‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.  

‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ
ವಿಜಯ್-ಸಮಂತಾ
Follow us
ರಾಜೇಶ್ ದುಗ್ಗುಮನೆ
|

Updated on:Aug 30, 2023 | 6:31 AM

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ (Kushi Movie) ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗುತ್ತಿದೆ. ಆದರೆ, ಚಿತ್ರತಂಡ ಅಂದುಕೊಂಡ ಮಟ್ಟಿಗೆ ಸಿನಿಮಾ ಸದ್ದು ಮಾಡುತ್ತಿಲ್ಲ. ಇದರ ಜೊತೆಗೆ ಸಿನಿಮಾ ತಂಡ ಮಾಡುತ್ತಿರುವ ಪ್ಲ್ಯಾನ್​ಗಳು ಕೂಡ ಚಿತ್ರಕ್ಕೆ ಹಿನ್ನಡೆ ಉಂಟು ಮಾಡುತ್ತಿವೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಸಿನಿಮಾಗೆ ಗೆಲುವು ಸಿಗೋದು ಮತ್ತಷ್ಟು ಕಷ್ಟ ಎಂದು ಹೇಳಲಾಗುತ್ತಿದೆ.

ಯಾವುದೇ ಸಿನಿಮಾ ರಿಲೀಸ್​ಗೂ ಮೊದಲೇ ಭರ್ಜರಿ ಪ್ರಚಾರ ನೀಡಲಾಗುತ್ತದೆ. ವಾರದ ಮೊದಲೇ ಅಡ್ವಾನ್ಸ್ ಬುಕಿಂಗ್ ಓಪನ್ ಮಾಡಲಾಗುತ್ತದೆ. ಇವೆರಡಕ್ಕೂ ಲಿಂಕ್ ಇದೆ. ಸಿನಿಮಾಗೆ ಭರ್ಜರಿ ಪ್ರಚಾರ ಕೊಟ್ಟರೆ ಅಡ್ವಾನ್ಸ್ ಬುಕಿಂಗ್​ ಓಪನ್ ಆದಾಗ ಭರ್ಜರಿ ರೆಸ್ಪಾನ್ಸ್ ಸಿಗುತ್ತದೆ. ಆದರೆ, ಇವೆರಡೂ ಕೆಲಸವನ್ನು ‘ಖುಷಿ’ ತಂಡದವರು ಸರಿಯಾಗಿ ಮಾಡಿಲ್ಲ.

‘ಖುಷಿ’ ಸಿನಿಮಾಗೆ ಸರಿಯಾದ ರೀತಿಯಲ್ಲಿ ಪ್ರಚಾರ ನೀಡೋಕೆ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ಸಮಂತಾ ಅಮೆರಿಕದಲ್ಲಿರೋದು. ಹೀಗಾಗಿ ಪ್ರಚಾರದ  ಎಲ್ಲಾ ಜವಾಬ್ದಾರಿ ವಿಜಯ್ ದೇವರಕೊಂಡ ಅವರ ಹೆಗಲೇರಿದೆ. ಅವರು ಎಲ್ಲ ಕಡೆಗಳಿಗೆ ತೆರಳಿ ತಮ್ಮ ಕೈಲಾದಷ್ಟು ಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು, ಅಡ್ವಾನ್ಸ್ ಬುಕಿಂಗ್ ಕೂಡ ವಿಳಂಬ ಆಗುತ್ತಿದೆ.

ಇದನ್ನೂ ಓದಿ: ಸಮಂತಾಗೆ ವಿಡಿಯೋ ಕಾಲ್ ಮಾಡಿದ ವಿಜಯ್ ದೇವರಕೊಂಡ, ಹೇಳಿದ ಜೋಕ್ ಯಾವುದು?

ಚಿತ್ರತಂಡದವರೇ ಘೋಷಿಸಿದಂತೆ ಇಂದು (ಆಗಸ್ಟ್ 30) ಬೆಳಗ್ಗೆ 10 ಗಂಟೆಗೆ ‘ಖುಷಿ’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಶುರುವಾಗುತ್ತದೆ. ಅಂದರೆ ಸಿನಿಮಾ ರಿಲೀಸ್ ಆಗುವ 48 ಗಂಟೆ ಮೊದಲು ಅಡ್ವಾನ್ಸ್ ಟಿಕೆಟ್ ಬುಕಿಂಗ್​ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ಆಗಿದೆ. ಹೀಗಾದರೆ ಚಿತ್ರಕ್ಕೆ ಹೈಪ್ ಸಿಗೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:25 am, Wed, 30 August 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ