AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೋರ್ವ ಹಿರಿಯ ನಟ-ನಿರ್ದೇಶಕ ಕೊವಿಡ್​ಗೆ ಬಲಿ

ಲಲಿತ್​ ಮಗ ಹಾಗೂ ನಿರ್ದೆಶಕ ಕಣು ಬಹಲ್​ ಈ ವಿಚಾರವನ್ನು ಅಧಿಕೃತಗೊಳಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿರುವ ಕಣು, ನನ್ನ ತಂದೆ ಕಳೆದ ಒಂದು ವಾರದಿಂದ ಕೊರೊನಾದಿಂದ ಬಳಲುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಮತ್ತೋರ್ವ ಹಿರಿಯ ನಟ-ನಿರ್ದೇಶಕ ಕೊವಿಡ್​ಗೆ ಬಲಿ
ಲಲಿತ್​ ಬೇಲ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 24, 2021 | 4:20 PM

Share

ಕೊರೊನಾ ವೈರಸ್​ ತನ್ನ ರಣ ಕೇಕೆಯನ್ನು ಮುಂದುವರಿಸಿದೆ. ಮೊದಲನೇ ಅಲೆಗಿಂತ ಎರಡನೇ ಅಲೆ ಭೀಕರವಾಗಿ ಕಾಡುತ್ತಿದೆ. ಈಗಾಗಲೇ ಚಿತ್ರರಂಗದ ಸಾಕಷ್ಟು ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಈಗ ಹಿರಿಯ ನಟ ಹಾಗೂ ನಿರ್ದೆಶಕ ಲಲಿತ್​ ಬಹಲ್​ ಕೊರೊನಾಗೆ ಮೃತಪಟ್ಟಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಲಲಿತ್​ ಮಗ ಹಾಗೂ ನಿರ್ದೆಶಕ ಕಣು ಬಹಲ್​​ ಈ ವಿಚಾರವನ್ನು ಅಧಿಕೃತಗೊಳಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿರುವ ಕಣು, ನನ್ನ ತಂದೆ ಕಳೆದ ಒಂದು ವಾರದಿಂದ ಕೊರೊನಾದಿಂದ ಬಳಲುತ್ತಿದ್ದರು. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಸಾಕಷ್ಟು ತೊಂದರೆಗಳು ಇದ್ದವು. ಹೀಗಾಗಿ, ಅವರಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಹೀಗಾಗಿ, ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಲಲಿತ್​ ರಂಗಭೂಮಿ ಹಿನ್ನೆಲೆಯಿಂದ ಬಂದವರು. ನಂತರ ದೂರದರ್ಶನಕ್ಕಾಗಿ ಸಾಕಷ್ಟು ಟೆಲಿ ಫಿಲ್ಮ್​ಗಳನ್ನು ಅವರು ನಿರ್ಮಾಣ ಹಾಗೂ ನಿರ್ದೇಶನ ಮಾಡಿದರು. ತಿತ್ಲಿ, ಅಮೇಜಾನ್​ ಪ್ರೈಂ ವಿಡಿಯೋದ ಮೇಡ್​ ಇನ್​​ ಹೆವನ್​, ಜಡ್ಜ್​ಮೆಂಟಲ್​ ಹೈ ಕ್ಯಾ ಮುಂತಾದ ಪ್ರಾಜೆಕ್ಟ್​ಗಳಲ್ಲಿ ನಟಿಸಿದ್ದಾರೆ.

ಕೊರೊನಾ ಕಾರಣದಿಂದ ಚಿತ್ರರಂಗದ ಅನೇಕರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಹಿರಿಯ ನಟ ಕಿಶೋರ್ ನಂದಲಸ್ಕರ್ ಅವರು ಕೊವಿಡ್​ನಿಂದ ಮೃತರಾದರು. ಗುರುವಾರ (ಏ.22) ರಾತ್ರಿ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ನಿಧನರಾದರು. ಅಲ್ಲದೆ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನರಾಗಿದ್ದು ಬಾಲಿವುಡ್​ಗೆ ಮೇಲಿಂದ ಮೇಲೆ ಕಹಿ ಸುದ್ದಿ ಕೇಳಿಬರುತ್ತಿದೆ.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ