AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ವಿಜಯ್ ದೇವರಕೊಂಡ; ಇಷ್ಟೊಂದು ಹಣ ಏಕೆ?

ವಿಜಯ್ ದೇವರಕೊಂಡ ಅವರು ತೆಲುಗಿನಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಅಭಿನಯದ ‘ಅರ್ಜುನ್ ರೆಡ್ಡಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ಬೇಡಿಕೆ ಹೆಚ್ಚಿತು.

‘ಲೈಗರ್’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ವಿಜಯ್ ದೇವರಕೊಂಡ; ಇಷ್ಟೊಂದು ಹಣ ಏಕೆ?
ವಿಜಯ್ ದೇವರಕೊಂಡ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 24, 2022 | 3:46 PM

Share

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ (Liger Movie) ಆಗಸ್ಟ್ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಹೈಪ್ ಸೃಷ್ಟಿ ಆಗಿದೆ. ವಿಜಯ್ ಅವರು ಈ ಚಿತ್ರಕ್ಕಾಗಿ ಸಾಕಷ್ಟು ಸಿದ್ಧತೆ ನಡೆಸಿದ್ದಾರೆ. ಬಾಕ್ಸಿಂಗ್ ತರಬೇತಿ ಪಡೆದಿದ್ದಾರೆ. ‘ಲೈಗರ್’ಗಾಗಿ ಅವರು ಬೇರೆ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಈಗ ವಿಜಯ್ ದೇವರಕೊಂಡ (Vijay Devarakonda) ಅವರು ಈ ಸಿನಿಮಾಗಾಗಿ ಪಡೆದ ಸಂಭಾವನೆ ವಿಚಾರ ರಿವೀಲ್ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿ ಹೊರ ಹಾಕಿದ್ದಾರೆ.

ವಿಜಯ್ ದೇವರಕೊಂಡ ಅವರು ತೆಲುಗಿನಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಅಭಿನಯದ ‘ಅರ್ಜುನ್ ರೆಡ್ಡಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ಬೇಡಿಕೆ ಹೆಚ್ಚಿತು. ‘ಗೀತ ಗೋವಿಂದಂ’ ಸಿನಿಮಾ ಕೂಡ ಯಶಸ್ಸು ಕಂಡಿತು. ಈಗ ವಿಜಯ್ ಅವರು ಹೊಸ ಮ್ಯಾನರಿಸಂ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಕಾರಣದಿಂದಲೂ ಸಿನಿಮಾಗೆ ಹೈಪ್ ಹೆಚ್ಚಿದೆ.

ವಿಜಯ್ ದೇವರಕೊಂಡ ಅವರು ‘ಲೈಗರ್’ ಚಿತ್ರಕ್ಕಾಗಿ ಬರೋಬ್ಬರಿ 25 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಸಾಮಾನ್ಯವಾಗಿ ವಿಜಯ್ ಪ್ರತಿ ಚಿತ್ರಕ್ಕೆ 7-8 ಕೋಟಿ ರೂಪಾಯಿ ಪಡೆಯುತ್ತಿದ್ದರು. ಆದರೆ, ‘ಲೈಗರ್’ ಪ್ಯಾನ್ ಇಂಡಿಯಾ ಸಿನಿಮಾ. ಅಲ್ಲದೆ, ಈ ಸಿನಿಮಾಗಾಗಿ ಅವರು ಸಾಕಷ್ಟು ಸಿದ್ಧತೆ ನಡೆಸಬೇಕಿತ್ತು. ಅಷ್ಟೇ ಅಲ್ಲ, ಈ ಚಿತ್ರಕ್ಕಾಗಿ ಅವರು ಹಲವು ಪ್ರಾಜೆಕ್ಟ್​ಗಳನ್ನು ಕೈ ಬಿಟ್ಟಿದ್ದಾರೆ. ಈ ಕಾರಣದಿಂದ ‘ಲೈಗರ್​ಗಾಗಿ’ ಅವರು ಮೂರು ಪಟ್ಟು ಹೆಚ್ಚು ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

ದಕ್ಷಿಣ ಭಾರತದಿಂದ ಅನೇಕ ಸ್ಟಾರ್​ಗಳು ಬಾಲಿವುಡ್​ನಲ್ಲಿ ಅಗ್ನಿಪರೀಕ್ಷೆ ಮಾಡಿದ್ದರು. ಆದರೆ, ಯಶಸ್ಸು ಎಲ್ಲರಿಗೂ ಸಿಕ್ಕಿಲ್ಲ. ಈಗ ವಿಜಯ್ ಕೂಡ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಸ್ವಾಗತ ಸಿಗಲಿದೆ ಎಂಬುದು ಆಗಸ್ಟ್ 25ರಂದು ಗೊತ್ತಾಗಲಿದೆ. ‘ಲೈಗರ್​’ ಹಿಂದಿ ಬೆಲ್ಟ್​ನಿಂದ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಲೈಗರ್​’ ಟಿಕೆಟ್ ಬುಕಿಂಗ್ ಓಪನ್​; ರಿಲೀಸ್​ಗೂ ಮೊದಲೇ ಹವಾ ಎಬ್ಬಿಸಿದ ವಿಜಯ್ ದೇವರಕೊಂಡ ಚಿತ್ರ

ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ ಮುಖ್ಯಭೂಮಿಕೆಯಲ್ಲಿರುವ ‘ಲೈಗರ್’ ಚಿತ್ರಕ್ಕೆ ಪುರಿ ಜಗನ್ನಾಥ್​ ಅವರು ನಿರ್ದೇಶನ ಮಾಡಿದ್ದಾರೆ. ಅವರು ಚಿತ್ರದ ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ಕರಣ್ ಜೋಹರ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ