AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ತಮಿಳಿನ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ; ಕನ್ನಡದಲ್ಲೂ ನಟನೆ

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಖ್ಯಾತ ಚಿತ್ರಕಥೆಗಾರ ಹಾಗೂ ನಟ ಕೆ. ಭಾಗ್ಯರಾಜ್ 73ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಮಧ್ಯಮ ವರ್ಗದ ಕೌಟುಂಬಿಕ ಕಥೆಗಳಿಗೆ ಹೆಸರಾಗಿದ್ದ ಅವರು, 'ಮುಂದಾನೈ ಮುಡಿಚ್ಚು' ಅಂತಹ ಅನೇಕ ಅದ್ಭುತ ಚಿತ್ರಗಳನ್ನು ನೀಡಿದ್ದಾರೆ. ಅವರ ನಿಧನ ತಮಿಳು ಸಿನಿಮಾದ ಒಂದು ಸುಂದರ ಯುಗಕ್ಕೆ ಅಂತ್ಯ ತಂದಿದೆ.

ಹೃದಯಾಘಾತದಿಂದ ತಮಿಳಿನ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ; ಕನ್ನಡದಲ್ಲೂ ನಟನೆ
ಭಾಗ್ಯರಾಜ್
ರಾಜೇಶ್ ದುಗ್ಗುಮನೆ
|

Updated on: Jun 27, 2026 | 10:42 AM

Share

ಮುಖ್ಯಾಂಶಗಳು

  • ಖ್ಯಾತ ತಮಿಳು ನಿರ್ದೇಶಕ, ಚಿತ್ರಕಥೆಗಾರ ಕೆ. ಭಾಗ್ಯರಾಜ್ ನಿಧನ
  • 73ನೇ ವಯಸ್ಸಿಗೆ ಸಂಭವಿಸಿತು ಹೃದಯಾಘಾತ
  • ಕೆ. ಭಾಗ್ಯರಾಜ್ ಅವರ ಅದ್ಭುತ ಕೊಡುಗೆಗಳ ನೆನಪು

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಚಿತ್ರಕಥೆಗಾರ, ನಟ ಕೆ. ಭಾಗ್ಯರಾಜ್ ಶನಿವಾರ (ಜೂನ್ 27)ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿತ್ತು. ಭಾಗ್ಯರಾಜ್​​ಗೆ 73 ವರ್ಷ ವಯಸ್ಸಾಗಿತ್ತು. ಅವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ತಂದಿದೆ. ಅವರು ತಮ್ಮ ಅದ್ಭುತ ಕಥೆಗಳ ಮೂಲಕ ಜನಪ್ರಿಯರಾಗಿದ್ದರು. ಮಧ್ಯಮ ವರ್ಗದ ಕೌಟುಂಬಿಕ ಸಿನಿಮಾಗಳನ್ನು ನೀಡಿ ಅವರು ಪ್ರಸಿದ್ಧರಾಗಿದ್ದರು. ಅವರ ನಿಧನದಿಂದ ತಮಿಳು ಸಿನಿಮಾದ ಒಂದು ಸುಂದರ ಯುಗ ಅಂತ್ಯವಾಗಿದೆ.

ಭಾಗ್ಯರಾಜ್ ಅವರ ಪತ್ನಿ ಪೂರ್ಣಿಮಾ ಮಾಜಿ ನಟಿ. ಇವರ ಮಕ್ಕಳ ಹೆಸರು ಶಂತನು ಮತ್ತು ಶರಣ್ಯ. ಮಗ ಶಂತನು ಭಾಗ್ಯರಾಜ್ ಕೂಡ ಚಿತ್ರರಂಗದಲ್ಲಿ ನಟನಾಗಿದ್ದಾರೆ. ಅವರು ಕೆಲವೇ ದಿನಗಳ ಹಿಂದೆ ಗೋವಾಕ್ಕೆ ಹೋಗಿದ್ದರು. ಅಲ್ಲಿ ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಮಗಳ ಮದುವೆ ನಡೆದಿತ್ತು. ಆ ಮದುವೆ ಸಮಾರಂಭದಲ್ಲಿ ಭಾಗ್ಯರಾಜ್ ಪಾಲ್ಗೊಂಡಿದ್ದರು.

ಭಾಗ್ಯರಾಜ್ ಹಿನ್ನೆಲೆ

ಭಾಗ್ಯರಾಜ್ ಅವರ ಪೂರ್ಣ ಹೆಸರು ಕೃಷ್ಣಸ್ವಾಮಿ ಭಾಗ್ಯರಾಜ್ ಆಗಿದೆ. ಅವರು ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಜನಿಸಿದ್ದರು. ಆರಂಭದಲ್ಲಿ ಅವರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಪ್ರಖ್ಯಾತ ನಿರ್ದೇಶಕ ಭಾರತೀರಾಜ ಅವರ ಬಳಿ ಅವರು ಸಿನಿಮಾ ಕಲೆ ಕಲಿತಿದ್ದರು. ನಂತರ ಅವರು ಸ್ವತಂತ್ರ ನಿರ್ದೇಶಕರಾಗಿ ದೊಡ್ಡ ಯಶಸ್ಸು ಕಂಡರು. ತಮಿಳು ಚಿತ್ರರಂಗದಲ್ಲಿ ಅವರು ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿದ್ದರು. 80 ಮತ್ತು 90ರ ದಶಕದಲ್ಲಿ ಅವರ ಸಿನಿಮಾಗಳು ಅಬ್ಬರಿಸಿದ್ದವು. ಅವರ ಸಾಮಾಜಿಕ ಕಥೆಗಳು ಜನರಿಗೆ ತುಂಬಾ ಹತ್ತಿರವಾಗಿದ್ದವು.

ಭಾಗ್ಯರಾಜ್ ಅವರು ತಮ್ಮ ವೃತ್ತಿಜೀವನದಲ್ಲಿ 25 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹಾಗೆಯೇ ಅವರು 75 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರನ್ನು ಚಿತ್ರರಂಗದ ಅತ್ಯುತ್ತಮ ಚಿತ್ರಕಥೆಗಾರ ಎಂದು ಕರೆಯಲಾಗುತ್ತದೆ. ಅವರ ‘ಮುಂದಾನೈ ಮುಡಿಚ್ಚು’ ಸಿನಿಮಾ ದೊಡ್ಡ ಹಿಟ್ ಆಗಿತ್ತು. ಅದರೊಂದಿಗೆ ‘ಅಂದ 7 ನಾಟ್ಕಳ್’ ಮತ್ತು ‘ಡಾರ್ಲಿಂಗ್ ಡಾರ್ಲಿಂಗ್ ಡಾರ್ಲಿಂಗ್’ ಚಿತ್ರಗಳು ಕ್ಲಾಸಿಕ್ ಎನಿಸಿಕೊಂಡಿವೆ.

ಇದನ್ನೂ ಓದಿ: ‘ಬಿಲ್ಲಾ ರಂಗ ಭಾಷಾ’ ಶೂಟಿಂಗ್ ಶುರು ಯಾವಾಗ? ಉತ್ತರ ಕೊಟ್ಟ ನಿರ್ದೇಶಕ

ಭಾಗ್ಯರಾಜ್ ಅವರಿಗೆ ಕನ್ನಡದ ಜೊತೆಯೂ ಸಣ್ಣ ನಂಟಿದೆ. 2015ರಲ್ಲಿ ಬಂದ ಕನ್ನಡದ ‘ರೆಡ್ ಅಲರ್ಟ್’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. 2025ರಲ್ಲಿ ಬಂದ ‘ಕುಬೇರ’ ಅವರ ನಟನೆಯ ಕೊನೆಯ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ