AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಎದುರು ಸೆಣೆಸಲು ಮುಂದಾದ ವಿಜಯ್ ದೇವರಕೊಂಡ; ಇದಕ್ಕಿದೆ ಟ್ವಿಸ್ಟ್

‘ದಿ ಫ್ಯಾಮಿಲಿ ಸ್ಟಾರ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಲುಂಗಿ-ಟಿ ಶರ್ಟ್ ಧರಿಸಿ ಹೆಗಲಮೇಲೆ ಚೀಲ ಹಿಡಿದು ಬಾಯಲ್ಲಿ ರೇಷನ್ ಕಾರ್ಡ್ ಇಟ್ಟುಕೊಂಡು ದೇವರಕೊಂಡ ಓಡಿ ಬರುತ್ತಿದ್ದಾರೆ. ಹೊಸ ಪೋಸ್ಟರ್ ಸಖತ್ ವೈರಲ್ ಆಗಿದೆ.

‘ದೇವರ’ ಎದುರು ಸೆಣೆಸಲು ಮುಂದಾದ ವಿಜಯ್ ದೇವರಕೊಂಡ; ಇದಕ್ಕಿದೆ ಟ್ವಿಸ್ಟ್
ವಿಜಯ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Feb 03, 2024 | 7:26 AM

Share

ವಿಜಯ್ ದೇವರಕೊಂಡ (Vijay Devarakonda) ನಟನೆಯ, ದಿಲ್ ರಾಜು ನಿರ್ಮಾಣದ ‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ತೆಲುಗಿನಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ನಿರ್ಮಾಪಕ ದಿಲ್ ರಾಜು ಅವರು ಇತ್ತೀಚೆಗೆ ಅಪ್​ಡೇಟ್​ ಒಂದನ್ನು ಕೊಟ್ಟಿದ್ದರು. ‘ದೇವರ’ ಸಿನಿಮಾ ಏಪ್ರಿಲ್ 5ಕ್ಕೆ ರಿಲೀಸ್ ಆಗಿಲ್ಲ ಎಂದರೆ ಆ ದಿನಾಂಕದಂದು ತಮ್ಮ ಸಿನಿಮಾ ರಿಲೀಸ್ ಮಾಡುವುದಾಗಿ ಹೇಳಿಕೊಂಡಿದ್ದರು. ಈಗ ಏಪ್ರಿಲ್ 5ರಂದು ‘ದಿ ಫ್ಯಾಮಿಲಿ ಸ್ಟಾರ್’ ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿದೆ. ಈ ಮೂಲಕ ‘ದೇವರ’ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಯಿತೇ ಎನ್ನುವ ಪ್ರಶ್ನೆ ಮೂಡಿದೆ.

‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಲುಂಗಿ-ಟಿ ಶರ್ಟ್ ಧರಿಸಿ ಹೆಗಲಮೇಲೆ ಚೀಲ ಹಿಡಿದು ಬಾಯಲ್ಲಿ ರೇಷನ್ ಕಾರ್ಡ್ ಇಟ್ಟುಕೊಂಡು ವಿಜಯ್ ದೇವರಕೊಂಡ ಅವರು ಓಡಿ ಬರುತ್ತಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಪೋಸ್ಟರ್​ನಲ್ಲಿ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗಿದೆ. ‘ಏಪ್ರಿಲ್ 5ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ’ ಎಂದು ಮಾಹಿತಿ ನೀಡಲಾಗಿದೆ.

ಫ್ಯಾಮಿಲಿ ಸ್ಟಾರ್ ಪೋಸ್ಟರ್

‘ದೇವರ’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ. ಜೂನಿಯರ್ ಎನ್​ಟಿಆರ್ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಎದುರು ಯಾವುದೇ ತಂಡ ಬರಲು ಇಷ್ಟಪಡುವುದಿಲ್ಲ. ಅದರಲ್ಲೂ ದಿಲ್ ರಾಜು ಅಂತಹ ಹಿರಿಯ ನಿರ್ಮಾಪಕರು ಈ ವಿಚಾರದಲ್ಲಿ ಪಕ್ಕಾ ಲೆಕ್ಕಾಚಾರ ಹಾಕಿರುತ್ತಾರೆ. ‘ದೇವರ’ ಸಿನಿಮಾ ತಂಡದ ಜೊತೆ ಮಾತನಾಡಿದ ಬಳಿಕವೇ ಅವರು ಡೇಟ್ ಫೈನಲ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ವಿಜಯ್ ದೇವರಕೊಂಡ ಜೊತೆ ಸಿನಿಮಾ ಮಾಡ್ತೀನಿ ಅನ್ನೋದು ಸುಳ್ಳು..

‘ದೇವರ’ ಸಿನಿಮಾ ಕೆಲಸಗಳು ಇನ್ನೂ ಬಾಕಿ ಇವೆ. ಹೀಗಾಗಿ, ಅವರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕುವ ಸಾಧ್ಯತೆ ಇದೆ.  ಈ ವಿಚಾರ ಕೇಳಿ ಜೂನಿಯರ್ ಎನ್​ಟಿಆರ್ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಚಿತ್ರವೇ ಕೊನೆ. ಇದಾದ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ, ಅವರ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇದಾದ ಬಳಿಕ ಅವರು ಹಿಂದಿಯ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್