ಹೆಮ್ಮೆಯಿಂದ ಗರ್ಲ್​ಫ್ರೆಂಡ್​ ಪರಿಚಯಿಸಿದ ವಿಜಯ್ ದೇವರಕೊಂಡ

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್​ ಹೀರೋ ವಿಜಯ್ ದೇವರಕೊಂಡ ಅವರು ಅನೇಕ ವರ್ಷಗಳಿಂದ ಆಪ್ತವಾಗಿದ್ದಾರೆ. ಹಲವು ಸಂದರ್ಭಗಳಲ್ಲಿ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಂಡು ಸುದ್ದಿ ಆಗಿದ್ದಾರೆ. ವೃತ್ತಿಜೀವನದಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರು ಪರಸ್ಪರ ಬೆಂಬಲವಾಗಿ ನಿಂತಿದ್ದಾರೆ. ಇಬ್ಬರೂ ರಿಲೇಷನ್​ಶಿಪ್​ನಲ್ಲಿ ಇದ್ದಾರೆಂಬ ಗಾಸಿಪ್ ಕೂಡ ಇದೆ.

ಹೆಮ್ಮೆಯಿಂದ ಗರ್ಲ್​ಫ್ರೆಂಡ್​ ಪರಿಚಯಿಸಿದ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ
Follow us
ಮದನ್​ ಕುಮಾರ್​
|

Updated on: Dec 09, 2024 | 3:33 PM

ನಟ ವಿಜಯ್ ದೇವರಕೊಂಡ ಅವರು ರಶ್ಮಿಕಾ ಮಂದಣ್ಣ ಜೊತೆ ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಪರಸ್ಪರ ಬೆಂಬಲವಾಗಿ ಅವರು ನಿಂತುಕೊಂಡಿದ್ದಾರೆ. ಇಬ್ಬರೂ ರಿಲೇಷನ್​ಶಿಪ್​ನಲ್ಲಿ ಇದ್ದಾರೆ ಎಂಬ ಗಾಸಿಪ್ ಇದೆ. ಆದರೆ ಈ ಬಗ್ಗೆ ಅವರು ಸಾರ್ವಜನಿಕವಾಗಿ ಏನನ್ನೂ ಹೇಳಿಲ್ಲ. ಈಗ ರಶ್ಮಿಕಾ ಮಂದಣ್ಣ ನಟಿಸಿರುವ ‘ದಿ ಗರ್ಲ್​ಫ್ರೆಂಡ್​’ ಸಿನಿಮಾದ ಟೀಸರ್​ ಅನ್ನು ವಿಜಯ್ ದೇವರಕೊಂಡ ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ರಶ್ಮಿಕಾ ಬಗ್ಗೆ ಅವರು ಸಿಕ್ಕಾಪಟ್ಟೆ ಹೊಗಳಿಕೆಯ ಮಾತುಗಳನ್ನು ಹೇಳಿದ್ದಾರೆ.

‘ದಿ ಗರ್ಲ್​ಫ್ರೆಂಡ್’ ಸಿನಿಮಾದಲ್ಲಿ ದೀಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ರಾಹುಲ್ ರವೀಂದ್ರನ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಸುವ ಟೀಸರ್​ ಬಿಡುಗಡೆ ಆಗಿದೆ. ವಿಜಯ್ ದೇವರಕೊಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಟೀಸರ್​ ಹಂಚಿಕೊಂಡಿದ್ದಾರೆ.

‘ಜಗತ್ತಿಗೆ ದಿ ಗರ್ಲ್​ಫ್ರೆಂಡ್ ಪರಿಚಯಿಸುತ್ತಿದ್ದೇನೆ. ಈ ಟೀಸರ್​ನ ಪ್ರತಿ ದೃಶ್ಯವೂ ನನಗೆ ಇಷ್ಟ ಆಯಿತು. ಈ ಕಥೆ ತೆರೆದುಕೊಳ್ಳುವುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ. ನಮ್ಮಂಥ ಹಲವು ನಟರಿಗೆ ರಶ್ಮಿಕಾ ಅವರು ಅದೃಷ್ಟದ ನಟಿ. ದೊಡ್ಡ ದೊಡ್ಡ ಯಶಸ್ಸಿನ ಭಾಗವಾಗಿದ್ದಾರೆ. ಅವರು ದೊಡ್ಡ ಸ್ಟಾರ್​ ನಟಿಯಾಗಿ ಬೆಳೆದಿದ್ದರೂ ಕೂಡ ನಾನು 8 ವರ್ಷಗಳ ಹಿಂದೆ ಭೇಟಿಯಾದ ಹುಡುಗಿಯ ರೀತಿಯೇ ಇದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲೆಂದು ಹಾರೈಸುತ್ತೇನೆ’ ಎಂದು ವಿಜಯ್ ದೇವರಕೊಂಡ ಅವರು ‘ಎಕ್ಸ್​’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಟಾಪ್​ ನಟಿಯಾಗಿ ಮಿಂಚುತ್ತಿದ್ದಾರೆ. ಅವರು ನಟಿಸಿದ ಬಹುತೇಕ ಸಿನಿಮಾಗಳು ಸೂಪರ್​ ಹಿಟ್ ಆಗಿವೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ವಿಶೇಷ ಸೀರೆ ಧರಿಸಿದ ರಶ್ಮಿಕಾ ಮಂದಣ್ಣ

ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ನಟಿಸಿದ ‘ಪುಷ್ಪ 2’ ಸಿನಿಮಾ ದೊಡ್ಡ ದಾಖಲೆ ಬರೆದಿದೆ. 3 ದಿನಕ್ಕೆ ವಿಶ್ವಾದ್ಯಂತ 621 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಅಭೂತಪೂರ್ವವಾಗಿ ಪ್ರದರ್ಶನ ಕಾಣುತ್ತಿರುವಾಗಲೇ ‘ದಿ ಗರ್ಲ್​ಫ್ರೆಂಡ್’ ಟೀಸರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ