸ್. ಸಂಗೀತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ರಂಜಿದಮೆ..’ ಹಾಡು ಸೂಪರ್​ ಹಿಟ್​ ಆಗಿದೆ. ಪ್ರಪಂಚದಾದ್ಯಂತ ಈ ಸಾಂಗ್​ ಸಖತ್​ ಸೌಂಡು ಮಾಡುತ್ತಿದೆ. ಆ ಮೂಲಕ ‘ವಾರಿಸು’ (Varisu) ಚಿತ್ರದ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

‘ರಂಜಿದಮೆ..’ ಹಾಡಿನಲ್ಲಿ ದಳಪತಿ ವಿಜಯ್​ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಕೆಮಿಸ್ಟ್ರಿ ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅಂದಹಾಗೆ, ಸದ್ಯಕ್ಕೆ ರಿಲೀಸ್​ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಯೂಟ್ಯೂಬ್​ ಗ್ಲೋಬಲ್​ ಚಾರ್ಟ್ಸ್​ನಲ್ಲಿ ಈ ಸಾಂಗ್​ 2ನೇ ಸ್ಥಾನ ಪಡೆದುಕೊಂಡಿದೆ. ಇದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಸಂಗೀತ ನಿರ್ದೇಶಕ ಥಮನ್​ ಎಸ್​. ಅವರು ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಕೆಲಸಕ್ಕೆ ಈ ಪರಿ ಮೆಚ್ಚುಗೆ ಸಿಗುತ್ತಿರುವುದಕ್ಕೆ ಅವರು ಹಿರಿಹಿರಿ ಹಿಗ್ಗುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೂ ಈ ವಿಚಾರ ಹೆಮ್ಮೆ ತಂದಿದೆ. ಸದ್ಯ ಯೂಟ್ಯೂಬ್​ನಲ್ಲಿ ‘ರಂಜಿದಮೆ..’ ಹಾಡು 58 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ.

‘ವಾರಿಸು’ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಶ್ರೀವೆಂಕಟೇಶ್ವರ ಕ್ರಿಯೇಷನ್ಸ್​ ಮೂಲಕ ದಿಲ್​ ರಾಜು ಮತ್ತು ಶಿರಿಷ್​ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. 2023ರ ಜನವರಿ 12ಕ್ಕೆ ‘ವಾರಿಸು’ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಸಿನಿಮಾಗೆ ಭರ್ಜರಿ ಸ್ವಾಗತ ಕೋರಲು ವಿಜಯ್​ ಮತ್ತು ರಶ್ಮಿಕಾ ಮಂದಣ್ಣ ಫ್ಯಾನ್ಸ್​ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ದಳಪತಿ’ ವಿಜಯ್ ಮತ್ತು ಎಂಎಂ ಮಾನಸಿ ಅವರು ಜೊತೆಯಾಗಿ ‘ರಂಜಿದಮೆ..’ ಹಾಡಿಗೆ ಧ್ವನಿ ನೀಡಿದ್ದಾರೆ. ವಿಜಯ್​ ಜೊತೆ ರಶ್ಮಿಕಾ ಮಂದಣ್ಣ ಅವರು ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಸದ್ಯಕ್ಕಂತೂ ಈ ಹಾಡು ಸಖತ್​ ಸೆನ್ಸೇಷನ್​ ಸೃಷ್ಟಿ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:55 pm, Sun, 20 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್