AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಮೇಲೆ ರಶ್ಮಿಕಾಗೆ ಎಷ್ಟು ಕಾಳಜಿ ನೋಡಿ; ವಿಡಿಯೋ ವೈರಲ್

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಇತ್ತೀಚೆಗೆ ತೆಲಂಗಾಣದ ತುಂಬನಪೇಟೆಯಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವಿಷಯ ಭಾರಿ ಸದ್ದು ಮಾಡುತ್ತಿದೆ. ರಶ್ಮಿಕಾ ವಿಜಯ್ ಬೆವರು ಒರೆಸಿ, ಮೀಸೆ ಸರಿಪಡಿಸಿದ ವಿಡಿಯೋ ವೈರಲ್ ಆಗಿದ್ದು, ಅವರ ಆಪ್ತತೆಯನ್ನು ತೋರಿಸಿದೆ. 180 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಿರುವ ಈ ದಂಪತಿ, ಪ್ರೀತಿ ಮತ್ತು ಸಮಾಜ ಸೇವೆಯ ಮೂಲಕ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ.

ವಿಜಯ್ ದೇವರಕೊಂಡ ಮೇಲೆ ರಶ್ಮಿಕಾಗೆ ಎಷ್ಟು ಕಾಳಜಿ ನೋಡಿ; ವಿಡಿಯೋ ವೈರಲ್
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 15, 2026 | 7:05 AM

Share

ತೆಲುಗು ಚಿತ್ರರಂಗದ ಸ್ಟಾರ್ ಜೋಡಿಯಾದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭದ ಇವರಿಬ್ಬರ ಕ್ಯೂಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪರಸ್ಪರ ಪ್ರೀತಿಸಿ, ಸಪ್ತಪದಿ ತುಳಿದಿರುವ ಈ ಜೋಡಿಯ ನಡುವೆ ಎಂತಹ ಆಪ್ತತೆ ಮತ್ತು ಪ್ರೀತಿ ಇದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ ಎನ್ನುತ್ತಿದ್ದಾರೆ ಅಭಿಮಾನಿಗಳು.

ವಿವಾಹದ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು ಒಂದು ಭರವಸೆ ನೀಡಿದ್ದರು. ತಮ್ಮ ತಂದೆಯ ಹುಟ್ಟೂರಾದ ತೆಲಂಗಾಣದ ತುಂಬನಪೇಟ್ ಗ್ರಾಮದ ಸರ್ಕಾರಿ ಶಾಲೆಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡೋದಾಗಿ ಹೇಳಿದ್ದರು. ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಗ್ರಾಮದಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಈ ಇಬ್ಬರು ಭಾಗವಹಿಸಿದ್ದರು.

ವೇದಿಕೆ ಮೇಲೆ ವಿಜಯ್ ಹಾಗೂ ರಶ್ಮಿಕಾ ನಿಂತಿದ್ದರು. ತುಂಬಾನೇ ಸೆಖೆ ಇದ್ದ ಕಾರಣ ವಿಜಯ್ ದೇವರಕೊಂಡ ಅವರ ಹಣೆಯ ಮೇಲಿದ್ದ ಬೆವರಿನ ಹನಿಗಳನ್ನು ರಶ್ಮಿಕಾ ಅತ್ಯಂತ ಪ್ರೀತಿಯಿಂದ ನಾಪ್ಕಿನ್‌ನಿಂದ ಒರೆಸಿದ್ದಾರೆ. ಅಷ್ಟೇ ಅಲ್ಲದೆ, ವಿಜಯ್ ಅವರ ಮೀಸೆಯನ್ನು ಕೈಯಿಂದ ಸರಿಪಡಿಸಿಕೊಟ್ಟಿದ್ದಾರೆ.

ಸದಾ ಸಾರ್ವಜನಿಕವಾಗಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವ ಈ ದಂಪತಿ, ಇಲ್ಲಿಯೂ ತಮ್ಮ ನಡುವಿನ ಪ್ರೀತಿ ಎಂತದ್ದು ಎಂಬುದನ್ನು ತೋರಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ‘ಇವರಿಬ್ಬರು ನಿಜಕ್ಕೂ ಮೇಡ್ ಫಾರ್ ಈಚ್ ಅದರ್’ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಎಷ್ಟು ಜನಕ್ಕೆ ವಿದ್ಯಾರ್ಥಿ ವೇತನ?

9 ಮತ್ತು 10ನೇ ತರಗತಿಯ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 180 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡುವುದು ವಿಜಯ್-ರಶ್ಮಿಕಾ ಉದ್ದೇಶ. ತಮ್ಮೂರಿನ ಮಗ ಮತ್ತು ಸೊಸೆ ಇಂತಹದ್ದೊಂದು ಸತ್ಕಾರ್ಯ ಮಾಡಿರುವುದಕ್ಕೆ ಹಳ್ಳಿಯ ಜನರೇ ಹೆಮ್ಮೆ ಪಟ್ಟಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?

‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದ ಈ ಜೋಡಿ, ಈಗ ‘ರಣಬಾಲಿ’ ಎಂಬ ಪಿರಿಯಾಡಿಕಲ್ ಆಕ್ಷನ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ