ತಾಯಿ ಜೊತೆ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ವಿಜಯ್ ದೇವರಕೊಂಡ
ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ವಿಜಯ್ ದೇವರಕೊಂಡ ಅವರು ಬಿಡುವು ಮಾಡಿಕೊಂಡು ಮಹಾ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಅವರ ಜೊತೆ ತಾಯಿ ಮಾಧವಿ ಕೂಡ ಪುಣ್ಯಸ್ನಾನ ಮಾಡಿದ್ದಾರೆ. ಹೊಸ ಸಿನಿಮಾದ ಟೀಸರ್ ಹಾಗೂ ಶೀರ್ಷಿಕೆ ಅನಾವರಣಕ್ಕೆ ದಿನಾಂಕ ಹತ್ತಿರ ಆಗಿದೆ. ಅದಕ್ಕೂ ಮುನ್ನ ವಿಜಯ್ ದೇವರಕೊಂಡ ಅವರು ಪುಣ್ಯಸ್ನಾನ ಮಾಡಿ ಸುದ್ದಿ ಆಗಿದ್ದಾರೆ.

ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ತೆರೆಮೇಲೆ ರಫ್ ಆ್ಯಂಡ್ ಟಫ್ ಪಾತ್ರ ಮಾಡಿದರೂ ಕೂಡ ರಿಯಲ್ ಲೈಫ್ನಲ್ಲಿ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಮಯ ಸಿಕ್ಕಾಗಲೆಲ್ಲ ಅವರು ಕುಟುಂಬದವರ ಜೊತೆ ಕಾಲ ಕಳೆಯುತ್ತಾರೆ. ಈಗ ಅವರು ತಾಯಿ ಮಾಧವಿ ಜೊತೆ ಕುಂಭಮೇಳದಲ್ಲಿ ಭಾಗಿ ಆಗಿದ್ದಾರೆ. ಭಾನುವಾರ (ಫೆಬ್ರವರಿ 9) ಮಧ್ಯಾಹ್ನ ಪ್ರಯಾಗ್ರಾಜ್ಗೆ ತೆರಳಿ ವಿಜಯ್ ದೇವರಕೊಂಡ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.
ವಿಜಯ್ ದೇವರಕೊಂಡ ಅವರು ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಕೇಸರಿ ಬಟ್ಟೆ ಹಾಗೂ ರುದ್ರಾಕ್ಷಿ ಮಾಲೆ ಧರಿಸಿ ಕಾಣಿಸಿಕೊಂಡಿದ್ದಾರೆ. ತಾಯಿ ಮಾಧವಿ ಜೊತೆ ವಿಜಯ್ ದೇವರಕೊಂಡು ಅವರು ಪ್ರಾರ್ಥನೆ ಮಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಇದಕ್ಕೂ ಮುನ್ನ ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಫೋಟೋಗಳು ಕೂಡ ವೈರಲ್ ಆಗಿದ್ದವು.
ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಅವರು ತೊಡಗಿಕೊಂಡಿದ್ದಾರೆ. ಅವರ 12ನೇ ಸಿನಿಮಾ ಬಗ್ಗೆ ಕೌತುಕ ಹೆಚ್ಚಿದೆ. ಸದ್ಯಕ್ಕೆ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಿಲ್ಲ. ತಾತ್ಕಾಲಿಕವಾಗಿ ‘VD12’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಶೀರ್ಷಿಕೆ ಮತ್ತು ಟೀಸರ್ ಫೆಬ್ರವರಿ 12ರಂದು ಅನಾವರಣ ಆಗಲಿದೆ. ಅದಕ್ಕೂ ಮುನ್ನ ವಿಜಯ್ ದೇವರಕೊಂಡ ಅವರು ಮಹಾಕುಂಭಮೇಳದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ವೃತ್ತಿಜೀವನದಲ್ಲಿ ವಿಜಯ್ ದೇವರಕೊಂಡ ಅವರು ಸೋಲು ಮತ್ತು ಗೆಲುವು ಎರಡನ್ನೂ ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರು ಖ್ಯಾತಿ ಗಳಿಸಿದ್ದಾರೆ. ಇನ್ನು, ವೈಯಕ್ತಿಕ ಜೀವನದ ಕಾರಣದಿಂದಲೂ ಅವರು ಸಾಕಷ್ಟು ಸುದ್ದಿ ಆಗುತ್ತಾರೆ. ನಟಿ ರಶ್ಮಿಕಾ ಮಂದಣ್ಣ ಜೊತೆ ವಿಜಯ್ ದೇವರಕೊಂಡ ಹೆಚ್ಚು ಆಪ್ತವಾಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೋಡಿಯಾಗಿ ಕಾಣಿಸಿಕೊಂಡಿದ್ದುಂಟು. ಅವರಿಬ್ಬರು ಪರಸ್ಪರರ ಸಿನಿಮಾಗಳಿಗೆ ಬೆಂಬಲವಾಗಿ ನಿಂತಿದ್ದಾರೆ.
ಇದನ್ನೂ ಓದಿ: ಕಾಲು ನೋವಿನಿಂದ ಸಂಪೂರ್ಣ ಚೇತರಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಕಾಲಿಗೆ ಪಟ್ಟು ಮಾಡಿಕೊಂಡಾಗ ಅವರು ಕಾರು ಹತ್ತಲು ವಿಜಯ್ ದೇವರಕೊಂಡ ಸಹಾಯ ಮಾಡಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿತ್ತು. ಆ ಬಳಿಕ ರಶ್ಮಿಕಾ ಮಂದಣ್ಣ ಅವರು ಸೂಚ್ಯವಾಗಿ ಕೆಲವು ಸಾಲುಗಳನ್ನು ಹಂಚಿಕೊಂಡಿದ್ದರು. ‘ಇತ್ತೀಚಿನ ದಿನಗಳಲ್ಲಿ ಕರುಣೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಎಲ್ಲರಿಗೂ ಕರುಣೆ ತೋರಿಸೋಣ’ ಎಂದು ರಶ್ಮಿಕಾ ಪೋಸ್ಟ್ ಮಾಡಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.