AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದು ಸಂಕಷ್ಟಕ್ಕೆ ಸಿಲುಕಿದ ನಟಿ ನಯನತಾರಾ-ವಿಘ್ನೇಶ್​

ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದು ಸಂಕಷ್ಟಕ್ಕೆ ಸಿಲುಕಿದ ನಟಿ ನಯನತಾರಾ-ವಿಘ್ನೇಶ್​
ವಿಘ್ನೇಶ್​-ನಯನತಾರಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 10, 2022 | 5:46 PM

Share

ನಯನತಾರಾ (Nayanthara) ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಇವರು ಮಗು ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ಒಂದಷ್ಟು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ (Vignesh Shivan) ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ ಜಾರಿಗೆ ತರಲಾಗಿತ್ತು. ಈ ಕಾಯ್ದೆ ಪ್ರಕಾರ ಬಾಡಿಗೆ ತಾಯಿಯು ಆರೋಗ್ಯವಾಗಿರಬೇಕು ಹಾಗೂ ಆಕೆಯ ವಯಸ್ಸು 21-35ರ ಅಂತದರಲ್ಲಿ ಇರಬೇಕು. ಆಕೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಬಹುದು. ಇದರ ಜತೆಗೆ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಅಂದರೆ ಮಗುವನ್ನು ಹೆರುವ ಮಹಿಳೆ ದಂಪತಿಯಿಂದ ಹಣ ಪಡೆಯುವಂತಿಲ್ಲ.  ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಶಿವನ್ ಪಾಲಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.

ಇದನ್ನೂ ಓದಿ
Image
Nayanthara: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು
Image
ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ
Image
Priyanka Chopra: ಬಾಡಿಗೆ ತಾಯಿ ಮೂಲಕ ಮಗು ಪಡೆದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್
Image
Mimi Trailer: ‘ಮಿಮಿ’ ಟ್ರೇಲರ್​ ನೋಡಿದರೆ ಸಾಕು, ಕಣ್ಣಿಗೆ ಕಟ್ಟುತ್ತದೆ ಬಾಡಿಗೆ ತಾಯಿಯ ಕಷ್ಟ

ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ನಟಿಯಾಗಿ ನಯನತಾರಾ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅದೇ ರೀತಿ, ವಿಘ್ನೇಶ್​ ಶಿವನ್​ ಅವರು ನಿರ್ದೇಶಕನಾಗಿ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯಬಹುದು ಎಂಬ ಅನುಮಾನ ಮೊದಲೇ ಮೂಡಿತ್ತು. ಆ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡಿದ್ದವು. ಆ ಅನುಮಾನ ಈಗ ನಿಜವಾಗಿದೆ. ಈ ಮಧ್ಯೆ ಅವರು ಸಮಸ್ಯೆಗೆ ಸಿಲುಕಿದ್ದಾರೆ.

ಬಾಡಿಗೆ ತಾಯಿ ಮೂಲಕ ಜನಿಸಿರುವ ಈ ಅವಳಿ ಗಂಡು ಮಕ್ಕಳಿಗೆ ಉಯಿರ್​ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್​ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್​ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್​ ಶಿವನ್​ ಪೋಸ್ಟ್​ ಮಾಡಿದ್ದರು.

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ