ಕೆಲವೇ ನಿಮಿಷಗಳ ಗ್ಯಾಪ್​ನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ದೇವರಕೊಂಡ-ರಶ್ಮಿಕಾ; ಹೊರಟಿದ್ದೆಲ್ಲಿಗೆ?

ಕೆಲವೇ ನಿಮಿಷಗಳ ಅಂತರದಲ್ಲಿ ವಿಜಯ್ ಹಾಗೂ ರಶ್ಮಿಕಾ ವಿಮಾನ ನಿಲ್ದಾಣ ಪ್ರವೇಶಿಸಿದ್ದು ಅನೇಕರ ಕುತೂಹಲಕ್ಕೆ ಕಾರಣ ಆಗಿದೆ. ಇಬ್ಬರೂ ಒಟ್ಟಾಗಿ ವೆಕೇಶನ್​ಗೆ ತೆರಳುತ್ತಿದ್ದಾರೆ ಎಂದು ಕೆಲವರು ಊಹಿಸಿದ್ದಾರೆ.

ಕೆಲವೇ ನಿಮಿಷಗಳ ಗ್ಯಾಪ್​ನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ದೇವರಕೊಂಡ-ರಶ್ಮಿಕಾ; ಹೊರಟಿದ್ದೆಲ್ಲಿಗೆ?
ರಶ್ಮಿಕಾ-ವಿಜಯ್
Edited By:

Updated on: Oct 07, 2022 | 4:07 PM

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ ಬಗ್ಗೆ ಹುಟ್ಟಿಕೊಂಡಿರುವ ವದಂತಿಗಳು ಒಂದೆರಡಲ್ಲ. ಇಬ್ಬರೂ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ಸುದ್ದಿ ಈ ಮೊದಲು ಹರಿದಾಡಿತ್ತು. ಅಷ್ಟೇ ಅಲ್ಲ ಇವರದ್ದು ಬ್ರೇಕಪ್ ಆಗಿದೆ ಎಂಬ ಸುದ್ದಿಯೂ ಕೇಳಿ ಬಂತು. ಇದಕ್ಕೆ ಸ್ಪಷ್ಟನೆ ನೀಡುವ ಕೆಲಸ ಆಗಿದೆ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದು ವಿಜಯ್ ದೇವರಕೊಂಡ ಅನೇಕ ಬಾರಿ ಹೇಳಿಕೊಂಡಿದ್ದಾರೆ. ಈಗ ಇಬ್ಬರೂ ಕೆಲವೇ ನಿಮಿಷಗಳ ಗ್ಯಾಪ್​ನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಿಜಯ್ ದೇವರಕೊಂಡ ಅವರು ‘ಲೈಗರ್’ ಸೋಲಿನ ಬೇಸರದಲ್ಲಿದ್ದಾರೆ. ಪುರಿ ಜಗನ್ನಾಥ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಬಾಲಿವುಡ್​ನ ಅನನ್ಯಾ ಪಾಂಡೆ ಈ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಬಗ್ಗೆ ವಿಜಯ್​ಗೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣಕ್ಕಾಗಿ ‘ಲೈಗರ್​’ಗಾಗಿ ಹಲವು ವರ್ಷ ಮುಡಿಪಿಟ್ಟಿದ್ದರು ವಿಜಯ್ ದೇವರಕೊಂಡ. ಆದರೆ, ಅದೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ. ಇದು ವಿಜಯ್ ಅವರ ಬೇಸರಕ್ಕೆ ಕಾರಣ ಆಗಿದೆ. ಅವರು ಸಾರ್ವಜನಿಕವಾಗಿ ಅಷ್ಟಕ್ಕಾಗಿ ಕಾಣಿಸುತ್ತಿಲ್ಲ. ಇಂದು ವಿಜಯ್ ದೇವರಕೊಂಡ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ‘ಗುಡ್​ಬೈ’ ಚಿತ್ರದ ಪ್ರಚಾರದ ಕಾರ್ಯದಲ್ಲಿ ಬ್ಯುಸಿ ಆಗಿದ್ದರು. ಈ ಸಿನಿಮಾ ಇಂದು (ಅಕ್ಟೋಬರ್ 7) ರಿಲೀಸ್ ಆಗಿದೆ. ಈ ಚಿತ್ರದ ಟಿಕೆಟ್ ದರ ಇಂದು ಕೇವಲ 150 ರೂಪಾಯಿ ನಿಗದಿ ಮಾಡಲಾಗಿದೆ. ಆದಾಗ್ಯೂ ಜನರು ದೊಡ್ಡ ಸಂಖ್ಯೆಯಲ್ಲಿ ಥಿಯೇಟರ್​ಗೆ ತೆರಳುತ್ತಿಲ್ಲ. ಈ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ರಶ್ಮಿಕಾ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
ಹೇಗಿದ್ದಾರೆ ರಶ್ಮಿಕಾ ಮಂದಣ್ಣ ತಂಗಿ?; ಫೋಟೋ ಹಂಚಿಕೊಂಡ ಕೊಡಗಿನ ಹುಡುಗಿ
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​

ಇದನ್ನೂ ಓದಿ: ಹೇಗಿದ್ದಾರೆ ರಶ್ಮಿಕಾ ಮಂದಣ್ಣ ತಂಗಿ?; ಫೋಟೋ ಹಂಚಿಕೊಂಡ ಕೊಡಗಿನ ಹುಡುಗಿ

ಕೆಲವೇ ನಿಮಿಷಗಳ ಅಂತರದಲ್ಲಿ ವಿಜಯ್ ಹಾಗೂ ರಶ್ಮಿಕಾ ವಿಮಾನ ನಿಲ್ದಾಣ ಪ್ರವೇಶಿಸಿದ್ದು ಅನೇಕರ ಕುತೂಹಲಕ್ಕೆ ಕಾರಣ ಆಗಿದೆ. ಇಬ್ಬರೂ ಒಟ್ಟಾಗಿ ವೆಕೇಶನ್​ಗೆ ತೆರಳುತ್ತಿದ್ದಾರೆ ಎಂದು ಕೆಲವರು ಊಹಿಸಿದ್ದಾರೆ. ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ಕಾರಣಕ್ಕೆ ಇಬ್ಬರೂ ಬೇರೆಬೇರೆ ತೆರಳಿದ್ದಾರೆ ಎಂದು ಕೆಲವರು ಊಹಿಸುತ್ತಿದ್ದಾರೆ.