Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ರಿಲೀಸ್ ಆಗುವ ಮೊದಲೇ ಅಟ್ಲಿಗೆ ಬಾಲಿವುಡ್​ನಲ್ಲಿ ಹೆಚ್ಚಾಯ್ತು ಆಫರ್; ಮುಂದಿನ ವರ್ಷ ಮತ್ತೊಂದು ಸಿನಿಮಾ ರಿಲೀಸ್

ಅಟ್ಲಿ ಅವರು ನಿರ್ದೇಶನದ ಜೊತೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ವರುಣ್ ಧವನ್ ಚಿತ್ರವನ್ನು ಅವರು ನಿರ್ದೇಶನ ಮಾಡುತ್ತಿಲ್ಲ ಬದಲಿಗೆ ಹಂಚಿಕೆ ಮಾಡುತ್ತಿದ್ದಾರೆ.

‘ಜವಾನ್’ ರಿಲೀಸ್ ಆಗುವ ಮೊದಲೇ ಅಟ್ಲಿಗೆ ಬಾಲಿವುಡ್​ನಲ್ಲಿ ಹೆಚ್ಚಾಯ್ತು ಆಫರ್; ಮುಂದಿನ ವರ್ಷ ಮತ್ತೊಂದು ಸಿನಿಮಾ ರಿಲೀಸ್
ಅಟ್ಲೀ-ವರುಣ್ ಧವನ್
Follow us
ರಾಜೇಶ್ ದುಗ್ಗುಮನೆ
|

Updated on: Jul 03, 2023 | 7:43 AM

ಶಾರುಖ್ ಖಾನ್ (Shah Rukh Khan) ಜೊತೆ ಕೆಲಸ ಮಾಡಿದರೆ ಆಫರ್ ಹೆಚ್ಚುತ್ತದೆ. ಇದು ಅಟ್ಲಿ ವಿಚಾರದಲ್ಲಿ ನಿಜವಾಗಿದೆ. ಅಟ್ಲಿ ದಕ್ಷಿಣ ಭಾರತದಲ್ಲಿ ಗುರುತಿಸಿಕೊಂಡವರು. ತಮಿಳಿನಲ್ಲಿ ನಾಲ್ಕು ಬ್ಲಾಕ್​ಬಸ್ಟರ್ ಹಿಟ್ ಕೊಟ್ಟಿದ್ದಾರೆ. ‘ಜವಾನ್’ ಚಿತ್ರದ ಮೂಲಕ ಅವರು ಬಾಲಿವುಡ್​ಗೆ ಪರಿಚಯಗೊಳ್ಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಹೀಗಿರುವಾಗಲೇ ಅವರ ಹೊಸ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ವರುಣ್ ಧವನ್ (Varun Dhawan) ಜೊತೆ ಅಟ್ಲಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ 2023ರ ಮೇ 31ಕ್ಕೆ ರಿಲೀಸ್ ಆಗಲಿದೆ.

ಅಟ್ಲಿ ಅವರು ನಿರ್ದೇಶನದ ಜೊತೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ವರುಣ್ ಧವನ್ ಚಿತ್ರವನ್ನು ಅವರು ನಿರ್ದೇಶನ ಮಾಡುತ್ತಿಲ್ಲ ಬದಲಿಗೆ ಹಂಚಿಕೆ ಮಾಡುತ್ತಿದ್ದಾರೆ. ಅವರ ಪತ್ನಿ ಪ್ರಿಯಾ ಅಟ್ಲಿ ಹಾಗೂ ಮುರದ್ ಖೇತಾನಿ ಅವರು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅಟ್ಲಿ ಅವರು ಈ ಸಿನಿಮಾ ಹಂಚಿಕೆ ಮಾಡಲು ಮುಂದೆ ಬಂದಿದ್ದಾರೆ.

ಈ ಚಿತ್ರಕ್ಕೆ ವರುಣ್ ಧವನ್ ಹೀರೋ. ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ವರುಣ್​ ಧವನ್​ಗೆ ಇದೆ. ಈ ಚಿತ್ರವನ್ನು ಕಲೀಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. 2019ರಲ್ಲಿ ‘ಕೀ’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಈಗ ವರುಣ್ ಧವನ್ ಜೊತೆ ಅವರು ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘VD18’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ರಿಲೀಸ್ ಡೇಟ್ ಕೂಡ ಘೋಷಣೆ ಆಗಿದ್ದು, ಮುಂದಿನ ಮೇ 31ಕ್ಕೆ ರಿಲೀಸ್ ಆಗಲಿದೆ.

ಇದನ್ನೂ ಓದಿ: Atlee Kumar: ಮೊದಲ ಬಾರಿ ಕಾನ್​ ಚಿತ್ರೋತ್ಸವದಲ್ಲಿ ಭಾಗಿಯಾದ ಅಟ್ಲಿ ಕುಮಾರ್​-ಪ್ರಿಯಾ ದಂಪತಿ; ಫೋಟೋ ವೈರಲ್​

ಸದ್ಯ ಅಟ್ಲಿ ಅವರ ಗಮನ ‘ಜವಾನ್’ ಸಿನಿಮಾ ಮೇಲಿದೆ. ಶಾರುಖ್ ಖಾನ್, ನಯನತಾರಾ ಹಾಗೂ ವಿಜಯ್ ಸೇತುಪತಿ ಮೊದಲಾದವರು ನಟಿಸುತ್ತಿದ್ದಾರೆ. ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ವರುಣ್ ಧವನ್ ಅವರು ‘ಸಿಟಾಡೆಲ್’ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಸಮಂತಾ ಈ ಸೀರಿಸ್​ನಲ್ಲಿ ನಟಿಸಿದ್ದು, ರಾಜ್ ಮತ್ತು ಡಿಕೆ ನಿರ್ದೇಶಕರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್