ಧೂಳೆಬ್ಬಿಸಿದ ವಿಜಯ್ ದೇವರಕೊಂಡ ಹೊಸ ಅವತಾರ; ಇಲ್ಲಿದೆ ‘ಲೈಗರ್’ ಚಿತ್ರದ ಪೋಸ್ಟರ್​

Vijay Devarakonda: ವಿಜಯ್ ದೇವರಕೊಂಡ ಅವರು ರೊಮ್ಯಾಂಟಿಕ್ ಸಿನಿಮಾಗಳ ಮೂಲಕ ಹೆಚ್ಚು ಪರಿಚಿತರಾದವರು. ಈ ಬಾರಿ ಅವರು ‘ಲೈಗರ್’ ಚಿತ್ರಕ್ಕಾಗಿ ಮಾಸ್ ಅವತಾರ ತಾಳಿದ್ದಾರೆ.

ಧೂಳೆಬ್ಬಿಸಿದ ವಿಜಯ್ ದೇವರಕೊಂಡ ಹೊಸ ಅವತಾರ; ಇಲ್ಲಿದೆ ‘ಲೈಗರ್’ ಚಿತ್ರದ ಪೋಸ್ಟರ್​
ವಿಜಯ್ ದೇವರಕೊಂಡ
TV9kannada Web Team

| Edited By: Rajesh Duggumane

Jul 02, 2022 | 11:56 AM

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್’ ಸಿನಿಮಾ (Liger Movie) ರಿಲೀಸ್​ಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್ ತಿಂಗಳಲ್ಲಿ ತೆರೆಗೆ ಬರುತ್ತಿರುವ ಈ ಚಿತ್ರಕ್ಕೆ ಈಗಾಗಲೇ ಪ್ರಚಾರ ನೀಡಲಾಗುತ್ತಿದೆ. ಹಲವು ಹಿಟ್ ಚಿತ್ರಗಳನ್ನು ನೀಡಿರುವ ಪುರಿ ಜಗನ್ನಾಥ (Puri Jagannadh) ಹಾಗೂ ವಿಜಯ್ ದೇವರಕೊಂಡ ಕಾಂಬಿನೇಷನ್​ನ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ‘ಲೈಗರ್’ ಸಿನಿಮಾ ಬಾಕ್ಸಿಂಗ್ ಕುರಿತಾಗಿದೆ. ಈಗ ಚಿತ್ರತಂಡ ಹೊಸ ಪೋಸ್ಟರ್ ಹಂಚಿಕೊಂಡಿದ್ದು, ಇದು ಧೂಳೆಬ್ಬಿಸುತ್ತಿದೆ.

ವಿಜಯ್ ದೇವರಕೊಂಡ ಅವರು ರೊಮ್ಯಾಂಟಿಕ್ ಸಿನಿಮಾಗಳ ಮೂಲಕ ಹೆಚ್ಚು ಪರಿಚಿತರಾದವರು. ಈ ಬಾರಿ ಅವರು ‘ಲೈಗರ್’ ಚಿತ್ರಕ್ಕಾಗಿ ಮಾಸ್ ಅವತಾರ ತಾಳಿದ್ದಾರೆ. ಟೀಸರ್ ಹಾಗೂ ಪೋಸ್ಟರ್ ಮೂಲಕ ಈ ವಿಚಾರ ಈಗಾಗಲೇ ರಿವೀಲ್ ಆಗಿದೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಕಸರತ್ತು ನಡೆಸಿದ್ದಾರೆ. ಈಗ ರಿಲೀಸ್ ಆಗಿರುವ ಹೊಸ ಪೋಸ್ಟರ್​ನಲ್ಲಿ ವಿಜಯ್ ದೇವರಕೊಂಡ ಅವರ ದೇಹದಲ್ಲಿ ಯಾವುದೇ ಬಟ್ಟೆ ಇಲ್ಲ. ಗುಲಾಬಿ ಹೂವಿನ ಗುಚ್ಚದಿಂದ ಕೆಳಭಾಗವನ್ನು ಅವರು ಮುಚ್ಚಿಕೊಂಡಿದ್ದಾರೆ. ಈ ಪೋಸ್ಟರ್​ಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಹೊಸ ಪೋಸ್ಟರ್ ಹಂಚಿಕೊಂಡಿರುವ ವಿಜಯ್ ದೇವರಕೊಂಡ ಸಿನಿಮಾಗಾಗಿ ಹಾಕಿದ ಶ್ರಮದ ಕುರಿತು ವಿವರಿಸಿದ್ದಾರೆ.

ಕರಣ್​ ಜೋಹರ್​, ಪುರಿ ಜಗನ್ನಾಥ್​, ಚಾರ್ಮಿ ಕೌರ್​ ಹಾಗೂ ಅಪೂರ್ವ ಮೆಹ್ತಾ ಅವರು ‘ಲೈಗರ್​’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಕಾಣಿಸಿಕೊಳ್ಳಲಿದ್ದಾರೆ. ಬಾಕ್ಸಿಂಗ್ ಲೋಕದಲ್ಲಿ ದೊಡ್ಡ ಹೆಸರು ಮಾಡಿದ ಮೈಕ್ ಟೈಸನ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಆಗಸ್ಟ್​ 25ರಂದು ‘ಲೈಗರ್​’ ಸಿನಿಮಾ ಬಿಡುಗಡೆ ಆಗಲಿದೆ. ಜುಲೈ 10ರಂದು ಈ ಚಿತ್ರದ ಟ್ರೇಲರ್​ ರಿಲೀಸ್​ ಆಗಲಿದೆ. ಶೀಘ್ರದಲ್ಲೇ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಲಾಗುವುದು. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಪ್ಯಾನ್​ ಇಂಡಿಯಾ ಹೀರೋ ಆಗಿ ಸದ್ದು ಮಾಡಲು ವಿಜಯ್​ ದೇವರಕೊಂಡ ಸಜ್ಜಾಗಿದ್ದಾರೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ.

ಇದನ್ನೂ ಓದಿ: ವಿಜಯ್ ದೇವರಕೊಂಡ ಕಟ್ಟು ಮಸ್ತಾದ ದೇಹ ನೋಡಿ ಫ್ಯಾನ್ಸ್ ಫಿದಾ; ‘ಲೈಗರ್’ ಥೀಮ್ ರಿಲೀಸ್

ಇದನ್ನೂ ಓದಿ

Mike Tyson: ಬಾಕ್ಸಿಂಗ್​ ದಿಗ್ಗಜ ಮೈಕ್​ ಟೈಸನ್​ ಜನ್ಮದಿನಕ್ಕೆ ವಿಶೇಷ ವಿಡಿಯೋ ಮೂಲಕ ವಿಶ್​ ಮಾಡಿದ ‘ಲೈಗರ್​’ ತಂಡ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada