ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?

‘ಅರ್ಜುನ್​ ರೆಡ್ಡಿ’, ‘ಗೀತ ಗೋವಿಂದಂ’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ವಿಜಯ್​ ದೇವರಕೊಂಡ ಅವರಿಗಿದೆ. ಇದರ ಜತೆಗೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ತಮ್ಮದೇ ಬಟ್ಟೆ ಬ್ರ್ಯಾಂಡ್​ ಕೂಡ ಹೊಂದಿದ್ದಾರೆ.

ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?
ವಿಜಯ್​ ದೇವರಕೊಂಡ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 24, 2021 | 3:14 PM

ಅರ್ಜುನ್​ ರೆಡ್ಡಿ ನಟನೆ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಿಗೆ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗ ಇದೆ. ‘ಲೈಗರ್​’ ಮೂಲಕ ಅವರು ಬಾಲಿವುಡ್​ಗೂ ಕಾಲಿಡುತ್ತಿದ್ದಾರೆ. ಈ ಮಧ್ಯೆ ಅವರು ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಉದ್ಯಮವೊಂದಕ್ಕೆ ಕೈ ಹಾಕಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಅರ್ಜುನ್​ ರೆಡ್ಡಿ’, ‘ಗೀತ ಗೋವಿಂದಂ’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ವಿಜಯ್​ ದೇವರಕೊಂಡ ಅವರಿಗಿದೆ. ಇದರ ಜತೆಗೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ತಮ್ಮದೇ ಬಟ್ಟೆ ಬ್ರ್ಯಾಂಡ್​ ಕೂಡ ಹೊಂದಿದ್ದಾರೆ. ರೌಡಿ ವಿಯರ್​ ಅನ್ನೋದು ಅವರ ಬಟ್ಟೆ ಬ್ರ್ಯಾಂಡ್​ ಹೆಸರು. ಈಗ ವಿಜಯ್​ ತಮ್ಮದೇ ಮಲ್ಟಿಪ್ಲೆಕ್ಸ್​ ಆರಂಭಿಸಿದ್ದಾರೆ. ಈ ಮೂಲಕ ಅವರು ತಮ್ಮ ಹಳೆಯ ಕನಸನ್ನು ನನಸು ಮಾಡಿಕೊಂಡಿದ್ದಾರೆ

ಟ್ವಿಟರ್​ನಲ್ಲಿ ಈ ಬಗ್ಗೆ ವಿಜಯ್​ ದೇವರಕೊಂಡ ಬರೆದುಕೊಂಡಿದ್ದಾರೆ. ‘ನಟನಾಗುವ ಕನಸಿನಿಂದ ಈಗ ನನ್ನ ಸ್ವಂತ ಮಲ್ಟಿಪ್ಲೆಕ್ಸ್ ಚಿತ್ರಮಂದಿರ ಹೊಂದುವ ಕನಸನ್ನೂ ನನಸು ಮಾಡಿಕೊಂಡಿದ್ದೇನೆ. ಏಷಿಯನ್ ವಿಜಯ್ ದೇವರಕೊಂಡ (ಎವಿಡಿ) ಚಿತ್ರಮಂದಿರವನ್ನು ನಿಮಗೆ ಪರಿಚಯಿಸುತ್ತಿದ್ದೇನೆ. ಮೊದಲ ಎವಿಡಿ ಚಿತ್ರಮಂದಿರ ಮಹಬೂಬ್ ನಗರದಲ್ಲಿ, ಸೆಪ್ಟೆಂಬರ್ 24, 2021ರಿಂದ ಪ್ರಾರಂಭವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇಂದು ವಿಜಯ್​ ಅವರ ತಾಯಿಯ ಜನ್ಮದಿನ. ಈ ವಿಶೇಷ ದಿನದಂದು ಚಿತ್ರಮಂದಿರ ಆರಂಭಗೊಂಡಿದೆ ಅನ್ನೋದು ವಿಶೇಷ.

ವಿಜಯ್​ ದೇವರಕೊಂಡ ಅವರು ದೇಶಾದ್ಯಂತ ತಮ್ಮ ಉದ್ಯಮವನ್ನು ವಿಸ್ತರಿಸುವ ಆಲೋಚನೆ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಅವರು ಬೇರೆ ಬೇರೆ ನಗರಗಳಲ್ಲಿ ಮಲ್ಟಿಫ್ಲೆಕ್ಸ್​ ಮಾಡಲಿದ್ದಾರೆ. ಬೆಂಗಳೂರಿನ ಜತೆಗೂ ವಿಜಯ್​ ದೇವರಕೊಂಡ ಒಳ್ಳೆಯ ನಂಟು ಹೊಂದಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅವರು ಬೆಂಗಳೂರಲ್ಲೂ ಹೊಸ ಚಿತ್ರಮಂದಿರ ಆರಂಭಿಸಿದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: Nikhil Kumaraswamy: ಮಗುವನ್ನು ಎತ್ತಿ ಮುದ್ದಾಡಿದ ನಿಖಿಲ್; ಪುತ್ರ ಹೇಗಿದ್ದಾನೆ?

Rashmika Mandanna: ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್ ದೇವರಕೊಂಡ; ವಿಡಿಯೋ ವೈರಲ್

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್