AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್ ದೇವರಕೊಂಡ; ವಿಡಿಯೋ ವೈರಲ್

Vijay Deverakonda: ವಿಜಯ್​ ದೇವರಕೊಂಡ ಅವರು ರಶ್ಮಿಕಾ ಮಂದಣ್ಣಗೆ ಏನೋ ಗಿಫ್ಟ್​ ನೀಡುತ್ತ, ಮಂಡಿಯೂರಿ ಪ್ರಪೋಸ್​ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಕ್ಯೂಟ್​ ಜೋಡಿಯ ಅಭಿಮಾನಿಗಳು ಅದನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ.

Rashmika Mandanna: ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್ ದೇವರಕೊಂಡ; ವಿಡಿಯೋ ವೈರಲ್
ವಿಜಯ್​ ದೇವರಕೊಂಡ - ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Apr 20, 2021 | 7:08 PM

Share

ದಕ್ಷಿಣ ಭಾರತದಲ್ಲಿ ಸಿಕ್ಕಾಪಟ್ಟೆ ಸೆನ್ಸೇಷನ್​ ಸೃಷ್ಟಿ ಮಾಡಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಗೀತ ಗೋವಿಂದಂ ಮತ್ತು ಡಿಯರ್​ ಕಾಮ್ರೇಡ್​ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದ ಈ ಜೋಡಿ ಬಗ್ಗೆ ಆಗಾಗ ಹಲವು ಬಗೆಯ ಗಾಸಿಪ್​ ಕೇಳಿಬರುತ್ತದೆ. ಇವರಿಬ್ಬರ ಆಪ್ತತೆ ನೋಡಿ ಅದೆಷ್ಟು ಜನ ಹೊಟ್ಟೆ ಉರಿದುಕೊಂಡಿದ್ದಾರೋ ಗೊತ್ತಿಲ್ಲ. ಯಾರು ಏನೇ ಅಂದರೂ ರಶ್ಮಿಕಾ ಮತ್ತು ವಿಜಯ್​ ದೇವರಕೊಂಡ ಅದಕ್ಕೆಲ್ಲ ತಲೆ ಕೆಡಿಸಿಕೊಂಡಿಲ್ಲ. ಈಗ ರಶ್ಮಿಕಾಗೆ ವಿಜಯ್​ ಮಂಡಿಯೂರಿ ಪ್ರಪೋಸ್​ ಮಾಡುತ್ತಿರುವುದು ವಿಡಿಯೋ ವೈರಲ್​ ಆಗುತ್ತಿದೆ.

ಎರಡು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ ಬಳಿಕ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ನಡುವೆ ನಿಜಜೀವನದಲ್ಲಿಯೂ ಆಪ್ತತೆ ಬೆಳೆದಿದೆ. ಮತ್ತೆ ಮತ್ತೆ ಅವರಿಬ್ಬರನ್ನು ಜೊತೆಯಾಗಿ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ. ಅಷ್ಟೇ ಅಲ್ಲ, ರಿಯಲ್​ ಲೈಫ್​ನಲ್ಲಿಯೂ ಅವರು ಜೋಡಿಯಾಗಲಿ ಎಂದು ಅನೇಕರು ಹಾರೈಸುತ್ತಾರೆ. ಈ ನಡುವೆ ರಶ್ಮಿಕಾಗೆ ವಿಜಯ್​ ಪ್ರಪೋಸ್​ ಮಾಡಿದ್ದಾರೆ ಎಂಬ ವಿಷಯ ಕೇಳಿದರೆ ಫ್ಯಾನ್ಸ್​ ಖುಷಿ ಆಗುವುದು ಸಹಜ. ಆದರೆ ಈ ವೈರಲ್​ ವಿಡಿಯೋದ ಅಸಲಿಯತ್ತು ಏನು ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ನಿಜವಾಗಿಯೂ ವಿಜಯ್​ ದೇವರಕೊಂಡ ಪ್ರಪೋಸ್​ ಮಾಡಿದ್ದಾರಾ? ಯಾಕೋ ಅನುಮಾನ. ಮೂಲಗಳ ಪ್ರಕಾರ ಹೊಸ ಜಾಹೀರಾತಿನಲ್ಲಿ ರಶ್ಮಿಕಾ ಮತ್ತು ವಿಜಯ್​ ಒಟ್ಟಿಗೆ ನಟಿಸಿದ್ದಾರೆ. ಇದು ಸಂತೂರ್​ ಸೋಪ್​ ಜಾಹೀರಾತು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತವಾಗಿ ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಅಷ್ಟರಲ್ಲಾಗಲೇ ಚಿತ್ರೀಕರಣದ ಒಂದು ಕ್ಲಿಪಿಂಗ್​ ಹರಿದಾಡುತ್ತಿದೆ. ಅದರಲ್ಲಿ ವಿಜಯ್​ ದೇವರಕೊಂಡ ಅವರು ರಶ್ಮಿಕಾಗೆ ಏನೋ ಗಿಫ್ಟ್​ ನೀಡುತ್ತ, ಮಂಡಿಯೂರಿ ಪ್ರಪೋಸ್​ ಮಾಡುತ್ತಿರುವ ದೃಶ್ಯ ಇದೆ. ಅದನ್ನು ತಮ್ಮ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳು ಸಂಭ್ರಮಪಡುತ್ತಿದ್ದಾರೆ.

ಕನ್ನಡದಲ್ಲಿ ಮಿಂಚಿದ ಬಳಿಕ ತೆಲುಗಿಗೆ ಕಾಲಿಟ್ಟ ರಶ್ಮಿಕಾಗೆ ಅಲ್ಲಿಯೂ ಭರ್ಜರಿ ಗೆಲುವು ಸಿಕ್ಕಿತು. ನಂತರ ಅವರಿಗೆ ತಮಿಳಿನಿಂದಲೂ ಆಫರ್​ ಬಂತು. ಈಗಂತೂ ಅವರು ಬಾಲಿವುಡ್ ಹೀರೋಯಿನ್​. ‘ಮಿಷನ್​ ಮಜ್ನು’ ಸಿನಿಮಾದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ಹಾಗೂ ‘ಗುಡ್​ ಬೈ’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರಿಗೆ ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಂದ ಆಫರ್​ ಬರುತ್ತಿದೆ. ಇತ್ತೀಚೆಗಷ್ಟೇ ಅವರು ಮೆಕ್​ಡೊನಾಲ್ಡ್​ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಈಗ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಸಂತೂರ್​​ ಸೋಪ್​ ಜಾಹೀರಾತಿಗಾಗಿ ಒಟ್ಟಿಗೆ ನಟಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಇದನ್ನೂ ಓದಿ: Rashmika Mandanna: ಮುಂಬೈ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ದೇವರಕೊಂಡ​ ; ಮುಖ ಮುಚ್ಚಿಕೊಂಡ ನಟ ​

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು