AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​​ನ ನೋಡಿ ರಶ್ಮಿಕಾ ನಕ್ಕ ರೀತಿಯೇ ಸೂಪರ್; ಫ್ಯಾನ್ಸ್​​ಗೆ ಇಷ್ಟ ಆಯ್ತು ವೈರಲ್ ವಿಡಿಯೋ

ಟಾಲಿವುಡ್ ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆಯಾದ ನಂತರ, ವಿಜಯ್ ಅವರ ಹುಟ್ಟೂರು ತುಮ್ಮನ್‌ಪೇಟೆಯಲ್ಲಿ ಸತ್ಯನಾರಾಯಣ ವೃತದಲ್ಲಿ ಭಾಗವಹಿಸಿದರು. ರಶ್ಮಿಕಾ ನಗುವಿನ ವಿಡಿಯೋ ವೈರಲ್ ಆಗಿದೆ. ಗ್ರಾಮಸ್ಥರು ಹಾಗೂ ಅಭಿಮಾನಿಗಳಿಂದ ಭವ್ಯ ಸ್ವಾಗತ ಲಭಿಸಿದ್ದು, ವಿಜಯ್ 3000ಕ್ಕೂ ಹೆಚ್ಚು ಜನರಿಗೆ ಔತಣಕೂಟ ಏರ್ಪಡಿಸಿದ್ದರು.

ವಿಜಯ್​​ನ ನೋಡಿ ರಶ್ಮಿಕಾ ನಕ್ಕ ರೀತಿಯೇ ಸೂಪರ್; ಫ್ಯಾನ್ಸ್​​ಗೆ ಇಷ್ಟ ಆಯ್ತು ವೈರಲ್ ವಿಡಿಯೋ
ವಿಜಯ್-ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 03, 2026 | 7:54 AM

Share

ಟಾಲಿವುಡ್‌ನ ಪ್ರೀತಿಯ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹಳ ದಿನಗಳಿಂದ ಪ್ರೀತಿಸುತ್ತಿದ್ದ ಈ ಇಬ್ಬರು ಮದುವೆ ಆಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ಐಟಿಸಿ ಹೋಟೆಲ್‌ನಲ್ಲಿ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ. ಕೆಲವು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅವರ ವಿವಾಹ ನಡೆಯಿತು. ಈ ಸಮಾರಂಭದ ನಂತರ, ವಿಜಯ್ ಮತ್ತು ರಶ್ಮಿಕಾ ಹೈದರಾಬಾದ್ ತಲುಪಿದರು. ಈಗ, ವಿಜಯ್ ಅವರ ಹುಟ್ಟೂರು ನಗರ್ಕರ್ನೂಲ್ ಜಿಲ್ಲೆಯ ಬಲ್ಮೂರ್ ಮಂಡಲದ ತುಮ್ಮನ್‌ಪೇಟೆ ಗ್ರಾಮಕ್ಕೆ ತೆರಳಿ ಹೊಸದಾಗಿ ನಿರ್ಮಿಸಲಾದ ಫಾರ್ಮ್‌ಹೌಸ್‌ನಲ್ಲಿ ಸತ್ಯನಾರಾಯಣ ಸ್ವಾಮಿ ವ್ರತದಲ್ಲಿ ಭಾಗವಹಿಸಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಊರಿಗೆ ಮರಳಿದ ವಿಜಯ್ ಅವರ ಕುಟುಂಬ ಸದಸ್ಯರಿಗೆ ಗ್ರಾಮಸ್ಥರು ಮತ್ತು ಅಭಿಮಾನಿಗಳು ಜಾನಪದ ನೃತ್ಯ ಮತ್ತು ಡ್ರಮ್ಸ್‌ಗಳೊಂದಿಗೆ ಭವ್ಯ ಸ್ವಾಗತ ಕೋರಿದರು. ಇದಕ್ಕೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಸತ್ಯನಾರಾಯಣ ವ್ರತದ ಸಮಯದಲ್ಲಿ ವಿಜಯ್ ಅವರನ್ನು ನೋಡಿ ರಶ್ಮಿಕಾ ನಕ್ಕಿರುವ ವಿಡಯೋನ ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ: ಮದುವೆ ಬಳಿಕ ಊರಿಗೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾಗೆ ಭರ್ಜರಿ ಸ್ವಾಗತ

ರಶ್ಮಿಕಾ ಮಂದಣ್ಣ ಅವರ ನಗು ಎಲ್ಲರಿಗೂ ಇಷ್ಟ ಆಗುವ ರೀತಿಯಲ್ಲಿ ಇದೆ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ಈ ಜೋಡಿ ಮೇಡ್ ಫಾರ್ ಈಚ್ ಅದರ್ ಎಂದು ಹೇಳಿದ್ದಾರೆ. ವಿಜಯ್ ತಮ್ಮ ಊರಿನಲ್ಲಿ ತುಮ್ಮನ್‌ಪೇಟೆಯ ಎಲ್ಲಾ ಗ್ರಾಮಸ್ಥರಿಗೆ ಭವ್ಯ ಔತಣಕೂಟವನ್ನು ಸಹ ಏರ್ಪಡಿಸಿದ್ದರು. 3 ಸಾವಿರಕ್ಕೂ ಹೆಚ್ಚು ಜನರಿಗೆ ಔತಣಕೂಟಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಹೇಳಲಾಗಿದೆ.

ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಪ್ರೋಮೋ ಸಾಂಗ್ ಇತ್ತೀಚೆಗೆ ವೈರಲ್ ಆಗಿ ಗಮನ ಸೆಳೆದಿದೆ. ಇವರನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಕಾಯುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು