ರಶ್ಮಿಕಾ ಮಂದಣ್ಣ ಅವರ ಫೇಕ್​ ವಿಡಿಯೋ ನೋಡಿ ವಿಜಯ್​ ದೇವರಕೊಂಡ ಗರಂ; ನಟ ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅವರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಅನೇಕರ ಅನುಮಾನ. ವೃತ್ತಿಜೀವನದಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರ ನಕಲಿ ವಿಡಿಯೋ ವೈರಲ್​ ಆಗಿದ್ದನ್ನು ವಿಜಯ್​ ದೇವರಕೊಂಡ ಖಂಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಫೇಕ್​ ವಿಡಿಯೋ ನೋಡಿ ವಿಜಯ್​ ದೇವರಕೊಂಡ ಗರಂ; ನಟ ಹೇಳಿದ್ದೇನು?
ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ

Updated on: Nov 08, 2023 | 5:46 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್​ಫೇಕ್​ ವಿಡಿಯೋ ಬಗ್ಗೆ ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಎಲ್ಲ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವರು ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ. ಅಮಿತಾಭ್​ ಬಚ್ಚನ್​, ನಾಗ ಚೈತನ್ಯ, ಮೃಣಾಲ್​ ಠಾಕೂರ್​, ಇಶಾನ್​ ಕಟ್ಟರ್​ ಸೇರಿದಂತೆ ಅನೇಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಅಂಥ ಸೆಲೆಬ್ರಿಟಿಗಳ ಸಾಲಿಗೆ ಈಗ ಲೇಟೆಸ್ಟ್​ ಆಗಿ ಸೇರ್ಪಡೆ ಆಗಿರುವುದು ವಿಜಯ್​ ದೇವರಕೊಂಡ. ರಶ್ಮಿಕಾ ಮಂದಣ್ಣ ಅವರ ನಕಲಿ ವೈರಲ್​ ವಿಡಿಯೋದ (Rashmika Mandanna Viral Video) ಕುರಿತು ಪ್ರಕಟ ಆಗಿರುವ ಸುದ್ದಿಯನ್ನು ವಿಜಯ್​ ದೇವರಕೊಂಡ (Vijay Devarakonda) ಶೇರ್​ ಮಾಡಿಕೊಂಡಿದ್ದಾರೆ. ತಮ್ಮ ಗೆಳತಿಯ ಪರವಾಗಿ ಅವರು ವಾದ ಮಾಡಿದ್ದಾರೆ.

ಟಾಲಿವುಡ್​ನ ಸೂಪರ್​ ಹಿಟ್​ ಜೋಡಿಗಳಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಕೂಡ ಇದ್ದಾರೆ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅವರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಅನೇಕರ ಅನುಮಾನ. ಆದರೆ ಆ ವಿಚಾರವನ್ನು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರು ಒಪ್ಪಿಕೊಂಡಿಲ್ಲ. ವೃತ್ತಿಜೀವನದಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರ ನಕಲಿ ವಿಡಿಯೋ ವೈರಲ್​ ಆಗಿದ್ದನ್ನು ವಿಜಯ್​ ದೇವರಕೊಂಡ ಖಂಡಿಸಿದ್ದಾರೆ.

ಇದನ್ನೂ ಓದಿ: ಜನರೆಲ್ಲ ರಶ್ಮಿಕಾ ಮಂದಣ್ಣ ಅಂತ ನಂಬಿಕೊಂಡಿದ್ದ ಹುಡುಗಿ ಇವರೇ ನೋಡಿ..

‘ರಶ್ಮಿಕಾ ಮಂದಣ್ಣ ಫೇಕ್​ ವಿಡಿಯೋ ವೈರಲ್ ಆದ ಬಳಿಕ ಡೀಪ್​ಫೇಕರ್ಸ್​ ನಿಯಂತ್ರಣಕ್ಕೆ ಮುಂದಾಗ ಪೊಲೀಸರು’ ಎಂದು ಪ್ರಕಟ ಆಗಿರುವ ಸುದ್ದಿಯನ್ನು ವಿಜಯ್​ ದೇವರಕೊಂಡ ಶೇರ್​ ಮಾಡಿಕೊಂಡಿದ್ದಾರೆ. ‘ಭವಿಷ್ಯಕ್ಕಾಗಿ ಇದು ತುಂಬಾ ಮುಖ್ಯವಾದ ಕ್ರಮ. ಈ ರೀತಿ ಯಾರಿಗೂ ಆಗಬಾರದು. ಸೈಬರ್​ ಕ್ರೈಮ್​ ತಡೆಯಲು ಸಮರ್ಥವಾದ ಮತ್ತು ಸುಲಭಕ್ಕೆ ಜನರ ಸಂಪರ್ಕಕ್ಕೆ ಸಿಗುವಂತಹ ಸೈಬರ್​ ಘಟಕ ಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾದರೆ ಜನರಿಗೆ ಹೆಚ್ಚು ರಕ್ಷಣೆ ಸಿಗುತ್ತದೆ’ ಎಂದು ವಿಜಯ್​ ದೇವರಕೊಂಡ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಭವಿಷ್ಯ ಇನ್ನೂ ಭಯಬೀಳಿಸುವಂತಿದೆ’: ರಶ್ಮಿಕಾ ಮಂದಣ್ಣ ಅವರ ನಕಲಿ ವಿಡಿಯೋಗೆ ನಾಗ ಚೈತನ್ಯ ಪ್ರತಿಕ್ರಿಯೆ

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬಾಲಿವುಡ್​ ನಟ ಇಶಾನ್​ ಕಟ್ಟರ್​ ಅವರು ಕೂಡ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಇದನ್ನು ಖಂಡಿಸುತ್ತೇನೆ. ಡೀಪ್​ಫೇಕ್​ ಎಂಬುದು ಒಳ್ಳೆಯದಲ್ಲ. ಅನುಮತಿ ಇಲ್ಲದೇ ಒಬ್ಬರ ದೇಹ ಮತ್ತು ಮುಖವನ್ನು ಬಳಸುವುದು ಸರಿಯಲ್ಲ. ಅಂಥ ವಿಚಾರಗಳಿಗೆ ನನ್ನ ಬೆಂಬಲ ಇಲ್ಲ’ ಎಂದು ಇಶಾನ್​ ಕಟ್ಟರ್​ ಹೇಳಿದ್ದಾರೆ. ರಶ್ಮಿಕಾ ಅವರ ಡೀಪ್​ಫೇಕ್​ ವಿಡಿಯೋ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅಮಿತಾಭ್​ ಬಚ್ಚನ್​ ಹೇಳಿದ್ದಾರೆ. ಸ್ವತಃ ರಶ್ಮಿಕಾ ಕೂಡ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ತುಂಬ ನೋವಾಗಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us