AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dadasaheb Phalke Award 2024: ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್​​ ನಾಗ್​​

ಖ್ಯಾತ ನಟ ಅನಂತ್ ನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: ಭಾರತೀಯ ಹಾಗೂ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. ಸೆಪ್ಟೆಂಬರ್ 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಗೌರವ ಪ್ರದಾನ ನಡೆಯಲಿದೆ.

Dadasaheb Phalke Award 2024:  ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್​​ ನಾಗ್​​
ನಟ ಅನಂತ್ ನಾಗ್Image Credit source: Deccan Herald
ಪ್ರಸನ್ನ ಹೆಗಡೆ
|

Updated on:Sep 16, 2026 | 6:53 PM

Share

ಬೆಂಗಳೂರು/ನವದೆಹಲಿ, ಸೆಪ್ಟೆಂಬರ್​​ 16: ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಹಾಗೂ ಶ್ರೇಷ್ಠ ಸಿನಿ ಪಯಣಕ್ಕಾಗಿ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಹಿರಿಯ ನಟ ಅನಂತ್​​ ನಾಗ್​​ ಆಯ್ಕೆಯಾಗಿದ್ದಾರೆ. ಆ ಮೂಲಕ ಡಾ. ರಾಜ್​​ಕುಮಾರ್​​ ಅವರ ಬಳಿಕ ಈ ಪ್ರಶಸ್ತಿಗೆ ಭಾಜನರಾಗುತ್ತಿರುವ ಕನ್ನಡದ ಎರಡನೇ ನಟ ಎಂಬ ಹೆಗ್ಗಳಿಕೆಗೆ ಅನಂತ್​​ ನಾಗ್​​ ಭಾಜನರಾಗಿದ್ದಾರೆ. ಸೆಪ್ಟೆಂಬರ್ 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಗೌರವ ಪ್ರದಾನ ನಡೆಯಲಿದೆ.

ಕನ್ನಡ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ 1995ರ ಸಾಲಿನ (43ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ) ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ವರನಟ ಡಾ. ರಾಜ್‌ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿತ್ತು. ಇವರು ಈ ಪ್ರಶಸ್ತಿಯನ್ನು ಪಡೆದ ಮೊದಲ ಕನ್ನಡಿಗ ನಟ ಎಂಬ ಹೆಗ್ಗಳಿಕೆ ಪಡೆದಿದ್ದರು. ಅಲ್ಲಿಂದ ಇಲ್ಲಿಯವರೆಗೆ ಕನ್ನಡದ ಬೇರ್ಯಾವ ನಟರು ಕೂಡ ಈ ಪ್ರಶಸ್ತಿಗೆ ಭಾಜನರಾಗಿರಲಿಲ್ಲ. ಆದರೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ 2024ನೇ ಸಾಲಿನ ಗೌರವಕ್ಕೆ ಅನಂತ್​​ ನಾಗ್​​ ಅವರು ಭಾಜನರಾಗಿರೋದು ಕನ್ನಡಿಗರಿಗೆ ಸಂತಸದ ಜೊತೆಗೆ ಗೌರವವನ್ನೂ ಹೆಚ್ಚಿಸಿದೆ.

ಇದನ್ನೂ ಓದಿ: ಸೈಮಾ ವೇದಿಕೆಯಲ್ಲಿ ಕನ್ನಡದಲ್ಲೇ ಮಾತನಾಡಿದ ಧ್ರುವ ವಿಕ್ರಮ್ ; ರಿಷಬ್ ಶೆಟ್ಟಿ ಬಗ್ಗೆ ಮೆಚ್ಚುಗೆ

ಪ್ರಧಾನಿ ಮೋದಿಯಿಂದ ಅನಂತ್​​ ನಾಗ್​​ಗೆ ಅಭಿನಂದನೆ

ಅದ್ಭುತ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿರುವುದು ಸಂತಸದ ವಿಷಯ. ಹತ್ತಾರು ವರ್ಷಗಳಿಂದ ತಮ್ಮ ಸಹಜ ಅಭಿನಯ, ಅದ್ಭುತ ವೈವಿಧ್ಯತೆ ಹಾಗೂ ಪ್ರತಿಭೆಯ ಮೂಲಕ ಅವರು ಭಾರತೀಯ ಚಿತ್ರರಂಗ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗದ ಮೇಲೆ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ಅಪರೂಪದ ಆಳ ಮತ್ತು ನೈಜತೆಯನ್ನು ತುಂಬಿದ್ದಾರೆ. ನಿಜಕ್ಕೂ, ಅತ್ಯಂತ ಶ್ರೇಷ್ಠ ಕಲಾವಿದರೊಬ್ಬರಿಗೆ ಸಂದಿರುವ ಈ ಗೌರವ ಸಂಪೂರ್ಣವಾಗಿ ಅರ್ಹವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:59 pm, Wed, 16 September 26

Follow Us
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ