‘ವಿಜು ಮತ್ತು ನಾನು ಒಟ್ಟಿಗೆ ಬೆಳೆದವರು’: ದೇವರಕೊಂಡ ಬಗ್ಗೆ ರಶ್ಮಿಕಾ ಓಪನ್ ಮಾತು
‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಚಿತ್ರಗಳಲ್ಲಿ ಜೋಡಿಯಾಗಿ ನಟಿಸಿದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ರಿಯಲ್ ಲೈಫ್ನಲ್ಲಿಯೂ ಬಹಳ ಆಪ್ತವಾಗಿದ್ದಾರೆ. ಆ ಕುರಿತು ರಶ್ಮಿಕಾ ಮಾತನಾಡಿದ್ದಾರೆ. ‘ನನ್ನ ಬದುಕಿನಲ್ಲಿ ವಿಜಯ್ ದೇವರಕೊಂಡ ಅವರು ಎಲ್ಲರಿಗಿಂತ ಹೆಚ್ಚಾಗಿ ಬೆಂಬಲ ನೀಡಿದ್ದಾರೆ. ಹಾಗಾಗಿ ನಾನು ಅವರನ್ನು ನಿಜವಾಗಿಯೂ ಗೌರವಿಸುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ (Vijay Deverakonda) ಅವರು ಚಿತ್ರರಂಗದಲ್ಲಿ ಬೆಸ್ಟ್ ಜೋಡಿಯಾಗಿ ಗುರುತಿಸಿಕೊಂಡಿದ್ದಾರೆ. ಅವರಿಬ್ಬರನ್ನು ತೆರೆಮೇಲೆ ಜೊತೆಯಾಗಿ ನೋಡಲು ಫ್ಯಾನ್ಸ್ ಇಷ್ಟಪಡುತ್ತಾರೆ. ಅಲ್ಲದೇ ರಿಯಲ್ ಲೈಫ್ನಲ್ಲಿ ಕೂಡ ಅವರು ಮದುವೆ ಆಗಲಿ ಎಂಬುದು ಅಭಿಮಾನಿಗಳ ಆಸೆ. ತಾವಿಬ್ಬರು ಪರಸ್ಪರ ಪ್ರೀತಿಸುತ್ತಿದ್ದೇವೆ ಎಂದು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಹಾಗಿದ್ದರೂ ಕೂಡ ತಮ್ಮ ಬದುಕಿನಲ್ಲಿ ವಿಜಯ್ ದೇವರಕೊಂಡ ಓರ್ವ ಸ್ಪೆಷಲ್ ವ್ಯಕ್ತಿ ಎಂದು ರಶ್ಮಿಕಾ ಹೇಳಿದ್ದಾರೆ. ಅಲ್ಲದೇ, ಅವರನ್ನು ವಿಜು ಎಂದು ಕೂಡ ಪ್ರೀತಿಯಿಂದ ಕರೆದಿದ್ದಾರೆ.
‘ವಿ ಆರ್ ಯುವ’ ನಡೆಸಿದ ಸಂದರ್ಶನದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಬಗ್ಗೆ ಮಾತನಾಡಿದ್ದಾರೆ. ‘ನಾನು ಮತ್ತು ವಿಜು ಒಂದು ರೀತಿಯಲ್ಲಿ ಒಟ್ಟಿಗೆ ಬೆಳೆದವರು. ಈಗ ನಾನು ಮಾಡುತ್ತಿರುವ ಎಲ್ಲದರಲ್ಲೂ ಅವರ ಕೊಡುಗೆ ಇದೆ. ಎಲ್ಲ ಕೆಲಸದಲ್ಲೂ ನಾನು ಅವರ ಸಲಹೆ ಪಡೆಯುತ್ತೇನೆ. ಅವರ ಅಭಿಪ್ರಾಯ ನನಗೆ ಬೇಕು. ಎಲ್ಲದಕ್ಕೂ ಯೆಸ್ ಎನ್ನುವ ವ್ಯಕ್ತಿ ಅವರಲ್ಲ. ಇದು ಒಳ್ಳೆಯದು, ಇದು ಕೆಟ್ಟದು, ಇದರ ಬಗ್ಗೆ ನನಗೆ ಹೀಗೆ ಅನಿಸುತ್ತಿದೆ ಅಂತ ಅವರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.
ಇದನ್ನೂ ಓದಿ: ಡೀಪ್ಫೇಕ್ ವಿಡಿಯೋ ಬಗ್ಗೆ ರಶ್ಮಿಕಾ ಮಂದಣ್ಣ ಧ್ವನಿ ಎತ್ತಿದ್ದೇಕೆ? ನಟಿಯೇ ಕೊಟ್ಟರು ಉತ್ತರ
‘ನನ್ನ ಬದುಕಿನಲ್ಲಿ ವಿಜಯ್ ದೇವರಕೊಂಡ ಅವರು ಎಲ್ಲರಿಗಿಂತ ಹೆಚ್ಚಾಗಿ ಬೆಂಬಲ ನೀಡಿದ್ದಾರೆ. ಹಾಗಾಗಿ ನಾನು ಅವರನ್ನು ನಿಜವಾಗಿಯೂ ಗೌರವಿಸುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಜೊತೆಯಾಗಿ ನಟಿಸಿದರು. ಅಲ್ಲಿಂದ ಅವರಿಬ್ಬರ ನಡುವೆ ಉತ್ತಮ ಬಾಂಧವ್ಯ ಬೆಳೆಯಿತು. ಇಬ್ಬರೂ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಹಲವು ಪ್ರಾಜೆಕ್ಟ್ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.
ಇದನ್ನೂ ಓದಿ: ಡೀಪ್ಫೇಕ್ ಆರೋಪಿ ಅರೆಸ್ಟ್; ಪೊಲೀಸರಿಗೆ ರಶ್ಮಿಕಾ ಧನ್ಯವಾದ
ಈ ವರ್ಷ ಫೆಬ್ರವರಿಯಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಅದನ್ನು ಅವರು ತಳ್ಳಿಹಾಕಿದ್ದಾರೆ. ‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆ ಮಾಡಿಕೊಳ್ಳುತ್ತಿಲ್ಲ. ಪ್ರತಿ ಎರಡು ವರ್ಷಕ್ಕೊಮ್ಮೆ ನಾನು ಮದುವೆ ಆಗಬೇಕು ಅಂತ ಮಾಧ್ಯಮದವರು ಬಯಸಿರಬಹುದು. ಪ್ರತಿ ವರ್ಷ ನನಗೆ ಇಂಥ ಗಾಸಿಪ್ ಕೇಳಿಸುತ್ತದೆ’ ಎನ್ನುವ ಮೂಲಕ ವಿಜಯ್ ದೇವರಕೊಂಡ ಅವರು ಎಂಗೇಜ್ಮೆಂಟ್ ಕುರಿತ ಗಾಳಿಸುದ್ದಿಗೆ ಫುಲ್ಸ್ಟಾಪ್ ಹಾಕಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ