AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಭೇಟಿಯಲ್ಲೇ ಮೂಡಿತು ಪ್ರೀತಿ? ಸ್ಪಷ್ಟನೆ ಕೊಟ್ಟ ವಿಜಯ್-ರಶ್ಮಿಕಾ

ಚಿತ್ರರಂಗದ ತಾರಾ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಪ್ರೇಮ ಪಯಣದ ನೆನಪುಗಳನ್ನು ಹಂಚಿಕೊಂಡಿದ್ದಾರೆ. 'ಗೀತಾ ಗೋವಿಂದಂ' ಸೆಟ್‌ನಲ್ಲಿ ನಡೆದ ಮೊದಲ ಭೇಟಿ, ಪ್ರೀತಿಯ ಬಗ್ಗೆ ಅವರಿಗಿದ್ದ ಕಲ್ಪನೆಗಳು ಹಾಗೂ ತಮ್ಮ ಸಂಬಂಧ ಬೆಳೆದುಬಂದ ಹಾದಿಯ ಸ್ವಾರಸ್ಯಕರ ಸಂಗತಿಗಳನ್ನು ಅವರು ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ.

ಮೊದಲ ಭೇಟಿಯಲ್ಲೇ ಮೂಡಿತು ಪ್ರೀತಿ? ಸ್ಪಷ್ಟನೆ ಕೊಟ್ಟ ವಿಜಯ್-ರಶ್ಮಿಕಾ
ವಿಜಯ್-ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 05, 2026 | 11:02 AM

Share

ಚಿತ್ರರಂಗದ ಜನಪ್ರಿಯ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಪ್ರೇಮ ಪಯಣ ಹಾಗೂ ಸಂಬಂಧದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಸಹಕಲಾವಿದರಾಗಿ ಆರಂಭವಾದ ಇವರ ಪರಿಚಯ ನಂತರ ಜೀವನ ಸಂಗಾತಿಗಳಾಗುವವರೆಗೆ ಬೆಳೆದುಬಂದ ಹಾದಿ ಅಪರೂಪದ್ದಾಗಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಇಬ್ಬರೂ ತಮ್ಮ ನಡುವಿನ ನಂಟಿನ ಆರಂಭಿಕ ದಿನಗಳ ಸಿಹಿ-ಖಾರ ನೆನಪುಗಳನ್ನು ಅಭಿಮಾನಿಗಳೊಂದಿಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ.

ಮೊದಲ ಭೇಟಿಯಲ್ಲೇ ಪ್ರೀತಿಯಾಯಿತು ಎಂಬ ಮಾತನ್ನು ವಿಜಯ್ ದೇವರಕೊಂಡ ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಆರಂಭದಲ್ಲಿ ಪ್ರೀತಿಯ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ದಿನಗಳು ಕಳೆದಂತೆ ಇಬ್ಬರ ನಡುವಿನ ಒಡನಾಟ ಹೆಚ್ಚಾಯಿತು. ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಹಲವು ವರ್ಷಗಳ ಸಮಯ ಬೇಕಾಯಿತು ಎಂದು ವಿಜಯ್ ನೆನಪಿಸಿಕೊಂಡಿದ್ದಾರೆ.

‘ಗೀತ ಗೋವಿಂದಂ’ ಚಿತ್ರೀಕರಣದ ಮೊದಲ ದಿನದಂದು ನಡೆದ ಸ್ವಾರಸ್ಯಕರ ಘಟನೆಯನ್ನು ರಶ್ಮಿಕಾ ಬಿಚ್ಚಿಟ್ಟಿದ್ದಾರೆ. ಕ್ಯಾರವಾನ್‌ನಲ್ಲಿ ರಶ್ಮಿಕಾ ಹಾಕಿದ್ದ ಹಾಡನ್ನು ಕೇಳಿ ವಿಜಯ್ ಮುಖಭಾವ ಬದಲಿಸಿದ್ದರು. ‘ಆ ಹಾಡನ್ನು ಬಂದ್ ಮಾಡು’ ಎಂದು ವಿಜಯ್ ಜೋರಾಗಿ ಹೇಳಿದ್ದರು. ಈ ಘಟನೆಯಿಂದ ರಶ್ಮಿಕಾ ತೀವ್ರ ಬೇಸರಗೊಂಡು ಭಾವುಕರಾಗಿದ್ದ ಸಂಗತಿಯನ್ನು ವಿಜಯ್ ನಂತರ ತಿಳಿದರು.

ಸಂಬಂಧದಲ್ಲಿ ರಶ್ಮಿಕಾ ಅವರೇ ಹೆಚ್ಚು ಪರಿಪಕ್ವತೆಯಿಂದ ನಡೆದುಕೊಳ್ಳುತ್ತಾರೆ ಎಂದು ವಿಜಯ್ ಹೊಗಳಿದ್ದಾರೆ. ಸಣ್ಣಪುಟ್ಟ ಪ್ರೀತಿಯ ಕ್ಷಣಗಳು ಮತ್ತು ದಿನನಿತ್ಯದ ಕಾಳಜಿ ಸಂಬಂಧವನ್ನು ಗಟ್ಟಿಮಾಡುತ್ತದೆ ಎಂಬುದು ರಶ್ಮಿಕಾ ವಾದವಾಗಿದೆ. ದಿನಕ್ಕೆ ಹಲವು ಬಾರಿ ಪ್ರೀತಿಯನ್ನು ವ್ಯಕ್ತಪಡಿಸುವುದು ದಾಂಪತ್ಯಕ್ಕೆ ಅಗತ್ಯ ಎಂದು ರಶ್ಮಿಕಾ ನಂಬುತ್ತಾರೆ.

ಇದನ್ನೂ ಓದಿ: ಸಮಂತಾ, ವಿಜಯ್ ದೇವರಕೊಂಡ ಸೇರಿ ತೆಲುಗಿನ ಹಲವರಿಗೆ ಚುನಾವಣಾ ಆಯೋಗದಿಂದ ನೋಟಿಸ್

ತಮ್ಮ ಸಂಬಂಧದ ಬೆಳವಣಿಗೆಯ ಹಿಂದೆ ದೇವರ ಕೃಪೆಯಿದೆ ಎಂದು ರಶ್ಮಿಕಾ ಭಕ್ತಿಯಿಂದ ಹೇಳಿಕೊಂಡಿದ್ದಾರೆ. ‘ಗೀತಾ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದು ಇಬ್ಬರನ್ನೂ ಹತ್ತಿರ ತಂದಿತು. ಪ್ರಸ್ತುತ ಈ ಜೋಡಿ ‘ರಣಬಾಲಿ’ ಚಿತ್ರದಲ್ಲಿ ಮತ್ತೊಮ್ಮೆ ತೆರೆ ಹಂಚಿಕೊಳ್ಳುತ್ತಿದ್ದು, ಅಕ್ಟೋಬರ್ 16ರಂದು ಸಿನಿಮಾ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ