‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ

Jana Nayagan movie: ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ ತಡೆಯುತ್ತೇವೆ ಎಂದಿದ್ದಾರೆ.

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ
Vatal Nagaraj Jana Nayagan

Updated on: Jun 05, 2026 | 10:38 PM

ಪ್ಯಾನ್ ಇಂಡಿಯಾ (Pan India) ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ ತಡೆಯುತ್ತೇವೆ ಎಂದಿದ್ದಾರೆ.

ಇಂದು (ಜೂನ್ 05) ಮಾಧ್ಯಮಗಳ ಜೊತೆಗೆ ಮಾತನಾಡಿದ ವಾಟಾಳ್ ನಾಗರಾಜ್, ‘ಈಗಿನ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅವರು ನಟರಾಗಿದ್ದವರು ಈಗ ಅಧಿಕಾರಕ್ಕೆ ಬಂದಿದ್ದಾರೆ. ನಟನೆ ಮಾಡುವುದು ಸುಲಭ ಆದರೆ ಅಧಿಕಾರ ನಡೆಸುವುದು ಕಷ್ಟ. ಮೇಕೆದಾಟಿಗೆ ವಿರೋಧ ಮಾಡಿದರೆ ಕರ್ನಾಟಕದಲ್ಲಿ ಅವರ ಯಾವುದೇ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ’ ಎಂದು ವಾಟಾಳ್ ಹೇಳಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಪಾತ್ರದ ಬಗ್ಗೆ ಟೀಕೆ ಏಕೆ?

ಈಗಾಗಲೇ ಕಮಲ್ ಹಾಸನ್ ಅವರ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಆಗದಂತೆ ತಡೆಯಲು ಯಶಸ್ವಿ ಆಗಿದ್ದೇವೆ. ಕಮಲ್ ಹಾಸನ್, ಕನ್ನಡದ ಬಗ್ಗೆ ನಿಕೃಷ್ಟವಾಗಿ ಮಾತನಾಡಿದ್ದನ್ನು ವಿರೋಧಿಸಿ ಅವರಿಗೆ ಬುದ್ಧೀ ಕಲಿಸಿದ್ದೇವೆ. ಅದೇ ರೀತಿ, ಮೇಕೆದಾಟಿಗೆ ವಿರೋಧ ಮಾಡುತ್ತಿರುವ ತಮಿಳುನಾಡು ಸಿಎಂ ಅವರಿಗೂ ನಾವು ಬುದ್ಧಿ ಕಲಿಸುತ್ತೇವೆ’ ಎಂದು ವಾಟಾಳ್ ಹೇಳಿದ್ದಾರೆ. ವಿಜಯ್ ಅವರು ಸಿಎಂ ಆದ ಬಳಿಕ ಮೇಕೆದಾಟು ವಿವಾದದ ಬಗ್ಗೆ ಸುಪ್ರೀಂಕೋರ್ಟ್​​ನಲ್ಲಿ ಪುನರ್​​ಪರಿಶೀಲನೆ ಅರ್ಜಿ ಹಾಕಿದ್ದಾರೆ. ಅಲ್ಲದೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆದಾಗ ಮೇಕೆದಾಟು ಬಗ್ಗೆ ಪ್ರಸ್ತಾಪಿಸಿದ್ದು, ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯ್ ಅವರ ಈ ಕರ್ನಾಟಕ ವಿರೋಧಿ ಚಿಂತನೆ ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ.

ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಜನವರಿಯಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಕೆವಿಎನ್ ನಿರ್ಮಾಣ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸಿದೆ. ಒಂದೊಮ್ಮೆ ‘ಜನ ನಾಯಗನ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗದಿದ್ದಲ್ಲಿ ನಿರ್ಮಾಪಕರಿಗೆ ಭಾರಿ ದೊಡ್ಡ ನಷ್ಟವೇ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us