AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಆಗು ಪ್ಲೀಸ್’ ಅಂತ ವಿಜಯ್ ಬಳಿ 100 ಬಾರಿ ಕೇಳಿಕೊಂಡಿದ್ದ ರಶ್ಮಿಕಾ ಮಂದಣ್ಣ

ಟಾಲಿವುಡ್ ಸ್ಟಾರ್ ನಟರಾದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ತಮ್ಮ ಮದುವೆಯ ಹಿಂದಿನ ರೋಚಕ ರಹಸ್ಯವನ್ನು ಹಂಚಿಕೊಂಡಿದ್ದಾರೆ. ಮದುವೆ ಎನ್ನುವುದು ಆತುರದ ನಿರ್ಧಾರವಾಗಬಾರದು ಎಂಬ ಕಾರಣಕ್ಕಾಗಿಯೇ ತಾನು ರಶ್ಮಿಕಾ ಬಳಿ ಮದುವೆ ಪ್ರಸ್ತಾಪವನ್ನು ನೂರು ಬಾರಿ ಮಾಡಲು ಹೇಳಿದ್ದಾಗಿ ವಿಜಯ್ ಸ್ಪಷ್ಟಪಡಿಸಿದ್ದಾರೆ.

‘ಮದುವೆ ಆಗು ಪ್ಲೀಸ್’ ಅಂತ ವಿಜಯ್ ಬಳಿ 100 ಬಾರಿ ಕೇಳಿಕೊಂಡಿದ್ದ ರಶ್ಮಿಕಾ ಮಂದಣ್ಣ
ರಶ್ಮಿಕಾ-ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 23, 2026 | 11:00 AM

Share

ಮುಖ್ಯಾಂಶಗಳು

  • ನೂರು ಬಾರಿ ಮದುವೆ ಮಾತು
  • ಅಚ್ಚರಿಯ ಸಂಗತಿ ಬಿಚ್ಚಿಟ್ಟ ವಿಜಯ್ ದೇವರಕೊಂಡ
  • ಭಾವನಾತ್ಮಕ ಆವೇಶವಲ್ಲ

ಟಾಲಿವುಡ್‌ನ ಜನಪ್ರಿಯ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೂ ಮುನ್ನ ತಾವು ಎದುರಿಸಿದ ಅನುಭವಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಖ್ಯಾತ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಈ ಜೋಡಿ ಮೊದಲ ಬಾರಿಗೆ ಜೊತೆಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಿಜಯ್ ತಾವು ರಶ್ಮಿಕಾ ಬಳಿ ಮದುವೆಯ ಬಗ್ಗೆ ನೂರು ಬಾರಿ ಪ್ರಸ್ತಾಪಿಸಲು ಹೇಳಿದ್ದೇಕೆ ಎಂಬುದರ ಅಸಲಿ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.

ವಿಜಯ್ ದೇವರಕೊಂಡ ಈ ಹಿಂದೆ ಪ್ರೀತಿ ಹಾಗೂ ಮದುವೆಯ ವಿಚಾರದಲ್ಲಿ ವಿಭಿನ್ನ ಯೋಚನೆ ಹೊಂದಿದ್ದರು. ವೃತ್ತಿಜೀವನ ಹಾಗೂ ಮಹತ್ವಾಕಾಂಕ್ಷೆಗಳೇ ಮುಖ್ಯವಾಗಿದ್ದ ಕಾರಣ ಅವರು ಆರಂಭದಲ್ಲಿ ಪ್ರೀತಿಯನ್ನು ನಂಬುತ್ತಿರಲಿಲ್ಲ. ಆದರೆ ಕಾಲ ಕಳೆದಂತೆ ರಶ್ಮಿಕಾ ಅವರ ಮೇಲಿನ ಒಡನಾಟ ಪ್ರೀತಿಗೆ ತಿರುಗಿತು. ರಶ್ಮಿಕಾ ಜೊತೆ ಇದ್ದಾಗ ತಮಗೆ ಸಿಗುವ ನೆಮ್ಮದಿ ಹಾಗೂ ಸಮಾಧಾನವೇ ತಮ್ಮ ಜೀವನದ ಅತಿ ದೊಡ್ಡ ಖುಷಿ ಎಂದು ವಿಜಯ್ ಈ ವೇಳೆ ಹಂಚಿಕೊಂಡಿದ್ದಾರೆ.

ಮದುವೆ ಎನ್ನುವುದು ಯಾವುದೇ ಭಾವನಾತ್ಮಕ ಆವೇಶದಲ್ಲಿ ಅಥವಾ ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರವಾಗಬಾರದು ಎಂದು ವಿಜಯ್ ಭಾವಿಸಿದ್ದರು. ಜೀವನದ ಏಳು-ಬೀಳುಗಳಲ್ಲಿ, ಸುಖ-ದುಃಖಗಳಲ್ಲಿ ಮತ್ತು ಎಲ್ಲಾ ಸವಾಲುಗಳನ್ನು ಎದುರಿಸಿದ ಮೇಲೂ ಮದುವೆಯ ನಿರ್ಧಾರ ಗಟ್ಟಿಯಾಗಿ ಉಳಿಯುತ್ತದೆಯೇ ಎಂಬುದನ್ನು ಪರೀಕ್ಷಿಸಲು ಬಯಸಿದ್ದರು. ಈ ಕಾರಣಕ್ಕಾಗಿಯೇ ಅವರು ರಶ್ಮಿಕಾ ಬಳಿ ಮದುವೆಯ ಮಾತುಕತೆಯನ್ನು ಒಂದು ವರ್ಷ ಕಾಲ ನಡೆಸಿದ್ದರು. ಈ ಅವಧಿಯಲ್ಲಿ 100 ಬಾರಿ ಮದುವೆ ಬಗ್ಗೆ ಮಾತನಾಡಿದ್ದರು.

ರಶ್ಮಿಕಾ ಮಂದಣ್ಣ ಕೂಡ ವಿಜಯ್ ಅವರ ಈ ನಡೆಗೆ ಯಾವುದೇ ಬೇಸರ ಮಾಡಿಕೊಂಡಿರಲಿಲ್ಲ. ವಿಜಯ್ ಅವರ ಹಿಂದಿನ ನೋವುಗಳು ಮತ್ತು ಅವರ ಸೂಕ್ಷ್ಮ ಸ್ವಭಾವವನ್ನು ರಶ್ಮಿಕಾ ಅರ್ಥ ಮಾಡಿಕೊಂಡಿದ್ದರು. ಯಾವುದೇ ಸಂದರ್ಭದಲ್ಲೂ ತಮ್ಮಿಬ್ಬರ ಸಂಬಂಧ ಗಟ್ಟಿಯಾಗಿರಬೇಕು ಎಂಬ ಕಾರಣಕ್ಕಾಗಿಯೇ ವಿಜಯ್ ಈ ಪರೀಕ್ಷೆ ಒಡ್ಡಿದ್ದರು ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ ಇಬ್ಬರೂ ತಮ್ಮ ಕುಟುಂಬದವರ ಒಪ್ಪಿಗೆಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇದನ್ನೂ ಓದಿ: ದಕ್ಷಿಣ ಭಾರತದ ಉಚ್ಚಾರಣೆ ಟೀಕೆಗಳಿಗೆ ನಟಿ ರಶ್ಮಿಕಾ ಮಂದಣ್ಣ ಖಡಕ್ ತಿರುಗೇಟು

ಕಾರ್ಯಕ್ರಮದಲ್ಲಿ ತಮ್ಮ ಮದುವೆ ಕುರಿತು ಇವರು ಮಾಡಿದ ವಿಷಯ ಚರ್ಚೆಯ ಕೇಂದ್ರಬಿಂದು ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ಕೇಳಿ ಬಂದಿದೆ. ‘ಇವರ ಸಂಬಂಧ ಹೆಚ್ಚು ದಿನ ಇರಲ್ಲ’ ಎಂದು ಕೂಡ ಕೆಲವರು ಟೀಕೆ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!