AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Passes Away: ಗಾಯನ ನಿಲ್ಲಿಸಿದ ಭಾರತ ರತ್ನ ಲತಾ ಮಂಗೇಶ್ಕರ್

Lata Mangeshkar: ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

Lata Mangeshkar Passes Away: ಗಾಯನ ನಿಲ್ಲಿಸಿದ ಭಾರತ ರತ್ನ ಲತಾ ಮಂಗೇಶ್ಕರ್
ಗಾಯಕಿ ಲತಾ ಮಂಗೇಶ್ಕರ್
TV9 Web
| Edited By: |

Updated on:Feb 06, 2022 | 9:50 AM

Share

ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಕೊರೊನಾ (Corona) ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಅವರು, ವೆಂಟಿಲೇಟರ್​ನಿಂದ ಹೊರಬಂದಿದ್ದರು. ಆದರೆ ನಿನ್ನೆ (ಶನಿವಾರ) ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಎಎನ್​ಐಗೆ ಮಾಹಿತಿ ತಿಳಿಸಿದ್ದಾರೆ. ಲತಾ ಅವರ ನಿಧನದಿಂದ ದೇಶದ ಗಾಯನ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ.

ಎಎನ್​ಐ ಹಂಚಿಕೊಂಡಿರುವ ಟ್ವೀಟ್:

ಲತಾ ಅವರು 1929ರ ಸೆಪ್ಟೆಂಬರ್ 28ರಂದು ಜನಿಸಿದ್ದರು. ಅವರ ಮೊದಲ ಹೆಸರು ಹೇಮಾ ಮಂಗೇಶ್ಕರ್ ಎಂದಾಗಿತ್ತು. 36 ಕ್ಕೂ ಅಧಿಕ ಭಾಷೆಗಳಲ್ಲಿ ಹಾಡಿದ ಕೀರ್ತಿ ಲತಾ ಅವರದ್ದು. ಸಾವಿರಕ್ಕೂ ಅಧಿಕ ಹಿಂದಿ ಚಿತ್ರಗಳಿಗೆ ಅವರು ಹಿನ್ನೆಲೆ ಗಾಯನ ಮಾಡಿದ್ದರು. ಸಂಗೀತ ನಿರ್ದೇಶಕರಾಗಿಯೂ ಲತಾ ಅವರು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು.

ಲತಾ ಮಂಗೇಶ್ಕರ್ ಅವರ ಸಾಧನೆಗೆ ಭಾರತ ಸರ್ಕಾರ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು 2001ರಲ್ಲಿ ಪ್ರದಾನ ಮಾಡಿತ್ತು. ಚಿತ್ರರಂಗದಲ್ಲಿನ ಸೇವೆಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು 1989ರಲ್ಲಿ ಲತಾ ಅವರು ಪಡೆದಿದ್ದರು. ಇವುಗಳಲ್ಲದೇ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಲತಾ ಮಂಗೇಶ್ಕರ್ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ.

Published On - 9:40 am, Sun, 6 February 22

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!