SK Bhagavan: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ ಅವರು ಇಂದು (ಡಿ. 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ICUನಲ್ಲಿ ಭಗವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ (Bhagavan) ಅವರು ಇಂದು (ಡಿ. 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ICUನಲ್ಲಿ ಭಗವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಭಗವಾನ್ ಅವರಿಗೆ 89 ವರ್ಷ. ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಅಂದರೆ ನಮಗೆ ಅಷ್ಟು ಬೇಗ ಯಾರು ಅಂತ ಗೊತ್ತಾಗುವುದಿಲ್ಲ. ಚಿತ್ರರಂಗದಲ್ಲಿ ಇವರು ಭಗವಾನ್ ಎಂದೇ ಪ್ರಸಿದ್ಧರು. ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಿರ್ದೇಶಕರಾಗಿ, ನಿರ್ಮಾಪಕರಾಗಿ ಮತ್ತು ನಟರಾಗಿಯೂ ಇವರು ಗುರುತಿಸಿಕೊಂಡಿದ್ದಾರೆ. ತಮ್ಮ ಹದಿಹರಿಯದ ವಯಸ್ಸಿಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಬಳಿಕ 1956 ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರೀ ಅವರಿಗೆ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ 1966 ರಲ್ಲಿ ತೆರೆಕಂಡ ‘ಸಂಧ್ಯಾರಾಗ’ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದರು. ಬಳಿಕ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಪ್ರಾರಂಭಿಸಿದರು.
ಇದನ್ನೂ ಓದಿ: BBK9: ಅನುಪಮಾಗೆ ಬಿಗ್ ಬಾಸ್ ವಿಚಿತ್ರ ಶಿಕ್ಷೆ ನೀಡಿದ್ದಕ್ಕೆ ಹಿಂಗೆ ಬದಲಾಯ್ತು ಪ್ರಶಾಂತ್ ಸಂಬರ್ಗಿ ವೇಷ
ಕನ್ನಡ ಚಿತ್ರರಂಗದ ಮತ್ತೋರ್ವ ನಿರ್ದೇಶಕರಾದ ದೊರೈರಾಜ್ ಜೊತೆಗೂಡಿ ಚಿತ್ರಗಳನ್ನು ನಿರ್ದೇಶಿಸಿದರು. ಈ ಇಬ್ಬರ ಜೊಡಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ಭಗವಾನ್ ಅವರು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ: Baba Movie: ಮರು ಬಿಡುಗಡೆ ಆಗ್ತಿದೆ ರಜನಿಕಾಂತ್ ನಟನೆಯ ‘ಬಾಬಾ’; ಇದಕ್ಕೆ ‘ಕಾಂತಾರ’ ಯಶಸ್ಸು ಕಾರಣವೇ?
ಇವರ 30 ಚಿತ್ರಗಳಲ್ಲಿ ವರನಟ ಡಾ. ರಾಜಕುಮಾರ್ ನಾಯಕ ನಟರಾಗಿ ಅಭಿನಯಿಸಿರುವುದು ಇನ್ನೊಂದು ವಿಶೇಷ. ಅಷ್ಟೇ ಅಲ್ಲದೇ ಭಗವಾನ್ ಅವರು ವಿನಯ್ ರಾಘವಂದ್ರ ರಾಜ್‌ಕುಮಾರ್ ನಾಯಕತ್ವದ ‘ಅನಂತು ವರ್ಸಸ್ ನುಸ್ರತ್’ ಚಿತ್ರದಲ್ಲೂ ನಟಿಸಿದ್ದರು. ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ದೊರೈರಾಜರ ಮರಣದ ನಂತರ ಇವರು ನಿರ್ದೇಶನದಿಂದ ನಿವೃತ್ತಿ ಪಡೆದರು.
ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:52 pm, Mon, 5 December 22