Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ

Vijay Deverakonda | Liger Movie: ದಿನದಿನಕ್ಕೂ ‘ಲೈಗರ್​’ ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚುತ್ತಿದೆ. ಆ ಕಾರಣದಿಂದ ಬಿಡುಗಡೆಗೂ ಮುನ್ನವೇ ಇದನ್ನು ಬ್ಲಾಕ್​ ಬಸ್ಟರ್​ ಎಂದು ವಿಜಯ್​ ದೇವರಕೊಂಡ ಹೇಳಿದ್ದಾರೆ.

Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
ವಿಜಯ್ ದೇವರಕೊಂಡ
Follow us
TV9 Web
| Updated By: ಮದನ್​ ಕುಮಾರ್​

Updated on: Aug 10, 2022 | 12:31 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ಲೈಗರ್​’ (Liger Movie) ಸಿನಿಮಾ ಕೂಡ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಹಲವು ಕಾರಣದಿಂದ ಈ ಚಿತ್ರದ ಮೇಲೆ ಹೈಪ್​ ಸೃಷ್ಟಿ ಆಗಿದೆ. ಪ್ಯಾನ್​ ಇಂಡಿಯಾ (Pan India) ಮಟ್ಟದಲ್ಲಿ ಇದು ರಿಲೀಸ್​ ಆಗುತ್ತಿದೆ. ‘ಲೈಗರ್​’ ಸಿನಿಮಾ ಮೂಲಕ ಭರ್ಜರಿ ಗೆಲುವು ಪಡೆಯಲು ವಿಜಯ್​ ದೇವರಕೊಂಡ (Vijay Deverakonda) ಕಾದಿದ್ದಾರೆ. ಅಚ್ಚರಿ ಎಂದರೆ, ಚಿತ್ರ ರಿಲೀಸ್​ ಆಗುವುದಕ್ಕೂ ಮುನ್ನವೇ ಅವರು ಇದನ್ನು ಬ್ಲಾಕ್​ ಬಸ್ಟರ್​ ಹಿಟ್​ ಎಂದು ಘೋಷಿಸಿದ್ದಾರೆ. ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವಾಗ ವಿಜಯ್​ ದೇವರಕೊಂಡ ಈ ಹೇಳಿಕೆ ನೀಡಿದ್ದಾರೆ. ಈ ಸಿನಿಮಾ ಖಂಡಿತಾ ಯಶಸ್ಸು ಕಾಣಲಿದೆ ಎಂಬ ಭರವಸೆ ಅವರಿಗೆ ಇದೆ. ಆ ವಿಚಾರದಲ್ಲಿ ಅವರಿಗೆ ಯಾವುದೇ ಅನುಮಾನ ಇಲ್ಲ.

ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ‘ಲೈಗರ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ನಿರ್ದೇಶನದ ಜೊತೆಗೆ ಅವರು ನಿರ್ಮಾಣವನ್ನೂ ಮಾಡಿದ್ದು, ಅವರಿಗೆ ಕರಣ್​ ಜೋಹರ್​, ಚಾರ್ಮಿ ಕೌರ್​ ಸಾಥ್​ ನೀಡಿದ್ದಾರೆ. ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳು ಮತ್ತು ಟ್ರೇಲರ್​ ಧೂಳೆಬ್ಬಿಸಿವೆ. ಈ ಪರಿ ರೆಸ್ಪಾನ್ಸ್​ ನೋಡಿ ವಿಜಯ್​ ದೇವರಕೊಂಡ ಫಿದಾ ಆಗಿದ್ದಾರೆ.

ಇದನ್ನೂ ಓದಿ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ
Image
Vijay Devarakonda: ಹುಡುಗಿ ಬೆನ್ನಲ್ಲಿ ವಿಜಯ್​ ದೇವರಕೊಂಡ ಟ್ಯಾಟೂ; ನೆಚ್ಚಿನ ಹೀರೋ ಮುಂದೆ ಯುವತಿ ಆನಂದಭಾಷ್ಪ

‘ಲೈಗರ್​’ ಪ್ರಚಾರದ ಸಲುವಾಗಿ ವಿಜಯ್​ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಅವರು ಅನೇಕ ಊರುಗಳಿಗೆ ತೆರಳುತ್ತಿದ್ದಾರೆ. ವಿವಿಧ ನಗರಗಳಲ್ಲಿ ಅವರನ್ನು ನೋಡಲು ಜನ ಸಾಗರವೇ ಸೇರುತ್ತಿದೆ. ಇದರಿಂದ ‘ಲೈಗರ್​’ ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿದೆ. ಆ ಕಾರಣದಿಂದ ಬಿಡುಗಡೆಗೂ ಮುನ್ನವೇ ಇದನ್ನು ಬ್ಲಾಕ್​ ಬಸ್ಟರ್​ ಎಂದು ವಿಜಯ್​ ದೇವರಕೊಂಡ ಹೇಳಿದ್ದಾರೆ.

‘ಕೆಲವು ಸಿನಿಮಾಗಳ ಬಗ್ಗೆ ನಮಗೆ ತುಂಬ ನಂಬಿಕೆ ಇದ್ದಾಗ ನಾನು ಅದನ್ನು ಬ್ಲಾಕ್​ ಬಸ್ಟರ್​ ಅಂತ ಘೋಷಿಸುತ್ತೇನೆ. ಪ್ರಚಾರ ಶುರು ಆಗುವುದಕ್ಕೂ ಮುನ್ನವೇ ನಾನು ಇದನ್ನು ಹೇಳುತ್ತೇನೆ. ‘ಅರ್ಜುನ್​ ರೆಡ್ಡಿ’ ಸಿನಿಮಾದ ಸಂದರ್ಭದಲ್ಲೂ ನಾನು ಹೀಗೆಯೇ ಹೇಳಿದ್ದೆ’ ಎಂದಿದ್ದಾರೆ ವಿಜಯ್​ ದೇವರಕೊಂಡ.

ಆಗಸ್ಟ್​ 25ರಂದು ‘ಲೈಗರ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಅವರು ಬಾಕ್ಸರ್​ ಪಾತ್ರ ಮಾಡಿದ್ದಾರೆ. ಅವರ ಎದುರು ಬಾಕ್ಸಿಂಗ್​ ಲೋಕದ ದಿಗ್ಗಜ ಮೈಕ್ ಟೈಸನ್​ ಅವರು ನಟಿಸಿರುವುದು ವಿಶೇಷ. ಇವರಿಬ್ಬರ ಮುಖಾಮುಖಿ ದೃಶ್ಯಗಳನ್ನು ತೆರೆಮೇಲೆ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ