
ವಿಜಯ್ ದೇವರಕೊಂಡ (Vijay Devarakonda) ನಟನೆಯ, ದಿಲ್ ರಾಜು ನಿರ್ಮಾಣದ ‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ತೆಲುಗಿನಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ನಿರ್ಮಾಪಕ ದಿಲ್ ರಾಜು ಅವರು ಇತ್ತೀಚೆಗೆ ಅಪ್ಡೇಟ್ ಒಂದನ್ನು ಕೊಟ್ಟಿದ್ದರು. ‘ದೇವರ’ ಸಿನಿಮಾ ಏಪ್ರಿಲ್ 5ಕ್ಕೆ ರಿಲೀಸ್ ಆಗಿಲ್ಲ ಎಂದರೆ ಆ ದಿನಾಂಕದಂದು ತಮ್ಮ ಸಿನಿಮಾ ರಿಲೀಸ್ ಮಾಡುವುದಾಗಿ ಹೇಳಿಕೊಂಡಿದ್ದರು. ಈಗ ಏಪ್ರಿಲ್ 5ರಂದು ‘ದಿ ಫ್ಯಾಮಿಲಿ ಸ್ಟಾರ್’ ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿದೆ. ಈ ಮೂಲಕ ‘ದೇವರ’ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಯಿತೇ ಎನ್ನುವ ಪ್ರಶ್ನೆ ಮೂಡಿದೆ.
‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್ನಲ್ಲಿ ಲುಂಗಿ-ಟಿ ಶರ್ಟ್ ಧರಿಸಿ ಹೆಗಲಮೇಲೆ ಚೀಲ ಹಿಡಿದು ಬಾಯಲ್ಲಿ ರೇಷನ್ ಕಾರ್ಡ್ ಇಟ್ಟುಕೊಂಡು ವಿಜಯ್ ದೇವರಕೊಂಡ ಅವರು ಓಡಿ ಬರುತ್ತಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಪೋಸ್ಟರ್ನಲ್ಲಿ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗಿದೆ. ‘ಏಪ್ರಿಲ್ 5ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ’ ಎಂದು ಮಾಹಿತಿ ನೀಡಲಾಗಿದೆ.
#TheFamilyStar Releasing On April 5 💘#VijayDevarkonda #MrunalThakur #GopiSundar #Parasuram#TheFamilyStarFromApril5 pic.twitter.com/7wYqhi6FLE
— CineWithillu (@illu_Tweetz) February 2, 2024
‘ದೇವರ’ ಸಿನಿಮಾ ದೊಡ್ಡ ಬಜೆಟ್ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ. ಜೂನಿಯರ್ ಎನ್ಟಿಆರ್ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಎದುರು ಯಾವುದೇ ತಂಡ ಬರಲು ಇಷ್ಟಪಡುವುದಿಲ್ಲ. ಅದರಲ್ಲೂ ದಿಲ್ ರಾಜು ಅಂತಹ ಹಿರಿಯ ನಿರ್ಮಾಪಕರು ಈ ವಿಚಾರದಲ್ಲಿ ಪಕ್ಕಾ ಲೆಕ್ಕಾಚಾರ ಹಾಕಿರುತ್ತಾರೆ. ‘ದೇವರ’ ಸಿನಿಮಾ ತಂಡದ ಜೊತೆ ಮಾತನಾಡಿದ ಬಳಿಕವೇ ಅವರು ಡೇಟ್ ಫೈನಲ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ವಿಜಯ್ ದೇವರಕೊಂಡ ಜೊತೆ ಸಿನಿಮಾ ಮಾಡ್ತೀನಿ ಅನ್ನೋದು ಸುಳ್ಳು..
‘ದೇವರ’ ಸಿನಿಮಾ ಕೆಲಸಗಳು ಇನ್ನೂ ಬಾಕಿ ಇವೆ. ಹೀಗಾಗಿ, ಅವರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕುವ ಸಾಧ್ಯತೆ ಇದೆ. ಈ ವಿಚಾರ ಕೇಳಿ ಜೂನಿಯರ್ ಎನ್ಟಿಆರ್ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ‘ಆರ್ಆರ್ಆರ್’ ಚಿತ್ರವೇ ಕೊನೆ. ಇದಾದ ಬಳಿಕ ಜೂನಿಯರ್ ಎನ್ಟಿಆರ್ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ, ಅವರ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇದಾದ ಬಳಿಕ ಅವರು ಹಿಂದಿಯ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ