
ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ (Vijay Deverakonda) ಜೊತೆ ಕ್ಲೋಸ್ ಆಗಿರುವುದು ಗೊತ್ತೇ ಇದೆ. ಶೀಘ್ರದಲ್ಲೇ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಒಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ. ಇದನ್ನು ಅವರು ಜಗಜ್ಜಾಹೀರು ಮಾಡಿಲ್ಲ. ಬದಲಿಗೆ, ಸಾಧ್ಯವಾದಷ್ಟು ಗುಟ್ಟಾಗಿ ಕಾಲ ಕಳೆದು ಬಂದಿದ್ದಾರೆ. ಆದರೂ ಕೂಡ ಭಾರತಕ್ಕೆ ವಾಪಸ್ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಎಲ್ಲವೂ ಗೊತ್ತಾಗಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡಿದ್ದರು. ರಜೆಯ ಮಜಾ ಸವಿಯಲು ಅವರು ವಿದೇಶಕ್ಕೆ ತೆರಳಿದ್ದರು. ಇಟಲಿಯಲ್ಲಿ ಅವರಿಬ್ಬರು ಜೊತೆಯಾಗಿ ಕಾಲ ಕಳೆದಿದ್ದಾರೆ. ಆದರೆ ತಾವಿಬ್ಬರು ಒಟ್ಟಿಗೆ ಇರುವ ಯಾವುದೇ ಫೋಟೋವನ್ನು ಅವರು ಹಂಚಿಕೊಂಡಿಲ್ಲ.
ಜನವರಿ 5ರಂದು ಇಟಲಿಯಿಂದ ಭಾರತಕ್ಕೆ ಮರಳಿದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಈ ವೇಳೆ ಅವರಿಬ್ಬರು ಸಿಂಪಲ್ ಉಡುಗೆ ಧರಿಸಿದ್ದರು. ಇಬ್ಬರೂ ಕೂಡ ಮಾಸ್ಕ್ ಹಾಕಿಕೊಂಡಿದ್ದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
2025ರ ದಸರಾ ಹಬ್ಬದ ಸಂದರ್ಭದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ನಿಶ್ಚಿತಾರ್ಥ ಮಾಡಿಕೊಂಡರು. ಆದರೆ ಅದನ್ನು ಅವರು ಗುಟ್ಟಾಗಿಯೇ ಇಟ್ಟಿದ್ದಾರೆ. ಎರಡೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಗೌಪ್ಯವಾಗಿ ಎಂಗೇಜ್ಮೆಂಟ್ ನಡೆದಿತ್ತು. ಯಾವುದೇ ಫೋಟೋಗಳು ಹೊರಬಂದಿಲ್ಲ. ಈಗ ಮದುವೆಯ ತಯಾರಿ ನಡೆಯುತ್ತಿದೆ.
ಇದನ್ನೂ ಓದಿ: ರೋಮ್ನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ರೊಮ್ಯಾನ್ಸ್
ಮೂಲಗಳ ಪ್ರಕಾರ, ಫೆಬ್ರವರಿ 26ರಂದು ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ನಡೆಯಲಿದೆ. ಎಂಗೇಜ್ಮೆಂಟ್ ರೀತಿಯೇ ಮದುವೆಯನ್ನು ಕೂಡ ಕೆಲವೇ ಕೆಲವು ಅತಿಥಿಗಳ ಸಮ್ಮುಖದಲ್ಲಿ ಮಾಡಿಕೊಳ್ಳಲು ಈ ಜೋಡಿ ನಿರ್ಧರಿಸಿದೆ ಎನ್ನಲಾಗಿದೆ. ಮದುವೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಅಭಿಮಾನಿಗಳು ಕಾಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.