‘ಖುಷಿ’ ಸಿನಿಮಾ (Kushi Movie) ಮೂಲಕ ಯಶಸ್ಸು ಹೆಚ್ಚಿಸಿಕೊಂಡವರು ವಿಜಯ್ ದೇವರಕೊಂಡ. ಈಗ ಅವರು ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಪರಶುರಾಮ್ ನಿರ್ದೇಶಿಸಿದ್ದಾರೆ. ಈ ಸಿನಿಮಾ ತಂಡದಿಂದ ಬಿಡುಗಡೆಯಾಗಿರುವ ಪೋಸ್ಟರ್ ಹಾಗೂ ಟೀಸರ್ ಗಮನ ಸೆಳೆಯುತ್ತಿದೆ. ನಿರ್ಮಾಪಕ ದಿಲ್ ರಾಜು ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಸಂಬಂಧಿಸಿದ ಹೊಸ ಹೊಸ ಅಪ್ಡೇಟ್ಗಳನ್ನು ತಂಡ ನೀಡುತ್ತಲೇ ಇದೆ. ಈಗ ವಿಜಯ್ ದೇವರಕೊಂಡ ಧರಿಸಿರುವ ಕನ್ನಡಕ ಗಮನ ಸೆಳೆಯುತ್ತಿದೆ.
‘ರೌಡಿ’ ಹೆಸರಿನ ಬಟ್ಟೆ ಬ್ರ್ಯಾಂಡ್ ಹೊಂದಿದ್ದಾರೆ ವಿಜಯ್ ದೇವರಕೊಂಡ. ಅವರು ಇತ್ತೀಚೆಗೆ ಈ ಬಟ್ಟೆ ಹಾಕಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಇದು ಸಿಂಪಲ್ ಏರ್ಪೋರ್ಟ್ ಲುಕ್ ಆಗಿದ್ದರೂ ಈ ಬಟ್ಟೆಗಳು ಸಖತ್ ದುಬಾರಿ ಆಗಿವೆ. ಇತ್ತೀಚೆಗೆ ವಿಜಯ್ ದೇವರಕೊಂಡ ತೆಲಂಗಾಣ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ಬಂದಿದ್ದರು. ಅವರು ಹಾಕಿರುವ ಕನ್ನಡಕ ಗಮನ ಸೆಳೆದಿದೆ.
ವಿಜಯ್ ದೇವರಕೊಂಡ ಅವರು ಮತದಾನಕ್ಕೆ ಆಗಮಿಸಿದ ಸಂದರ್ಭದಲ್ಲಿ ಗಿವೆಂಚಿ ಬ್ರ್ಯಾಂಡ್ನ ಕನ್ನಡಕ ಧರಿಸಿದ್ದರು. ಈ ಕನ್ನಡಕದ ಬೆಲೆ 1.58 ಲಕ್ಷ ರೂಪಾಯಿ. ಈ ಬಗ್ಗೆ ನಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸದ್ಯ, ವಿಜಯ್ ಅವರ ಹೊಸ ಲುಕ್, ಸ್ಟೈಲಿಶ್ ಕನ್ನಡಕದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ
‘ಫ್ಯಾಮಿಲಿ ಸ್ಟಾರ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಒಂದು ಹಾಡಿನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ನಡೆದ ಈ ಸಿನಿಮಾದ ಶೂಟಿಂಗ್ನಲ್ಲಿ ರಶ್ಮಿಕಾ ಭಾಗವಹಿಸಿದ್ದರು ಎಂಬ ಮಾತು ಕೇಳಿಬರುತ್ತಿದೆ. ಆದರೆ, ಇದುವರೆಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ಇದನ್ನೂ ಓದಿ: ಗೆಳೆಯ ವಿಜಯ್ ದೇವರಕೊಂಡ ನಟನೆಯ ‘ಅರ್ಜುನ್ ರೆಡ್ಡಿ’ ಸಿನಿಮಾ ಬಗ್ಗೆ ರಶ್ಮಿಕಾ ಮಂದಣ್ಣ ಅಭಿಪ್ರಾಯವೇನು?
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಬ್ಬರೂ ಒಂದೇ ರೀತಿಯ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:30 pm, Mon, 4 December 23