AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ

‘ಖುಷಿ’ ಸಿನಿಮಾದಲ್ಲಿ ಕಾರು ಚೇಸಿಂಗ್ ದೃಶ್ಯವೊಂದಿದೆ. ಇದರ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಈ ವೇಳೆ ದೊಡ್ಡ ಕೆರೆಯಲ್ಲಿ ಬಿದ್ದಿದೆ. ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರಿಂದ ಯಾವುದೇ ದೊಡ್ಡ ಮಟ್ಟದ ಸಮಸ್ಯೆ ಆಗಿಲ್ಲ

ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ
ಸಮಂತಾ-ವಿಜಯ್ ದೇವರಕೊಂಡ
TV9 Web
| Edited By: |

Updated on: May 23, 2022 | 7:59 PM

Share

ನಟಿ ಸಮಂತಾ (Samantha) ಹಾಗೂ ವಿಜಯ್ ದೇವರಕೊಂಡ ‘ಖುಷಿ’ ಚಿತ್ರಕ್ಕಾಗಿ (Kushi Movie) ಒಂದಾಗಿದ್ದಾರೆ. ಈ ಸಿನಿಮಾದ ಬಹುತೇಕ ಕಥೆ ಕಾಶ್ಮೀರದಲ್ಲಿ ನಡೆಯಲಿದೆ. ಹೀಗಾಗಿ, ಕಾಶ್ಮೀರದಲ್ಲಿ ಶೂಟಿಂಗ್​ ಭರದಿಂದ ಸಾಗುತ್ತಿದೆ. ಈ ಮಧ್ಯೆ ಅವಘಡವೊಂದು ಸಂಭವಿಸಿದೆ. ಶೂಟಿಂಗ್ ವೇಳೆ ಕಾರು ಪಲ್ಟಿ ಆಗಿದೆ. ಇದರಿಂದ ಕಾರಿನಲ್ಲಿದ್ದ ಸಮಂತಾ ಹಾಗೂ ವಿಜಯ್ ದೇವರಕೊಂಡ (Vijay Devarakonda) ಅವರಿಗೆ ಗಾಯವಾಗಿದೆ. ಆದರೆ, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ, ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

ಸಮಂತಾ ಅವರು ಆ್ಯಕ್ಷನ್ ದೃಶ್ಯಗಳಲ್ಲಿ ಕಾಣಿಸೋಕೆ ಹಿಂಜರಿಕೆ ಮಾಡುವುದಿಲ್ಲ. ವಿಜಯ್ ದೇವರಕೊಂಡ ಕೂಡ ಇದೇ ಸಾಲಿಗೆ ಸೇರುತ್ತಾರೆ. ‘ಖುಷಿ’ ಸಿನಿಮಾದಲ್ಲಿ ಕಾರು ಚೇಸಿಂಗ್ ದೃಶ್ಯವೊಂದಿದೆ. ಇದರ ಶೂಟಿಂಗ್ ಕಾಶ್ಮೀರದ ಪಹಲ್​​ಗಮ್​ನಲ್ಲಿ ನಡೆಯುತ್ತಿತ್ತು. ಈ ವೇಳೆ ಕಾರು ದೊಡ್ಡ ಕೆರೆಯಲ್ಲಿ ಬಿದ್ದಿದೆ. ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರಿಂದ ಯಾವುದೇ ದೊಡ್ಡ ಮಟ್ಟದ ಸಮಸ್ಯೆ ಆಗಿಲ್ಲ ಎಂದು ವರದಿ ಆಗಿದೆ.

ಕಾರು ನೀರಿಗೆ ಬೀಳುತ್ತಿದ್ದಂತೆ ಇಬ್ಬರನ್ನೂ ಹೊರ ತೆಗೆಯಲಾಗಿದೆ. ಹತ್ತಿರದ ಹೋಟೆಲ್ ಒಂದಕ್ಕೆ ಸಮಂತಾ ಹಾಗೂ ವಿಜಯ್ ದೇವರಕೊಂಡ ಅವರನ್ನು ಕರೆದುಕೊಂಡು ಹೋಗಲಾಗಿದೆ. ವೈದ್ಯರನ್ನು ಕರೆಸಿ ಅವರಿಗೆ ಚಿಕತ್ಸೆ ನೀಡುವ ಕಾರ್ಯ ಆಗುತ್ತಿದೆ. ಶೂಟಿಂಗ್ ಶೀಘ್ರವೇ ಆರಂಭವಾಗಲಿದೆಯೇ ಅಥವಾ ಇಬ್ಬರೂ ವಿಶ್ರಾಂತಿ ಪಡೆಯುತ್ತಾರೋ ಎಂಬುದು ಇನ್ನೂ ಅಧಿಕೃತವಾಗಿಲ್ಲ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
‘ಹೂ ಅಂತಿಯಾ ಮಾವ’ ಹಾಡಿಗೆ ವಿರಾಟ್ ಕೊಹ್ಲಿ ಡ್ಯಾನ್ಸ್ ನೋಡಿ ಸಮಂತಾ ಹೇಳಿದ್ದೇನು?  
Image
Happy Birthday Samantha: ಅಭಿಮಾನಿಗಳು ಸಮಂತಾಗೆ ಫಿದಾ ಆಗಲು ಈ ಚಿತ್ರಗಳೇ ಕಾರಣ..
Image
Samantha: ಸಮಂತಾ ಸ್ಟೈಲ್​ಗಿಲ್ಲ ಸರಿಸಾಟಿ; ಬಗೆಬಗೆಯ ಫ್ಯಾಶನ್ ಅವತಾರದಲ್ಲಿ ಮಿಂಚುವ ನಟಿ- ಫೋಟೋಗಳು ಇಲ್ಲಿವೆ

ಸಮಂತಾ ಚಿತ್ರರಂಗದಲ್ಲಿದ್ದು ಹಲವು ವರ್ಷಗಳು ಕಳೆದಿವೆ. ವಿಜಯ್ ದೇವರಕೊಂಡ ಇತ್ತೀಚೆಗೆ ಖ್ಯಾತಿ ಹೆಚ್ಚಿಸಿಕೊಂಡವರು. ಸೂಪರ್ ಹಿಟ್ ಸಿನಿಮಾ ‘ಮಹಾನಟಿ’ಯಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈ ಕಾರಣಕ್ಕೆ ಇಬ್ಬರನ್ನು ಒಟ್ಟಾಗಿ ತರುವ ಪ್ರಯತ್ನ ನಡೆದಿದೆ.  ಈ ಚಿತ್ರವನ್ನು ಶಿವ ನಿರ್ವಾಣ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿತ್ತು. ವಿಜಯ್ ದೇವರಕೊಂಡ ಮತ್ತು ಸಮಂತಾ ಕಾಂಬಿನೇಷನ್ ಫ್ಯಾನ್ಸ್​ಗೆ ಇಷ್ಟವಾಗಿತ್ತು.

ಸದ್ಯ ಪ್ಯಾನ್ ಇಂಡಿಯಾ ಟ್ರೆಂಡ್ ಜೋರಾಗಿದೆ. ಈ ಸಿನಿಮಾ ಕೂಡ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರ ರಿಲೀಸ್ ಆಗಲಿದೆ. ಹಿಂದಿಯಲ್ಲಿ ಈ ಸಿನಿಮಾವನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ ಅನ್ನೋದನ್ನು ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ಮಾತ್ರವಲ್ಲದೆ, ಜಯರಾಮ್, ಮುರಳಿ ಶರ್ಮಾ, ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್, ಶರಣ್ಯ ಮೊದಲಾದವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಚಿತ್ರಕ್ಕಿದೆ. ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ನಿರ್ವಾಣ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ