ರಶ್ಮಿಕಾ-ವಿಜಯ್ ದೇವರಕೊಂಡ ಬಗ್ಗೆ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ

Rashmika-Vijay Deverakonda: ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿಯ ಮದುವೆ ಮುರಿದಿದ್ದ ಜ್ಯೋತಿಷಿ ವೇಣು ಸ್ವಾಮಿ, ಇದೀಗ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಮದುವೆ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ರಶ್ಮಿಕಾ-ವಿಜಯ್ ದೇವರಕೊಂಡ ಬಗ್ಗೆ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ
ರಶ್ಮಿಕಾ-ವಿಜಯ್-ವೇಣು
Follow us
ಮಂಜುನಾಥ ಸಿ.
|

Updated on: Dec 28, 2023 | 7:04 PM

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ತುಸು ಜೋರಾಗಿಯೇ ಹರಿದಾಡುತ್ತಿದೆ. ಇಬ್ಬರು ಲಿವಿನ್ ರಿಲೇಷನ್​ನಲ್ಲಿದ್ದಾರೆ ಎಂಬ ಮಾತೂ ಸಹ ಅಲ್ಲಲ್ಲಿ ಕೇಳಿ ಬರುತ್ತಿದೆ. ತಾವಿಬ್ಬರೂ ‘ಜಸ್ಟ್ ಗೆಳೆಯರು’ ಎಂದಷ್ಟೆ ಹೇಳಿಕೊಂಡು ತಿರುಗುತ್ತಿದೆ ಈ ಜೋಡಿ. ತೆಲುಗು ರಾಜ್ಯಗಳಲ್ಲಿ ಬಹಳ ಜನಪ್ರಿಯವಾಗಿರುವ ಜ್ಯೋತಿಷಿ ವೇಣು ಸ್ವಾಮಿ ಅವರು ಇದೀಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ದಾಂಪತ್ಯ ಹೇಗಿರಲಿದೆ ಎಂಬ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ರಶ್ಮಿಕಾ ಮಂದಣ್ಣ ತಮ್ಮ ವೃತ್ತಿ ಬದುಕಿನ ಆರಂಭದಲ್ಲಿದ್ದಾಗ ಇದೇ ವೇಣು ಸ್ವಾಮಿ ಅವರಿಂದ ವಿಶೇಷ ಪೂಜೆ ಮಾಡಿಸಿದ್ದರು. ಇವರ ಸಲಹೆ ಪಡೆದೇ ರಕ್ಷಿತ್ ಶೆಟ್ಟಿ ಜೊತೆಗಿನ ಮದುವೆ ಮುರಿದುಕೊಂಡು ವೃತ್ತಿ ಬದುಕಿನ ಕಡೆಗೆ ಹೆಚ್ಚು ಗಮನವಹಿಸಿ ಯಶಸ್ಸು ಗಳಿಸಿದ್ದರು. ಅದೇ ಕಾರಣಕ್ಕೆ ಈಗ ರಶ್ಮಿಕಾ ಬಗ್ಗೆ ವೇಣು ಸ್ವಾಮಿ ಹೇಳಿರುವ ಭವಿಷ್ಯಕ್ಕೆ ಹೆಚ್ಚಿನ ಮೌಲ್ಯವಿದೆ.

ಇತ್ತಿಚೆಗೆ ಯೂಟ್ಯೂಬ್​ ಚಾನೆಲ್​ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಶ್ಮಿಕಾ ಹಾಗೂ ವಿಜಯ್​ ದೇವರಕೊಂಡ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘‘ರಶ್ಮಿಕಾ ಹಾಗೂ ವಿಜಯ್ ದೇವರೊಂಡ ಪರಸ್ಪರ ಪ್ರೀತಿಯಲ್ಲಿರುವುದು ಗುಟ್ಟೇನೂ ಅಲ್ಲ. ಅವರಿಬ್ಬರು ವಿವಾಹ ಆಗಲಿದ್ದಾರೆ. ಆದರೆ ವಿವಾಹವಾದ ಬಳಿಕ ಇಬ್ಬರೂ ದೂರಾಗಲಿದ್ದಾರೆ. ಇದು ಖಚಿತ’’ ಎಂದಿದ್ದಾರೆ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ, ವಿಜಯ್​ ದೇವರಕೊಂಡ ಫೋಟೋ ದುರ್ಬಳಕೆ: ಕ್ಷಮೆ ಕೇಳಿದ ನಟ ನಾನಿ

‘‘ವಿಜಯ್ ದೇವರಕೊಂಡ ಜೊತೆ ಮದುವೆಯಾದರೆ ವಿಚ್ಛೇದನ ಆಗಲಿದೆ ಎಂದು ನಾನು ನೇರವಾಗಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿದ್ದೇನೆ. ಇದೇ ಕಾರಣಕ್ಕೆ ಅವರು ನನ್ನೊಂದಿಗೆ ಮಾತನಾಡುವುದು ಬಿಟ್ಟು, ನನ್ನ ಸಂಪರ್ಕ ಕಡಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಸಮಾಜಕ್ಕೆ ನಾಯಕಿ ಆಗಿರಬಹುದು ಆದರೆ ನನಗೆ ಕೇವಲ ಕ್ಲೈಂಟ್ ಅಷ್ಟೆ. ಅವರ ಜನಪ್ರಿಯತೆ ನೋಡಿ ನಾನು ಭವಿಷ್ಯ ಹೇಳುವುದಿಲ್ಲ, ಅವರ ಗ್ರಹಗತಿ ನೋಡಿ ಭವಿಷ್ಯ ಹೇಳುತ್ತೇನೆ. ನಾನು ಹೇಳಿದ ನಿಜ ಅವರಿಗೆ ಹಿಡಿಸಲಿಲ್ಲ, ಇರಲಿ ಪರವಾಗಿಲ್ಲ, ಆದರೆ ಅವರಿಬ್ಬರು ಮದುವೆಯಾಗಿ ದೂರಾಗುವುದು ಖಚಿತ’’ ಎಂದಿದ್ದಾರೆ ವೇಣು ಸ್ವಾಮಿ.

‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ವೇಣು ಸ್ವಾಮಿ ಅವರ ಬಳಿ ರಶ್ಮಿಕಾ ಮಂದಣ್ಣ ವಿಶೇಷ ಪೂಜೆ ಮಾಡಿಸಿದ್ದರು. ಆ ವೇಳೆಗೆ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾರ ಮದುವೆ ಸಹ ನಿಗದಿಯಾಗಿತ್ತು. ಆದರೆ ವೇಣು ಸ್ವಾಮಿಯ ಸಲಹೆಯಂತೆ ರಕ್ಷಿತ್ ಶೆಟ್ಟಿ ಜೊತೆ ಮದುವೆ ಮುರಿದುಕೊಂಡರು ರಶ್ಮಿಕಾ. ಈ ವಿಷಯವನ್ನು ಸ್ವತಃ ವೇಣು ಸ್ವಾಮಿ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ವಿವಾಹವಾದಾಗಲೂ ಸಹ ಈ ಇಬ್ಬರೂ ಆದಷ್ಟು ಬೇಗ ದೂರಾಗುತ್ತಾರೆ ಎಂದು ವೇಣು ಸ್ವಾಮಿ ಭವಿಷ್ಯ ನುಡಿದಿದ್ದರು. ಅದರಂತೆಯೇ ಆ ಇಬ್ಬರೂ ದೂರಾದರು. ಇತ್ತೀಚೆಗೆ ನಟಿ ನಿಧಿ ಅಗರ್ವಾಲ್, ವೇಣು ಸ್ವಾಮಿ ಬಳಿ ಪೂಜೆಗಳನ್ನು ಮಾಡಿಸಿದ್ದಾರೆ. ಅದರ ಬೆನ್ನಲ್ಲೆ ಪವನ್ ಕಲ್ಯಾಣ್ ಜೊತೆ ಒಂದು ಸಿನಿಮಾ ಹಾಗೂ ಪ್ರಭಾಸ್ ಜೊತೆ ಒಂದು ಸಿನಿಮಾದಲ್ಲಿ ನಟಿಸಲು ಅವರಿಗೆ ಅವಕಾಶ ದೊರಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!