AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಅವರ ಮುಂಬರುವ ಚಿತ್ರ "ಕಿಂಗ್‌ಡಮ್" ನ ಬಿಡುಗಡೆಯ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ಜುಲೈ 31ಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಇದೆ. ವಿಜಯ್ ಅವರ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ
ವಿಜಯ್ ದೇವರಕೊಂಡ
ರಾಜೇಶ್ ದುಗ್ಗುಮನೆ
|

Updated on: Jul 18, 2025 | 7:55 AM

Share

ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Devarakonda) ಕೆಲವೇ ದಿನಗಳಲ್ಲಿ ‘ಕಿಂಗ್‌ಡಮ್’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ. ಗೌತಮ್ ತಿನ್ನನುರಿ ನಿರ್ದೇಶನದ ಈ ಚಿತ್ರದಲ್ಲಿ ಭಾಗ್ಯಶ್ರೀ ಭೋರ್ಸ್ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ಜುಲೈ 31 ರಂದು ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇರುವಾಗ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಪ್ರಸ್ತುತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನು ತಿಳಿದ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದಾರೆ. ವಿಜಯ್ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಡೆಂಗ್ಯೂ ಆದಾಗ ಬಿಳಿ ರಕ್ತ ಕಣದಲ್ಲಿ ಸಾಕಷ್ಟು ಇಳಿಕೆ ಕಾಣುತ್ತದೆ. ಇದು ಜೀವಕ್ಕೂ ಅಪಾಯ ತಂದೊಡ್ಡಬಹುದು. ಹೀಗಾಗಿ, ವಿಜಯ್‌ಗೆ ಸಾಕಷ್ಟು ವಿಶ್ರಾಂತಿ ಬೇಕು ಎಂದು ವೈದ್ಯರು ಹೇಳಿದ್ದಾರೆ. ಈ ತಿಂಗಳ 20ರಂದು ವಿಜಯ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವರದಿ ಆಗಿದೆ. ಅವರ ತಂಡ ಅಥವಾ ಕುಟುಂಬ ಸದಸ್ಯರು ವಿಜಯ್ ದೇವರಕೊಂಡ ಅವರ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಡೆಂಗ್ಯೂಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಇದ್ದರೆ ಮಾರಣಾಂತಿಕ ಆಗಬಹುದು. ಆದರೆ, ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆತರೆ ಆ ಬಗ್ಗೆ ಚಿಂತಿಸೋ ಅಗತ್ಯ ಇಲ್ಲ. ಈಗ ವಿಜಯ್​ಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಹೆಚ್ಚು ಚಿಂತಿಸೋ ಅಗತ್ಯ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: ದೊಡ್ಡ ಬಾಲಿವುಡ್ ಅವಕಾಶವನ್ನು ನಿರಾಕರಿಸಿದ ವಿಜಯ್ ದೇವರಕೊಂಡ, ಕಾರಣ?

‘ಕಿಂಗ್‌ಡಮ್’ ಸಿನಿಮಾ ವಿಷಯಕ್ಕೆ ಬಂದರೆ ‘ಜೆರ್ಸಿ’ ಖ್ಯಾತಿಯ ಗೌತಮ್ ತಿನ್ನನೂರಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾದ ಪೋಸ್ಟರ್‌ಗಳು, ಗ್ಲಿಂಪ್ಸ್‌ಗಳು ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರನ್ನು  ಸೆಳೆದಿವೆ. ಈ ಮೂಲಕ ‘ಕಿಂಗ್‌ಡಮ್’ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಿವೆ. ಈ ತಿಂಗಳ 31ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಕಾಣುತ್ತಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿರೋದು ವಿಶೇಷ. ಈ ಮೊದಲು ರಿಲೀಸ್ ಆದ ವಿಜಯ್ ಸಿನಿಮಾಗಳು ಸೋಲು ಕಂಡಿರುವುದರಿಂದ ಈ ಚಿತ್ರದ ಮೂಲಕ ಅವರಿಗೆ ಗೆಲ್ಲುವ ಅಗತ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.