Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಶ್ಮಿಕಾ ಮಂದಣ್ಣ ಜೊತೆ ನಟಿಸೋ ಆಸೆ ಇದೆ, ಆದರೆ..’; ವಿಜಯ್ ದೇವರಕೊಂಡ

Rashmika Mandanna: ವಿಜಯ್ ದೇವರಕೊಂಡ ಅವರು ಸದ್ಯ ‘ಖುಷಿ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ನಟಿ ಸಮಂತಾ ಸದ್ಯ ಅಮೆರಿಕದಲ್ಲಿ ಇರುವ ಕಾರಣ ಪ್ರಚಾರದ ಸಂಪೂರ್ಣ ಜವಾಬ್ದಾರಿ ವಿಜಯ್ ದೇವರಕೊಂಡ ಪಾಲಾಗಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಅವರು ರಶ್ಮಿಕಾ ಜೊತೆ ನಟಿಸೋ ಆಸೆ ವ್ಯಕ್ತಪಡಿಸಿದ್ದಾರೆ.

‘ರಶ್ಮಿಕಾ ಮಂದಣ್ಣ ಜೊತೆ ನಟಿಸೋ ಆಸೆ ಇದೆ, ಆದರೆ..’; ವಿಜಯ್ ದೇವರಕೊಂಡ
ವಿಜಯ್- ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Aug 23, 2023 | 7:52 AM

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಹಿಟ್ ಕಾಂಬಿನೇಷನ್. ‘ಗೀತ ಗೋವಿಂದಂ’ ಸಿನಿಮಾ ಸೂಪರ್ ಹಿಟ್ ಆಯಿತು. ಇದಾದ ಬಳಿಕ ಇವರು ಒಟ್ಟಾಗಿ ನಟಿಸಿದ ‘ಡಿಯರ್ ಕಾಮ್ರೇಡ್’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿತು. ಇವರು ಮತ್ತೆ ಒಟ್ಟಾಗಿ ನಟಿಸುತ್ತಾರೆ ಎನ್ನುವ ಸುದ್ದಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ಬಗ್ಗೆ ವಿಜಯ್ ದೇವರಕೊಂಡಗೆ (Vijay Devarakonda) ಪ್ರಶ್ನೆ ಮಾಡಲಾಗಿದೆ. ಅವರು ಇದಕ್ಕೆ ಉತ್ತರ ನೀಡಿದ್ದಾರೆ.

ವಿಜಯ್ ದೇವರಕೊಂಡ ಅವರು ಸದ್ಯ ‘ಖುಷಿ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಸೆಪ್ಟೆಂಬರ್ 1ರಂದು ರಿಲೀಸ್ ಆಗಲಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ನಟಿ ಸಮಂತಾ ಸದ್ಯ ಅಮೆರಿಕದಲ್ಲಿ ಇರುವ ಕಾರಣ ಪ್ರಚಾರದ ಸಂಪೂರ್ಣ ಜವಾಬ್ದಾರಿ ವಿಜಯ್ ದೇವರಕೊಂಡ ಪಾಲಾಗಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಅವರು ರಶ್ಮಿಕಾ ಜೊತೆ ನಟಿಸೋ ಆಸೆ ವ್ಯಕ್ತಪಡಿಸಿದ್ದಾರೆ.

ಯಾವುದೇ ರೀತಿಯ ಪ್ರಶ್ನೆ ಎದುರಾಗಲಿ ಅದಕ್ಕೆ ವಿಜಯ್ ದೇವರಕೊಂಡ ಹಿಂಜರಿಯದೆ ಉತ್ತರ ನೀಡುತ್ತಾರೆ. ‘ಖುಷಿ’ ಸಿನಿಮಾದ ಪ್ರಚಾರದಲ್ಲಿ ಭಾಗಿ ಆದಾ ಅವರಿಗೆ ರಶ್ಮಿಕಾ ಬಗ್ಗೆ ಪ್ರಶ್ನೆ ಎದುರಾಗಿದೆ. ಇಬ್ಬರೂ ಮತ್ತೆ ಒಟ್ಟಾಗಿ ನಟಿಸೋದು ಯಾವಾಗ ಎಂದು ಕೇಳಲಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ‘ರಶ್ಮಿಕಾ ಮಂದಣ್ಣ ಜೊತೆ ತೆರೆಹಂಚಿಕೊಳ್ಳಲು ಕಾದಿದ್ದೇನೆ. ಆದರೆ, ಒಳ್ಳೆಯ ಸ್ಕ್ರಿಪ್ಟ್ ಸಿಗಬೇಕಷ್ಟೇ. ಹಾಗಿದ್ದಲ್ಲಿ ಇಬ್ಬರೂ ಒಟ್ಟಿಗೆ ನಟಿಸುತ್ತೇವೆ’ ಎಂದು ವಿಜಯ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ರಜನಿ ಬಗ್ಗೆ ತಪ್ಪಾಗಿ ಹೇಳಿ ವಿವಾದ ಸೃಷ್ಟಿಸಿದ ವಿಜಯ್ ದೇವರಕೊಂಡ; ‘ನಿಮ್ಮ ಅಭಿಪ್ರಾಯ ಬೇಕಿಲ್ಲ’ ಎಂದ ಫ್ಯಾನ್ಸ್ 

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಅಭಿಮಾನಿಗಳು ಈ ವಿಚಾರವನ್ನೇ ಸಂಭ್ರಮಿಸುತ್ತಿದ್ದಾರೆ. ನಿರ್ದೇಶಕರು ಒಳ್ಳೆಯ ಸ್ಕ್ರಿಪ್ಟ್ ಜೊತೆ ಇವರ ಬಳಿ ಬರಲಿ ಎಂದು ಅನೇಕರು ಕೋರಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಮಾತು ಮೊದಲಿನಿಂದಲೂ ಇದೆ. ಆದರೆ ಇದನ್ನು ಅವರು ಒಪ್ಪಿಕೊಂಡಿಲ್ಲ. ಆಗಾಗ ಇವರು ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ವಿದೇಶದಲ್ಲಿ ಇವರು ಒಟ್ಟಾಗಿ ಸಮಯ ಕಳೆದು ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ