ರಾಜಕೀಯ ಪ್ರವೇಶದ ಬಗ್ಗೆ ಅಭಿಮಾನಿಗಳೊಟ್ಟಿಗೆ ಚರ್ಚೆ: ಭರ್ಜರಿ ಎಂಟ್ರಿ ಕೊಡಲಿರುವ ವಿಜಯ್

Thalapathy Vijay: ತಮಿಳು ಸ್ಟಾರ್ ನಟ ವಿಜಯ್ ರಾಜಕೀಯ ಪ್ರವೇಶಿಸುವುದು ಬಹುತೇಕ ಖಾತ್ರಿಯಾಗಿದೆ. ರಾಜಕೀಯ ಪ್ರವೇಶದ ಬಗ್ಗೆ ವಿಜಯ್, ತಮ್ಮ ಅಭಿಮಾನಿಗಳೊಟ್ಟಿಗೆ ಚರ್ಚೆ ಮಾಡಿದ್ದಾರೆ.

ರಾಜಕೀಯ ಪ್ರವೇಶದ ಬಗ್ಗೆ ಅಭಿಮಾನಿಗಳೊಟ್ಟಿಗೆ ಚರ್ಚೆ: ಭರ್ಜರಿ ಎಂಟ್ರಿ ಕೊಡಲಿರುವ ವಿಜಯ್
ದಳಪತಿ ವಿಜಯ್
Follow us
ಮಂಜುನಾಥ ಸಿ.
|

Updated on: Jul 11, 2023 | 9:16 PM

ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ರಾಜಕೀಯಕ್ಕೆ ಬರುವುದು ಬಹುತೇಕ ಖಾತ್ರಿಯಾಗಿದೆ. ಇಷ್ಟು ದಿನ ಕೇವಲ ಗಾಳಿಸುದ್ದಿಯಾಗಿದ್ದ ವಿಜಯ್​ರ ರಾಜಕೀಯ ಎಂಟ್ರಿಗೆ ಇದೀಗ ಸ್ಪಷ್ಟರೂಪವೊಂದು ದೊರೆತಿದೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ವಿಜಯ್, ತಮ್ಮ ಅಭಿಮಾನಿ ಬಳಗವಾದ ವಿಜಯ್ ಮಕ್ಕಳ್ ಇಯಕ್ಕಂ (Vijay Makkal iyakkam) ಸದಸ್ಯರೊಟ್ಟಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಹಾಜರಿದ್ದ ವಿಜಯ್​ರ ಅಭಿಮಾನಿಗಳು (Fan) ಕೆಲವರು ಸಭೆಯಲ್ಲಿ ನಡೆದ ಚರ್ಚೆಯ ವಿಷಯಗಳನ್ನು ಬಹಿರಂಗಗೊಳಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ವಿಜಯ್ ಮಕ್ಕಳ್ ಇಯಕ್ಕಂನ ಸದಸ್ಯರೊಟ್ಟಿಗೆ ವಿಜಯ್ ಸಭೆ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಜಯ್ ತಮ್ಮ ರಾಜಕೀಯ ಎಂಟ್ರಿ ಬಗ್ಗೆ ಸದಸ್ಯರೊಟ್ಟಿಗೆ ಮಾತನಾಡಿ, ಕಾರ್ಯಸೂಚಿಯನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಭಾಗವಹಿಸಿದ್ದವರು ಮಾಧ್ಯಮಗಳೊಟ್ಟಿಗೆ ಮಾತನಾಡಿ ವಿಜಯ್ ರಾಜಕೀಯಕ್ಕೆ ಪ್ರವೇಶಿಸುವುದು ಪಕ್ಕಾ ಎಂದಿದ್ದು, ರಾಜಕೀಯ ಪ್ರವೇಶದ ಬಳಿಕ ಸಿನಿಮಾಗಳಲ್ಲಿ ನಟಿಸದೇ ಇರಲು ವಿಜಯ್ ನಿರ್ಧರಿಸಿರುವುದಾಗಿಯೂ ಹೇಳಿದ್ದಾರೆ.

ವಿಜಯ್​ ರಾಜಕೀಯ ಪ್ರವೇಶಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ ಆದರೆ ರಾಜಕೀಯ ಪ್ರವೇಶಕ್ಕೂ ಮುನ್ನ ಜಿಲ್ಲೆ ಹಾಗೂ ತಾಲ್ಲೂಕು ಹಂತದಲ್ಲಿ ಸಂಘಟನೆ ಮಾಡಬೇಕಾದ ಅವಶ್ಯಕತೆ ಹಾಗೂ ಅದರ ರೂಪು ರೇಷೆಗಳ ಬಗ್ಗೆ ಚರ್ಚೆ ಮಾಡಲಾಯಿತು ಎನ್ನಲಾಗಿದೆ. ರಾಜಕೀಯ ಪ್ರವೇಶದ ಬಗ್ಗೆ ವಿಜಯ್ ಅವರು ರಜನೀಕಾಂತ್​ ಜೊತೆಗೂ ಚರ್ಚೆ ನಡೆಸಿದ್ದು ರಜನೀಕಾಂತ್, ಅಜಿತ್ ಹಾಗೂ ಇನ್ನಿತರೆ ಕೆಲವು ನಾಯಕ ನಟರು ವಿಜಯ್​ರ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರಂತೆ.

ಇದನ್ನೂ ಓದಿ:ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಆರಂಭದಲ್ಲಿಯೇ ಟೀಕೆ

ವಿಜಯ್ ಪ್ರಸ್ತುತ ಲಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಆರಂಭಗೊಂಡಿವೆ. ಸಿನಿಮಾವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದು ಸಿನಿಮಾದಲ್ಲಿ ಸಂಜಯ್ ದತ್ ಸಹ ನಟಿಸಿದ್ದಾರೆ. ಈ ಸಿನಿಮಾದ ಬಳಿಕ ಇನ್ನೊಂದು ಸಿನಿಮಾದಲ್ಲಿ ಮಾತ್ರವೇ ವಿಜಯ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಅದರ ಬಳಿಕ ವಿಜಯ್ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

ವಿಜಯ್​ರಿಗೆ ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದಾರೆ. ವಿಜಯ್​ರ ವಿಜಯ್ ಮಕ್ಕಳ್ ಇಯಕ್ಕಂನ ವತಿಯಿಂದ ಕಳೆದ ಜಿಲ್ಲಾ ಹಾಗೂ ತಾಲ್ಲೂಕು ಚುನಾವಣೆಗಳನ್ನು ಕೆಲವು ಸದಸ್ಯರು ಎದುರಿಸಿ ಗೆಲುವನ್ನು ಸಹ ಸಾಧಿಸಿದ್ದಾರೆ. ವಿಜಯ್​ ರಾಜಕೀಯ ಪ್ರವೇಶ ಮಾಡಬೇಕು ಎಂದು ವಿಜಯ್​ರ ಅಭಿಮಾನಿಗಳು ಹಲವು ವರ್ಷಗಳಿಂದಲೂ ಕೇಳುತ್ತಲೇ ಇದ್ದರು ಆದರೆ ಈಗ ವಿಜಯ್ ಮನಸ್ಸು ಮಾಡಿದ್ದಾರೆ. ವಿಜಯ್​ರ ತಂದೆ ಈ ಹಿಂದೆ ವಿಜಯ್​ರ ಹೆಸರಿನಲ್ಲಿ ರಾಜಕೀಯ ಪಕ್ಷದ ನೊಂದಣಿ ಮಾಡಿಸಿದ್ದರು. ಆದರೆ ತಮಗೂ ಆ ರಾಜಕೀಯ ಪಕ್ಷಕ್ಕೂ ಸಂಬಂಧವಿಲ್ಲವೆಂದು ವಿಜಯ್ ಹೇಳಿದ್ದರು. ಈಗ ಹೊಸ ಪಕ್ಷದ ಮೂಲಕ ರಾಜಕೀಯ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ ವಿಜಯ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್