AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ-ರಶ್ಮಿಕಾ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಎರಡು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ‘ಗೀತಾ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೆಡ್’ ಎರಡೂ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಇದೀಗ ಮೂರನೇ ಬಾರಿಗೆ ಈ ರಿಯಲ್ ಲೈಫ್ ಜೋಡಿ ತೆರೆಯ ಮೇಲೆ ಜೋಡಿಯಾಗಿ ನಟಿಸಿದ್ದಾರೆ. ಸಿನಿಮಾದ ಹೆಸರು ‘ರಣಬಾಲಿ’ ಈ ಸಿನಿಮಾದ ಬಿಡುಗಡೆ ದಿನಾಂಕನ್ನು ಇದೀಗ ಚಿತ್ರತಂಡ ಘೋಷಣೆ ಮಾಡಿದೆ.

ವಿಜಯ್ ದೇವರಕೊಂಡ-ರಶ್ಮಿಕಾ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
Ranabaali Movie
ಮಂಜುನಾಥ ಸಿ.
|

Updated on: Sep 08, 2026 | 3:45 PM

Share

ಮುಖ್ಯಾಂಶಗಳು

  • ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಹೊಸ ಸಿನಿಮಾ
  • ವಿಜಯ್-ರಶ್ಮಿಕಾ ‘ರಣಬಾಲಿ’ ಸಿನಿಮಾನಲ್ಲಿ ನಟಿಸಿದ್ದಾರೆ.
  • ‘ರಣಬಾಲಿ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಟಾಲಿವುಡ್​​ನ ಬಲು ಜನಪ್ರಿಯ ಮತ್ತು ಯಶಸ್ವಿ ಜೋಡಿ ಆಗಿತ್ತು. ವಿಜಯ್ ಹಾಗೂ ರಶ್ಮಿಕಾ ಒಟ್ಟಿಗೆ ನಟಿಸಿದ್ದ ‘ಗೀತಾ ಗೋವಿಂದಾ’ ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಅದಾದ ಬಳಿಕ ಬಂದ ‘ಡಿಯರ್ ಕಾಮ್ರೆಡ್’ ಸಿನಿಮಾ ಸಹ ಹಿಟ್ ಎನಿಸಿಕೊಂಡಿತ್ತು. ಜೊತೆಗೆ ಈ ಜೋಡಿ ತೆಲುಗು ಚಿತ್ರರಂಗದ ಬಲು ಜನಪ್ರಿಯ ಜೋಡಿ ಎನಿಸಿಕೊಂಡಿತು. ಆದರೆ 2019ರ ಬಳಿಕ ಇಬ್ಬರೂ ಒಟ್ಟಿಗೆ ನಟಿಸಿದ್ದೇ ಇಲ್ಲ. ಇದೀಗ ಏಳು ವರ್ಷದ ಬಳಿಕ ಇಬ್ಬರೂ ಒಟ್ಟಿಗೆ ‘ರಣಬಾಲಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಬಿಡುಗಡೆ ದಿನಾಂಕ ಇದೀಗ ಘೋಷಣೆ ಮಾಡಲಾಗಿದೆ.

ರಾಹುಲ್ ಸಂಕೃತ್ಯನ್ ನಿರ್ದೇಶನ ಮಾಡಿರುವ ‘ರಣಬಾಲಿ’ ಸಿನಿಮಾನಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಬಹಳ ವರ್ಷಗಳ ಬಳಿಕ ಒಟ್ಟಿಗೆ ನಟಿಸಿದ್ದಾರೆ. ಇದೊಂದು ಐತಿಹಾಸಿಕ ಹಿನ್ನೆಲೆಯುಳ್ಳ ಕತೆಯನ್ನು ಒಳಗೊಂಡಿದೆ. ತೆಲಂಗಾಣ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆಯಂತೆ. ಸಿನಿಮಾದ ಪೋಸ್ಟರ್ ಒಂದು ಈಗಾಗಲೇ ಬಿಡುಗಡೆ ಆಗಿದೆ. ಪೋಸ್ಟರ್​​ನಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ, ವಧು-ವರರ ವೇಷದಲ್ಲಿ ಕುಳಿತಿದ್ದಾರೆ. ರಶ್ಮಿಕಾರ ಮುಖಭಾವವಂತೂ ಬಹಳ ಗಮನ ಸೆಳೆಯುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನು ಇದೀಗ ಘೊಷಣೆ ಮಾಡಲಾಗಿದೆ.

‘ರಣಬಾಲಿ’ ಸಿನಿಮಾದ ಟೀಸರ್ ನಾಳೆ (ಸೆಪ್ಟೆಂಬರ್ 09) ಬಿಡುಗಡೆ ಆಗಲಿದೆ. ಸಾಮಾನ್ಯವಾಗಿ ಟೀಸರ್ ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗುತ್ತದೆ. ಅದರೆ ಚಿತ್ರತಂಡವು ಟೀಸರ್ ಬಿಡುಗಡೆ ದಿನಾಂಕದ ಘೋಷಣೆ ಜೊತೆಗೆ ಸಿನಿಮಾ ಬಿಡುಗಡೆ ದಿನಾಂಕವನ್ನೂ ಘೋಷಿಸಿದೆ. ‘ರಣಬಾಲಿ’ ಸಿನಿಮಾವು ಅಕ್ಟೋಬರ್ 16ರಂದು ರಿಲೀಸ್ ಆಗಲಿದೆ. ದಸರಾ ಸಂಭ್ರಮದ ನಡುವೆ ಸಿನಿಮಾದ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ. ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾದ ಟೈಟಲ್ ಘೋಷಿಸಲಾಗಿತ್ತು, ಈಗ ಟೀಸರ್ ಮೂಲಕ ಸಿನಿಮಾದ ಮೇಲಿನ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಲು ಚಿತ್ರತಂಡ ಸಿದ್ಧವಾಗಿದೆ.

ಇದನ್ನೂ ಓದಿ:ಬಾಲಿವುಡ್​​ ಜನಪ್ರಿಯ ಟಾಕ್ ಶೋಗೆ ರಶ್ಮಿಕಾ ಮಂದಣ್ಣ ಅತಿಥಿ: ಯಾವುದದು?

ಮೊದಲ ಎರಡು ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿದ್ದು, ಇದೀಗ ಈ ಜೋಡಿಯ ಮೂರನೇ ಸಿನಿಮಾ ಸಹ ಹಿಟ್ ಆಗಲಿದೆಯೇ ಕಾದು ನೋಡಬೇಕಿದೆ. ರಾಯಲಸೀಮಾ ಹಿನ್ನೆಲೆಯಲ್ಲಿ ಈ ಸಿನಿಮಾ ಸಾಗಲಿದೆ ಎಂದು ತಿಳಿದುಬಂದಿದೆ. ಈ ಚಿತ್ರಕ್ಕೆ ಜೇಕ್ಸ್ ಬಿಜಾಯ್ ಸಂಗೀತ ಸಂಯೋಜಿಸುತ್ತಿದ್ದಾರೆ. ರಾಹುಲ್ ಸಾಂಕೃತ್ಯಾಯನ ಈ ಹಿಂದೆ ಕೆಲ ಒಳ್ಳೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾದ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ವಿಜಯ್ ದೇವರಕೊಂಡ ಅವರು ಹಿಟ್ ಸಿನಿಮಾ ಒಂದನ್ನು ನೀಡಿ ಸಾಕಷ್ಟು ಸಮಯ ಆಗಿದೆ. ಅವರ ಸಿನಿಮಾಗಳು ಸತತವಾಗಿ ಸೋಲುತ್ತಿವೆ. ಪತ್ನಿಯ ಮೂಲಕವಾದರೂ ಅವರಿಗೆ ಯಶಸ್ಸು ಮರಳುತ್ತದೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us