AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡರು. ಆ ಬಳಿಕ ಅವರು ಮತ್ತೆ ಒಂದಾಗಿದ್ದು ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಮೊದಲ ಸಿನಿಮಾ ಹಿಟ್ ಆದರೆ, ಎರಡನೇ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಈಗ ಈ ಜೋಡಿ ಮೂರನೇ ಬಾರಿಗೆ ಒಂದಾಗುತ್ತಿದೆ.

ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ
ರಶ್ಮಿಕಾ-ವಿಜಯ್
ರಾಜೇಶ್ ದುಗ್ಗುಮನೆ
|

Updated on: Sep 26, 2023 | 8:05 AM

Share

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ ಅವರದ್ದು ಹಿಟ್ ಜೋಡಿ ಎಂದು ಕರೆಸಿಕೊಂಡಿದೆ. ಎರಡು ಸಿನಿಮಾಗಳಲ್ಲಿ ಇವರು ಒಟ್ಟಾಗಿ ನಟಿಸಿದ್ದಾರೆ. ಈಗ ಮೂರನೇ ಸಿನಿಮಾದಲ್ಲಿ ಜೊತೆಗೆ ನಟಿಸಲು ಇವರು ರೆಡಿ ಆಗಿದ್ದಾರೆ. ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡರು. ಆ ಬಳಿಕ ಅವರು ಮತ್ತೆ ಒಂದಾಗಿದ್ದು ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಮೊದಲ ಸಿನಿಮಾ ಹಿಟ್ ಆದರೆ, ಎರಡನೇ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಈಗ ಈ ಜೋಡಿ ಮೂರನೇ ಬಾರಿಗೆ ಒಂದಾಗುತ್ತಿದೆ.

ವಿಜಯ್ ದೇವರಕೊಂಡ ಅವರು ಸದ್ಯ ‘ಖುಷಿ’ ಸಿನಿಮಾದ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ನಟನೆಯ 12ನೇ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ. ಈ ಚಿತ್ರಕ್ಕೆ ಗೌತಮ್ ನಾಯ್ಡು ತಿಣ್ಣನುರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಅವರು ‘ಜೆರ್ಸಿ’ ಚಿತ್ರದ ಮೂಲಕ ಗೆದ್ದು ಬೀಗಿದ್ದರು. ಈಗ ಅವರು ವಿಜಯ್ ದೇವರಕೊಂಡ ಜೊತೆ ಕಮಾಲ್ ಮಾಡಲು ರೆಡಿ ಆಗಿದ್ದಾರೆ.

ಇದನ್ನೂ ಓದಿ: ಏಕಕಾಲಕ್ಕೆ ಮೂರು ಸಿನಿಮಾಗಳಲ್ಲಿ ಬ್ಯುಸಿ ಆದ ಟಾಲಿವುಡ್​ ನಟ ವಿಜಯ್​ ದೇವರಕೊಂಡ

ಈ ಮೊದಲು ಶ್ರೀಲೀಲಾ ಅವರು ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಸದ್ಯ ಶ್ರೀಲೀಲಾ ಅವರು ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅದರ ಮಧ್ಯೆ ಈ ಚಿತ್ರಕ್ಕೂ ಅವರು ಗ್ರೀನ್ ಸಿಗ್ನಲ್ ನೀಡಿದ್ದರು. ಆದರೆ, ಡೇಟ್​ ಹೊಂದಿಸಲು ಆಗದ ಕಾರಣ ಶ್ರೀಲೀಲಾ ಈ ಚಿತ್ರದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ