AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ನಲ್ಲೂ ಸಿಎಂ ವಿಜಯ್ ಜೊತೆ ಕಾಣಿಸಿಕೊಂಡ ತ್ರಿಷಾ; ವಿಡಿಯೋ ವೈರಲ್

ತಮಿಳುನಾಡಿನ ಸಿಎಂ ಸಿ. ಜೋಸೆಫ್ ವಿಜಯ್ ಅವರು ಎಲ್ಲೇ ಹೋದರೂ ಅಲ್ಲಿ ನಟಿ ತ್ರಿಷಾ ಕೃಷ್ಣನ್ ಕೂಡ ಇರುತ್ತಾರೆ ಎಂಬಂತಾಗಿದೆ. ತಮಿಳುನಾಡಿನಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್‌ನಲ್ಲೂ ಅದು ಸಾಬೀತಾಗಿದೆ. ಕಾರ್ ರೇಸಿಂಗ್ ಪಂದ್ಯಾವಳಿಗೆ ಚಾಲನೆ ನೀಡಲು ವಿಜಯ್ ಅವರು ಇಂಗ್ಲೆಂಡ್‌ಗೆ ತೆರಳಿದ್ದರು. ಅವರಿಗೆ ತ್ರಿಷಾ ಕೂಡ ಸಾಥ್ ನೀಡಿದರು.

ಇಂಗ್ಲೆಂಡ್‌ನಲ್ಲೂ ಸಿಎಂ ವಿಜಯ್ ಜೊತೆ ಕಾಣಿಸಿಕೊಂಡ ತ್ರಿಷಾ; ವಿಡಿಯೋ ವೈರಲ್
Thalapathy Vijay, Trisha Krishnan Image Credit source: X/@Pokkiri_Victor
ಮದನ್​ ಕುಮಾರ್​
|

Updated on: Sep 13, 2026 | 10:41 AM

Share

ಇಂಗ್ಲೆಂಡ್‌ನ ಪ್ರಸಿದ್ಧ ಸಿಲ್ವರ್‌ಸ್ಟೋನ್ ರೇಸ್‌ಟ್ರ್ಯಾಕ್‌ನಲ್ಲಿ ಇತ್ತೀಚೆಗೆ ನಡೆದ ‘ಲಿ ಮಾನ್ಸ್’ ಕಾರ್ ರೇಸಿಂಗ್ ಪಂದ್ಯಾವಳಿಯಲ್ಲಿ ತಮಿಳು ಚಿತ್ರರಂಗದ ಸ್ಟಾರ್​ ನಟರ ಅಪರೂಪದ ಸಮಾಗಮ ಕಂಡುಬಂತು. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ನಟ ಸಿ. ಜೋಸೆಫ್ ವಿಜಯ್ ಅವರು ಈ ರೇಸ್‌ಗೆ ಅಧಿಕೃತ ಚಾಲನೆ ನೀಡಿದ್ದು, ನಟ ಅಜಿತ್ ಕುಮಾರ್ ಅವರು ತಮ್ಮ ತಂಡದೊಂದಿಗೆ ರೇಸಿಂಗ್‌ನಲ್ಲಿ ಭಾಗವಹಿಸಿದ್ದರು. ಈ ಐತಿಹಾಸಿಕ ಕ್ಷಣದಲ್ಲಿ ವಿಜಯ್ ಜೊತೆ ನಟಿ ತ್ರಿಷಾ ಕೃಷ್ಣನ್ ಕೂಡ ಕಾಣಿಸಿಕೊಂಡಿದ್ದು ಈಗ ಚರ್ಚೆಗೆ ಕಾರಣ ಆಗಿದೆ.

ವಿಜಯ್ ಮತ್ತು ಅಜಿತ್ ಸಿಲ್ವರ್‌ಸ್ಟೋನ್‌ನಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರೇಸ್‌ಟ್ರ್ಯಾಕ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ರೇಸ್ ಆರಂಭಕ್ಕೂ ಮುನ್ನ ವಿಜಯ್ ಮತ್ತು ಅಜಿತ್ ಟೆಂಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ನಟಿ ತ್ರಿಷಾ ಕೃಷ್ಣನ್ ಕೂಡ ಅವರೊಂದಿಗೆ ಸೇರಿಕೊಂಡರು. ಈ ದೃಶ್ಯವನ್ನು ಕಂಡ ಅಭಿಮಾನಿಯೊಬ್ಬರು ವಿಡಿಯೋ ಮಾಡಿ, ‘ಅಜಿತ್ ಕುಮಾರ್ ಮತ್ತು ದಳಪತಿ ಟೆಂಟ್‌ನಲ್ಲಿ ತ್ರಿಷಾ ಪ್ರತ್ಯಕ್ಷ’ ಎಂದು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ರೇಸ್ ನಡೆಯುತ್ತಿದ್ದ ಸಮಯದಲ್ಲಿ ವಿಜಯ್, ತ್ರಿಷಾ ಮತ್ತು ಆಧವ್ ಅರ್ಜುನ್ ಜೊತೆಯಾಗಿ ಪ್ರೇಕ್ಷಕರ ಗ್ಯಾಲರಿಯಲ್ಲಿ ನಿಂತು ಅಜಿತ್ ಅವರ ರೇಸಿಂಗ್ ಸಾಹಸವನ್ನು ವೀಕ್ಷಿಸಿದರು. ಈ ವೇಳೆ ವಿಜಯ್ ಜೀನ್ಸ್, ಕಪ್ಪು ಟೀ-ಷರ್ಟ್ ಹಾಗೂ ಬ್ರೌನ್ ಜಾಕೆಟ್ ಧರಿಸಿದ್ದರೆ, ತ್ರಿಷಾ ಜೀನ್ಸ್, ಬಿಳಿ ಟೀ-ಷರ್ಟ್ ಮತ್ತು ಬ್ರೌನ್ ಜಾಕೆಟ್‌ನಲ್ಲಿ ಮಿಂಚಿದರು. ವೈರಲ್ ಆಗಿರುವ ವಿಡಿಯೋಗೆ ಜನರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇಲ್ಲಿದೆ ವೈರಲ್ ವಿಡಿಯೋ:

ಇಂಗ್ಲೆಂಡ್‌ನಲ್ಲಿ ವಿಜಯ್ ಮತ್ತು ಅಜಿತ್ ಪರಸ್ಪರ ಭೇಟಿಯಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ರೇಸಿಂಗ್ ಉಡುಪಿನಲ್ಲಿದ್ದ ಅಜಿತ್ ಅವರತ್ತ ನಗುತ್ತಾ ಓಡೋಡಿ ಬಂದ ವಿಜಯ್, ಅವರನ್ನು ತಬ್ಬಿಕೊಂಡು ಶುಭಾಶಯ ಕೋರಿದರು. ರೇಸ್ ಆರಂಭಕ್ಕೂ ಮುನ್ನ ಇಬ್ಬರೂ ನಟರು ಬಹಳ ಹೊತ್ತು ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಹರಟಿದರು. ಈ ವೇಳೆ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಟಿವಿಕೆ ಎಂದು ಘೋಷಣೆ ಕೂಗಲು ಪ್ರಾರಂಭಿಸಿದಾಗ, ವಿಜಯ್ ಅವರು ‘ನನಗಲ್ಲ, ಅಜಿತ್‌ಗೆ ಪ್ರೋತ್ಸಾಹ ನೀಡಿ’ ಎಂದು ಅಭಿಮಾನಿಗಳಿಗೆ ಮನವಿ ಮಾಡಿದರು.

ರೇಸ್ ಪೂರ್ಣಗೊಂಡ ನಂತರ ವಿಜಯ್ ಅವರು ತಮ್ಮ ಟಿವಿಕೆ ಪಕ್ಷದ ಹಳದಿ ಮತ್ತು ಕೆಂಪು ಬಣ್ಣದ ಕಸ್ಟಮೈಸ್ಡ್ ರೇಸಿಂಗ್ ಸೂಟ್ ಧರಿಸಿ, ಅಜಿತ್ ಕುಮಾರ್ ಅವರೊಂದಿಗೆ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಫೋಟೋಗಳಿಗೆ ಪೋಸ್ ನೀಡಿದರು.

ಇದನ್ನೂ ಓದಿ: ತ್ರಿಷಾಗೆ ವಿಜಯ್ ಸೆಲ್ಯೂಟ್? ಡಿಎಂಕೆ ಕಡೆಯಿಂದ ಬಂತು ವಾಗ್ದಾಳಿ

ಇದೇ ವೇಳೆ ವಿಜಯ್ ಆಗಮನದ ಬಗ್ಗೆ ಮಾತನಾಡಿದ ಅಜಿತ್ ಕುಮಾರ್, ‘ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಸಿಲ್ವರ್‌ಸ್ಟೋನ್‌ಗೆ ಆಗಮಿಸಿ ನಮಗೆ ಬೆಂಬಲ ನೀಡಿದ ತಮಿಳುನಾಡಿನ ಗೌರವಾನ್ವಿತ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನಾವು ಕಳೆದ 34 ವರ್ಷಗಳಿಂದ ಚಿತ್ರರಂಗದಲ್ಲಿ ಸಹೋದ್ಯೋಗಿಗಳಾಗಿದ್ದೇವೆ. ಅವರು ಇಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ನನಗೆ ಅತ್ಯಂತ ಸಂತಸ ತಂದಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ