ಮತ್ತೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್​

ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರದ್ದು ಟಾಲಿವುಡ್​ನಲ್ಲಿ ಹಿಟ್​ ಜೋಡಿ. ಈಗಾಗಲೇ ಎರಡು ಸಿನಿಮಾಗಳಲ್ಲಿ ಅವರು ಜೊತೆಯಾಗಿ ನಟಿಸಿದ್ದಾರೆ. ಈಗ ಮೂರನೇ ಬಾರಿಗೆ ಅವರು ತೆರೆಹಂಚಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುವಂತಹ ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಮತ್ತೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್​
ರಶ್ಮಿಕಾ ಮಂದಣ್ಣ, ವಿಜಯ್​ ದೇವರಕೊಂಡ
Follow us
ಮದನ್​ ಕುಮಾರ್​
|

Updated on: Dec 01, 2023 | 1:12 PM

ಒಂದಲ್ಲ ಒಂದು ಕಾರಣಕ್ಕೆ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್​ ದೇವರಕೊಂಡ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗುಮಾನಿ ಇದೆ. ಆದರೆ ಅದನ್ನು ಅವರಿಬ್ಬರು ಬಹಿರಂಗವಾಗಿ ಒಪ್ಪಿಕೊಂಡಿಲ್ಲ. ವೃತ್ತಿಜೀವನಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ (Vijay Devarakonda) ಅವರು ಈಗಾಗಲೇ ಎರಡು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈಗ ಅವರು ಮೂರನೇ ಬಾರಿಗೆ ತೆರೆ ಹಂಚಿಕೊಳ್ಳತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್​ ಆಗಿದೆ. ಇದು ‘ಫ್ಯಾಮಿಲಿ ಸ್ಟಾರ್​’ (Family Star) ಸಿನಿಮಾದ ಶೂಟಿಂಗ್​ ಸೆಟ್​​ನಿಂದ ಲೀಕ್​ ಆಗಿರುವ ವಿಡಿಯೋ.

‘ಫ್ಯಾಮಿಲಿ ಸ್ಟಾರ್​’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಈಗ ಈ ಸಿನಿಮಾದ ಪಾತ್ರವರ್ಗಕ್ಕೆ ರಶ್ಮಿಕಾ ಮಂದಣ್ಣ ಕೂಡ ಸೇರಿಕೊಂಡಿದ್ದಾರೆ. ಈ ಸಿನಿಮಾದ ಒಂದು ವಿಶೇಷ ಹಾಡಿನಲ್ಲಿ ಅವರು ಡ್ಯಾನ್ಸ್​ ಮಾಡಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ಇದರ ಶೂಟಿಂಗ್​ ನಡೆದಿದ್ದು, ಮೃಣಾಲ್​ ಠಾಕೂರ್​, ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಹಾಗಾಗಿ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಟಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಅವರು ವಿಜಯ್​ ದೇವರಕೊಂಡ ಜೊತೆ ನಟಿಸಿದ ಮೊದಲ ಸಿನಿಮಾ ‘ಗೀತ ಗೋವಿದಂ’ ಹಿಟ್​ ಆಗಿತ್ತು. ಆ ಬಳಿಕ ಅವರಿಬ್ಬರು ‘ಡಿಯರ್​ ಕಾಮ್ರೇಡ್​’ ಸಿನಿಮಾದಲ್ಲಿ ಮತ್ತೊಮ್ಮೆ ಜೋಡಿಯಾಗಿ ನಟಿಸಿದ್ದರು. ಈಗ ಮೂರನೇ ಬಾರಿಗೆ ಅವರನ್ನು ಜೊತೆಯಾಗಿ ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ. ‘ಫ್ಯಾಮಿಲಿ ಸ್ಟಾರ್​’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಎಷ್ಟು?

ರಶ್ಮಿಕಾ ಮಂದಣ್ಣ ಅವರಿಗೆ 2023ರ ವರ್ಷ ಸಖತ್​ ಸ್ಪೆಷಲ್​ ಆಗಿದೆ. ದಳಪತಿ ವಿಜಯ್​ ಜೊತೆ ನಟಿಸಿದ ‘ವಾರಿಸು’ ಸಿನಿಮಾ ಮೂಲಕ ಅವರು ಗೆಲುವು ಕಂಡರು. ನಂತರ ಒಟಿಟಿಯಲ್ಲಿ ನೇರವಾಗಿ ಬಿಡುಗಡೆ ಆದ ‘ಮಿಷನ್​ ಮಜ್ನು’ ಸಿನಿಮಾ ಕೂಡ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಈಗ ರಣಬೀರ್​ ಕಪೂರ್​ ಜೊತೆ ಅವರು ನಟಿಸಿದ ‘ಅನಿಮಲ್​’ ಸಿನಿಮಾ ರಿಲೀಸ್​ ಆಗಿದೆ. ಈ ಸಿನಿಮಾ ಕೂಡ ಉತ್ತಮ ಓಪನಿಂಗ್​ ಪಡೆದುಕೊಂಡಿದೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಅಲ್ಲು ಅರ್ಜುನ್​ ಜೊತೆ ಅವರು ಈಗ ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ