AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್-ರಶ್ಮಿಕಾ ನಟನೆಯ ‘ರಣಬಾಲಿ’ ಚಿತ್ರದ ಮೊದಲ ದಿನದ ಗಳಿಕೆ ವಿವರ ಇಲ್ಲಿದೆ

ವಿಜಯ್ ದೇವರಕೊಂಡ ಅವರು ಒಂದು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ರಣಬಾಲಿ’ ಸಿನಿಮಾ ಗೆಲ್ಲಲಿ ಎಂಬುದು ಅವರ ಅಭಿಮಾನಿಗಳ ಹಾರೈಕೆ ಆಗಿದೆ. ಪ್ರೇಕ್ಷಕರು ಇದನ್ನು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡಲಿದ್ದಾರೆ. ಮೊದಲ ದಿನ ಈ ಚಿತ್ರ ವಿಶ್ವಾದ್ಯಂತ 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂಬುದು ವಿಶೇಷ.

ವಿಜಯ್-ರಶ್ಮಿಕಾ ನಟನೆಯ ‘ರಣಬಾಲಿ’ ಚಿತ್ರದ ಮೊದಲ ದಿನದ ಗಳಿಕೆ ವಿವರ ಇಲ್ಲಿದೆ
ರಣವಬಾಲಿImage Credit source: Ranabali
ರಾಜೇಶ್ ದುಗ್ಗುಮನೆ
|

Updated on: Oct 17, 2026 | 7:09 AM

Share

ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಹಾಗೂ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ’ರಾಣಬಾಲಿ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಮೊದಲ ದಿನ ಪೂರ್ಣಗೊಳಿಸಿದೆ. ಇವರಿಬ್ಬರ ಮದುವೆಯ ಬಳಿಕ ಬಿಡುಗಡೆಯಾದ ಮೊದಲ ಚಿತ್ರವಾಗಿರುವುದರಿಂದ ಪ್ರೇಕ್ಷಕರು ಹಾಗೂ ಅಭಿಮಾನಿಗಳಲ್ಲಿ ಈ ಸಿನಿಮಾ ಕುರಿತು ಭಾರೀ ನಿರೀಕ್ಷೆಯಿತ್ತು. ಈ ಚಿತ್ರದ ಗಳಿಕ ವಿವರ ಇಲ್ಲಿದೆ.

ಅಕ್ಟೋಬರ್ 16, 2026ರಂದು (ಮೊದಲ ಶುಕ್ರವಾರ) ಬಿಡುಗಡೆಯಾದ ಈ ಚಿತ್ರವು ಮೊದಲ ದಿನದಂದು ದೇಶಾದ್ಯಂತ ಒಟ್ಟು 2,515 ಪ್ರದರ್ಶನಗಳೊಂದಿಗೆ ಶೇಕಡಾ 57.0ರಷ್ಟು ಆಕ್ಯುಪೆನ್ಸಿ ದಾಖಲಿಸಿದೆ. ಮೊದಲ ದಿನದ ಅಂಕಿಅಂಶಗಳ ಪ್ರಕಾರ, ಚಿತ್ರವು ಭಾರತದಲ್ಲಿ ಒಟ್ಟು 9.25 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಹಾಗೂ 10.75 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಗಳಿಸಿದೆ. ಇನ್ನು ವಿದೇಶಿ ಮಾರುಕಟ್ಟೆಯಲ್ಲಿ 5.75 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ, ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆಯು ಮೊದಲ ದಿನದ ಅಂತ್ಯಕ್ಕೆ 16.50 ಕೋಟಿ ರೂಪಾಯಿಗೆ ತಲುಪಿದೆ.

ಸಿನಿಮಾಗೆ ಇಂದು, ನಾಳೆ ಹಾಗೂ ಮುಂಬರುವ ಹಬ್ಬದ ರಜಾ ದಿನಗಳು ಪ್ರಮುಖವಾಗಿವೆ.  ಅಂದು ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಸುತ್ತದೆ ಎಂಬ ಕುತೂಹಲ ಮೂಡಿದೆ.  ವಿಜಯ್ ಹಾಗೂ ರಶ್ಮಿಕಾ ಅವರ ಈ ಸಿನಿಮಾ ಹಳೆಯ ಕಾಲದ ಕಥೆಯನ್ನು ಹೊಂದಿದೆ. ಹೀಗಾಗಿ, ಇದರ ಮೇಕಿಂಗ್ ದೊಡ್ಡ ಚಾಲೆಂಜಿಂಗ್ ಆಗಿತ್ತು.

ಇದನ್ನೂ ಓದಿ: ಹಳೆಯ ಸಿನಿಮಾ ಸೋಲನ್ನು ನೆನಪಿಸಿಕೊಂಡ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರು ಒಂದು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ರಣಬಾಲಿ’ ಸಿನಿಮಾ ಗೆಲ್ಲಲಿ ಎಂಬುದು ಅವರ ಅಭಿಮಾನಿಗಳ ಹಾರೈಕೆ ಆಗಿದೆ. ಪ್ರೇಕ್ಷಕರು ಇದನ್ನು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More