AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರ ಎದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಟ್ಟ ವಿಜಯ್ ದೇವರಕೊಂಡ; ವಿಡಿಯೋ ನೋಡಿ

ನಟಿ ರಶ್ಮಿಕಾ ಮಂದಣ್ಣ ಅವರ 'ದಿ ಗರ್ಲ್‌ಫ್ರೆಂಡ್' ಸಕ್ಸಸ್ ಮೀಟ್‌ನಲ್ಲಿ ವಿಜಯ್ ದೇವರಕೊಂಡ ಎಲ್ಲರೆದುರೇ ಅವರ ಕೈಗೆ ಮುತ್ತಿಟ್ಟ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದಾಗಿ ವಿಜಯ್-ರಶ್ಮಿಕಾ ನಿಶ್ಚಿತಾರ್ಥದ ಸುದ್ದಿಗಳಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ. ಇವರಿಬ್ಬರ ಸಂಬಂಧ ಬಹುತೇಕ ಖಚಿತ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಎಲ್ಲರ ಎದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಟ್ಟ ವಿಜಯ್ ದೇವರಕೊಂಡ; ವಿಡಿಯೋ ನೋಡಿ
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Nov 13, 2025 | 6:56 AM

Share

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಸುದ್ದಿ ಇತ್ತೀಚೆಗೆ ಜೋರಾಗಿದೆ. ಹೋದಲ್ಲೆಲ್ಲ ರಶ್ಮಿಕಾ ಮಂದಣ್ಣ ಅವರಿಗೆ ಈ ಬಗ್ಗೆ ಪ್ರಶ್ನೆಗಳು ಎದುರಾಗುತ್ತಾ ಇವೆ. ಆದರೆ, ರಶ್ಮಿಕಾ ಮಂದಣ್ಣ ಮಾತ್ರ ನಾಚುತ್ತಲೇ, ಪರೋಕ್ಷವಾಗಿ ಈ ವಿಚಾರವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಇವರ ಮಧ್ಯೆ ಅದೆಂಥ ಬಾಂಧವ್ಯ ಇದೆ ಎಂಬುದನ್ನು ತೋರಿಸುವ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಜಯ್ ಅವರು ರಶ್ಮಿಕಾ ಕೈಗೆ ಮುತ್ತು ಕೊಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಕಳೆದ ವಾರ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರ ತಂಡ ನವೆಂಬರ್ 12ರಂದು ಹೈದರಾಬಾದ್​ನಲ್ಲಿ ಸಕ್ಸಸ್ ಮೀಟ್ ಆಯೋಜನೆ ಮಾಡಿತ್ತು. ಇದಕ್ಕೆ ವಿಜಯ್ ದೇವರಕೊಂಡ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಬರುತ್ತಿದ್ದಂತೆ ರಶ್ಮಿಕಾನ ಹುಡುಕಾಡಿದ್ದಾರೆ.

ರಶ್ಮಿಕಾ ಕಾಣುತ್ತಿದ್ದಂತೆ ವಿಜಯ್ ದೇವರಕೊಂಡ ಅವರು ಓಡೋಡಿ ಬಂದರು. ಆ ಬಳಿಕ ರಶ್ಮಿಕಾ ಕೈಗೆ ಮುತ್ತಿಟ್ಟರು. ಇದರಿಂದ ರಶ್ಮಿಕಾ ಕೂಡ ಖುಷಿಪಟ್ಟರು. ಈ ವಿಡಿಯೋ ವೈರಲ್ ಆಗಿದ್ದು, ಫ್ಯಾನ್ಸ್ ಖುಷಿಯಿಂದ ಕಮೆಂಟ್ ಮಾಡುತ್ತಿದ್ದಾರೆ. ಇವರದ್ದು ಬೆಸ್ಟ್ ಜೋಡಿ ಎಂದು ಅನೇಕರು ಕರೆದಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಚಿತ್ರಕ್ಕೂ ತಟ್ಟಿದ ದೆಹಲಿ ಬಾಂಬ್ ಬ್ಲಾಸ್ ಪ್ರಕರಣದ ಬಿಸಿ

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಎದುರು-ಬದುರು ಸಿಕ್ಕಾಗ ಪ್ರೀತಿಯಿಂದ ಹಗ್ ಮಾಡಿಕೊಳ್ಳೋದು ಸಾಮಾನ್ಯ. ಯಾರೂ ಮುತ್ತುಕೊಳ್ಳಲು ಹೋಗೋದಿಲ್ಲ. ಈಗ ವಿಜಯ್ ಹಾಗೂ ರಶ್ಮಿಕಾ ತಮ್ಮ ಸಂಬಂಧವನ್ನು ಅಧಿಕೃತ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದಂತೆ ಇದೆ. ಈ ಕಾರಣದಿಂದಲೇ ಅವರು ಓಪನ್ ಆಗಿ ಕಿಸ್ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ದಿ ಗರ್ಲ್​​ಫ್ರೆಂಡ್ ಸಿನಿಮಾ ಬಗ್ಗೆ

ದಿ ಗರ್ಲ್​​ಫ್ರೆಂಡ್ ಸಿನಿಮಾ ಯಾವುದೇ ಸ್ಟಾರ್​ಗಳು ಇಲ್ಲದೆ ಸಿದ್ಧವಾದ ಸಿನಿಮಾ ರಶ್ಮಿಕಾ ಜೊತೆ ಕನ್ನಡದ ದೀಕ್ಷಿತ್ ಶೆಟ್ಟಿ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಸುಮಾರು 10 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರ ದಿನ ಕಳೆದಂತೆ ಒಳ್ಳೆಯ ಗಳಿಕೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ