AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ

ತಮಿಳಿನ ಹಿರಿಯ ನಿರ್ದೇಶಕ, ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ 72ನೇ ವಯಸ್ಸಿಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಬರಹಗಾರ, ನಿರ್ಮಾಪಕ, ನಟ, ನಿರ್ದೇಶಕರಾಗಿ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು. ಕಮಲ್ ಹಾಸನ್ ಜೊತೆಗೂ ಕೆಲಸ ಮಾಡಿದ್ದ ಶ್ರೀನಿವಾಸನ್ ಥ್ರಿಲ್ಲರ್ ಮತ್ತು ಹಾರರ್ ಚಿತ್ರಗಳಿಗೆ ಹೆಸರುವಾಸಿಯಾಗಿದ್ದರು.

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ
ಶ್ರೀನಿವಾಸನ್
ರಾಜೇಶ್ ದುಗ್ಗುಮನೆ
|

Updated on:Mar 12, 2026 | 7:41 AM

Share

ತಮಿಳಿನ ಹಿರಿಯ ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ ಅವರು ನಿಧನ ಹೊಂದಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಅವರು ಕೊನೆಯುಸಿರು ಎಳೆದಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಮಾರು ಎರಡೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು.

1987ರಲ್ಲಿ ರಿಲೀಸ್ ಆದ ‘ಇವರ್ಗಳ್ ವರುಂಗಳಾ ತೂಂಗಲ್’ ಸಿನಿಮಾದಲ್ಲಿ ಬರಹಗಾರನಾಗಿ ಕೆಲಸ ಮಾಡಿ ಚಿತ್ರರಂಗಕ್ಕೆ ಶ್ರೀನಿವಾಸ ಕಾಲಿಟ್ಟರು. ಈ ಚಿತ್ರವನ್ನು ಅವರು ನಿರ್ಮಾಣವನ್ನೂ ಮಾಡಿದ್ದರು. ಆ ಬಳಿಕ ಕಮಲ್ ಹಾಸನ್ ನಟನೆಯ ‘ನಲಯ ಮಣಿದನ್’ ಸಿನಿಮಾದಲ್ಲಿ ಶ್ರೀನಿವಾಸ್ ನಟಿಸಿದರು. ಈ ಚಿತ್ರಕ್ಕೆ ಅವರು ನಿರ್ಮಾಪಕರೂ ಆಗಿದ್ದರು. 1991ರಲ್ಲಿ ಬಂದ ‘ಜನ್ಮ ನಕ್ಷತ್ರಮ್’ ಚಿತ್ರವನ್ನು ಡೈರೆಕ್ಟ್ ಮಾಡುವ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ಈ ಚಿತ್ರ ಸಸ್ಪೆನ್ಸ್ ಹಾರರ್ ಥೀಮ್ ಶೈಲಿಯಲ್ಲಿ ಮೂಡಿ ಬಂದಿತ್ತು. ಕಮಲ್ ಹಾಸನ್ ಅವರ ‘ಶೂರ ಸಂಹಾರ’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದರು.

ಶ್ರೀನಿವಾಸ್ ಅವರು ಥ್ರಿಲ್ಲರ್ ಹಾಗೂ ಹಾರರ್ ಸಿನಿಮಾಗಳನ್ನು ಮಾಡುವ ಮೂಲಕ ಫೇಮಸ್ ಆಗಿದ್ದರು. ಶ್ರೀನಿವಾಸ್ 2011ರಲ್ಲಿ ‘ಆಡುದಾದು’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ಆ ಬಳಿಕ ಅವರು ಚಿತ್ರರಂಗದ ಕಡೆ ಮುಖ ಮಾಡಿಲ್ಲ.

ಇದನ್ನೂ ಓದಿ: ಉತ್ತರದವರಾದರೂ ಮೊನಾಲಿಸಾ ಕೇರಳದಲ್ಲಿ ಮದುವೆ ಆಗಿದ್ದೇಕೆ? ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಏನು? ಶ್ರೀನಿವಾಸ್ ಅವರು ಸಿನಿಮಾ ಕೆಲಸ ಬಿಟ್ಟ ಬಳಿಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದರು. ಅವರು ತಮ್ಮದೇ ಆದ ಆಶ್ರಮ ಆರಂಭಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರು ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ. ಮಗುವನ್ನು ದತ್ತು ಪಡೆದು ಅವರ ಜೊತೆ ವಾಸವಿದ್ದರು. ಅವರು ಇಲ್ಲಿಯೇ ನಿಧನ ಹೊಂದಿದ್ದು, ಅಂತಿಮ ಸಂಸ್ಕಾರ ಬೆಂಗಳೂರಿನಲ್ಲೇ ನಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:41 am, Thu, 12 March 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!