ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ

ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾದ ಹಿನ್ನೆಲೆ ನಗರದ ಕುಮಾರಸ್ವಾಮಿ ಲೇಔಟ್​ನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ
ಹಿರಿಯ ನಟ ಲೋಹಿತಾಶ್ವ
Edited By:

Updated on: Oct 10, 2022 | 7:21 AM

ಬೆಂಗಳೂರು: ಹಿರಿಯ ನಟ ಲೋಹಿತಾಶ್ವ ಟಿ.ಎಸ್ (Lohithaswa T. S.) ಅವರಿಗೆ ಹೃದಯಾಘಾತವಾದ ಹಿನ್ನೆಲೆ ನಗರದ ಕುಮಾರಸ್ವಾಮಿ ಲೇಔಟ್​ನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೋಹಿತಾಶ್ವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ ವೈದ್ಯರು ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು ದಿನ ಏನು ಹೇಳಲಾಗದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು,  ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 am, Mon, 10 October 22