AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Devarakonda: ಒಂದೇ ದಿನದಲ್ಲಿ 5 ಕೋಟಿ​ಗಿಂತ ಹೆಚ್ಚು ಬಾರಿ ವೀಕ್ಷಣೆ ಕಂಡ ‘ಲೈಗರ್​’ ಟ್ರೇಲರ್​

 Liger Movie Trailer: ‘ಲೈಗರ್​’ ಸಿನಿಮಾದ ಟ್ರೇಲರ್​ ನೋಡಿ ವಿಜಯ್​ ದೇವರಕೊಂಡ ಅಭಿಮಾನಿಗಳು ಫಿದಾ ಆಗಿದ್ದಾರೆ. ಯೂಟ್ಯೂಬ್​ನಲ್ಲಿ ಈ ಟ್ರೇಲರ್​ ಟ್ರೆಂಡಿಂಗ್​ ನಂಬರ್ ಒನ್​ ಆಗಿರುವುದಕ್ಕೆ ಚಿತ್ರತಂಡ ಹೆಮ್ಮೆಪಟ್ಟುಕೊಂಡಿದೆ.

Vijay Devarakonda: ಒಂದೇ ದಿನದಲ್ಲಿ 5 ಕೋಟಿ​ಗಿಂತ ಹೆಚ್ಚು ಬಾರಿ ವೀಕ್ಷಣೆ ಕಂಡ ‘ಲೈಗರ್​’ ಟ್ರೇಲರ್​
ವಿಜಯ್ ದೇವರಕೊಂಡ
TV9 Web
| Edited By: |

Updated on: Jul 22, 2022 | 1:19 PM

Share

ನಟಿ ವಿಜಯ್​ ದೇವರಕೊಂಡ (Vijay Deverakonda) ಅವರ ಅಭಿಮಾನಿಗಳು ಹಿರಿಹಿರಿ ಹಿಗ್ಗುತ್ತಿದ್ದಾರೆ. ಅದಕ್ಕೆ ಕಾರಣ ‘ಲೈಗರ್’ ಚಿತ್ರದ ಟ್ರೇಲರ್​. ಈ ಬಹುನಿರೀಕ್ಷಿತ ಸಿನಿಮಾ ಪ್ರತಿ ಹೆಜ್ಜೆಯಲ್ಲೂ ಹೈಪ್​ ಸೃಷ್ಟಿ ಮಾಡುತ್ತಿದೆ. ಜುಲೈ 21ರಂದು ಬೆಳಗ್ಗೆ ‘ಲೈಗರ್​’ ಸಿನಿಮಾದ ಟ್ರೇಲರ್​ (Liger Movie Trailer) ರಿಲೀಸ್​ ಮಾಡಲಾಯಿತು. 24 ಗಂಟೆ ಕಳೆಯುವುದರೊಳಗೆ 50 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿರುವುದು ಇದರ ಹೆಚ್ಚುಗಾರಿಕೆ. ಈ ಖುಷಿಯನ್ನು ಇಡೀ ಚಿತ್ರತಂಡ ಸಂಭ್ರಮಿಸುತ್ತಿದೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಅಭಿನಯಿಸಿದ್ದಾರೆ. ಆಗಸ್ಟ್​ 25ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಮುಂತಾದ ಭಾಷೆಯಲ್ಲಿ ‘ಲೈಗರ್​’ ಸಿನಿಮಾ (Liger Movie) ಬಿಡುಗಡೆ ಆಗಲಿದೆ.

‘ಅರ್ಜುನ್​ ರೆಡ್ಡಿ’ ಚಿತ್ರದ ಯಶಸ್ಸಿನಿಂದ ವಿಜಯ್​ ದೇವರಕೊಂಡ ಅವರಿಗೆ ದೇಶವ್ಯಾಪಿ ಜನಪ್ರಿಯತೆ ಸಿಕ್ಕಿತು. ನಂತರ ಅವರು ನಟಿಸಿದ ‘ಗೀತ ಗೋವಿಂದಂ’ ಚಿತ್ರ ಯಶಸ್ವಿ ಆಯಿತು. ಬಳಿಕ ಅವರ ‘ಡಿಯರ್​ ಕಾಮ್ರೇಡ್​’ ಸಿನಿಮಾ ಕೂಡ ಹಲವು ಭಾಷೆಗಳಿಗೆ ಡಬ್​ ಆಗಿ ತೆರೆಕಂಡಿತಾದರೂ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿರಲಿಲ್ಲ. ಈಗ ‘ಲೈಗರ್​’ ಚಿತ್ರದ ಮೂಲಕ ವಿಜಯ್​ ದೇವರಕೊಂಡ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ
Image
‘ಇದು ಕ್ರಾಸ್ ಬ್ರೀಡ್’; ಆ್ಯಕ್ಷನ್​ ಮೂಲಕ ‘ಲೈಗರ್’ ಟ್ರೇಲರ್​ನಲ್ಲಿ ಮಿಂಚಿದ ವಿಜಯ್ ದೇವರಕೊಂಡ
Image
ವಿಜಯ್ ದೇವರಕೊಂಡ ಜತೆ ಡೇಟ್ ಮಾಡಲು ಸಾರಾ-ಜಾನ್ವಿ ನಡುವೆ ಸ್ಪರ್ಧೆ
Image
‘ಅಕ್ಡಿ ಪಕ್ಡಿ’ ಸಾಂಗ್ ಮೂಲಕ ಗಮನ ಸೆಳೆದ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ
Image
Vijay Devarakonda: ಹುಡುಗಿ ಬೆನ್ನಲ್ಲಿ ವಿಜಯ್​ ದೇವರಕೊಂಡ ಟ್ಯಾಟೂ; ನೆಚ್ಚಿನ ಹೀರೋ ಮುಂದೆ ಯುವತಿ ಆನಂದಭಾಷ್ಪ

ಒಂದು ದಿನ ಕಳೆಯುವುದರೊಳಗೆ ಈ ಟ್ರೇಲರ್​ ಧೂಳೆಬ್ಬಿಸಿದೆ. ಹಿಂದಿ ಪ್ರೇಕ್ಷಕರು ‘ಲೈಗರ್​’ ಸಿನಿಮಾ ಮೇಲೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. 24 ಗಂಟೆಯಲ್ಲಿ ಹಿಂದಿ ಪ್ರೇಕ್ಷಕರು ಬರೋಬ್ಬರಿ 32 ಮಿಲಿಯನ್​ ಬಾರಿ ಟ್ರೇಲರ್​ ನೋಡಿದ್ದಾರೆ. ತೆಲುಗು ವರ್ಷನ್​ 17 ಮಿಲಿಯನ್​ ವೀವ್ಸ್​ ಪಡೆದುಕೊಂಡಿದೆ. ಕನ್ನಡದಲ್ಲಿ 7 ಲಕ್ಷ, ಮಲಯಾಳಂನಲ್ಲಿ 1 ಮಿಲಿಯನ್, ತಮಿಳಿನಲ್ಲಿ 2.2 ಮಿಲಿಯನ್​ ಬಾರಿ ವೀಕ್ಷಣೆ ಕಂಡಿದೆ. ಯೂಟ್ಯೂಬ್​ನಲ್ಲಿ ಟ್ರೆಂಡಿಂಗ್​ ನಂಬರ್ ಒನ್​ ಆಗಿರುವುದಕ್ಕೆ ‘ಲೈಗರ್​’ ಚಿತ್ರತಂಡ ಹೆಮ್ಮೆಪಟ್ಟುಕೊಂಡಿದೆ.

ವಿಜಯ್​ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮಾತ್ರವಲ್ಲದೇ ರಮ್ಯಾ ಕೃಷ್ಣ, ಮಕರಂದ್ ದೇಶಪಾಂಡೆ ಮುಂತಾದವರು ಕೂಡ ‘ಲೈಗರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್​ ಮೈಕ್​ ಟೈಸನ್​ ಅವರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿರುವುದು ವಿಶೇಷ. ಕರಣ್​ ಜೋಹರ್​, ಪುರಿ ಜಗನ್ನಾಥ್​, ಚಾರ್ಮಿ ಕೌರ್​ ಮುಂತಾದವರು ಜತೆಗೂಡಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!