AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ

ಈಗಾಗಲೇ ಸೆನ್ಸಾರ್ ಸಮಸ್ಯೆಯಿಂದ ತೊಂದರೆಗೆ ಒಳಗಾಗಿರುವ ‘ಜನ ನಾಯಗನ್’ ಸಿನಿಮಾಗೆ ಹೊಸ ಕಾಟ ಶುರುವಾಗಿದೆ. ಈ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಲೀಕ್ ಮಾಡಲಾಗಿದೆ. ಇದರಿಂದ ದಳಪತಿ ವಿಜಯ್ ಅಭಿಮಾನಿಗಳು ಗರಂ ಆಗಿದ್ದಾರೆ. ಇದೊಂದು ಪಿತೂರಿ ಎಂದು ವಿಜಯ್ ಫ್ಯಾನ್ಸ್ ಆರೋಪಿಸಿದ್ದಾರೆ.

ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ
Thalapathy VijayImage Credit source: KVN Productions
ಮದನ್​ ಕುಮಾರ್​
|

Updated on:Apr 09, 2026 | 10:53 PM

Share

ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾಗೆ ಸದ್ಯ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಒಂದು ಕಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ಚಿತ್ರದ ಬಿಡುಗಡೆಗೆ ಅಡ್ಡಿಯಾಗಿದ್ದರೆ, ಮತ್ತೊಂದೆಡೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಲೀಕ್ (Leak) ಆಗಿರುವುದು ಚಿತ್ರತಂಡವನ್ನು ಆತಂಕಕ್ಕೆ ತಳ್ಳಿದೆ. ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಆಗಿದೆ. ದಳಪತಿ ವಿಜಯ್ (Vijay) ಅವರ ವಿರೋಧಿಗಳು ಈ ಕೃತ್ಯದ ಹಿಂದೆ ಇದ್ದಾರೆ ಎಂಬುದು ಫ್ಯಾನ್ಸ್ ಆರೋಪ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್‌ನಲ್ಲಿ ವ್ಯಕ್ತಿಯೊಬ್ಬ ವಿಡಿಯೋವನ್ನು ಪಾಸ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿದರೆ, ಚಿತ್ರದ ಎಡಿಟಿಂಗ್ ಕೆಲಸ ನಡೆಯುವ ಸ್ಥಳದಿಂದಲೇ ಈ ದೃಶ್ಯಗಳು ಸೋರಿಕೆಯಾಗಿರಬಹುದು ಎಂದು ಶಂಕಿಸಲಾಗಿದೆ. ದೃಶ್ಯಗಳು ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತಿರುವ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಆ ಲಿಂಕ್‌ಗಳನ್ನು ಬ್ಲಾಕ್ ಮಾಡಲು ಪ್ರಯತ್ನಿಸುತ್ತಿದೆ. ಅಲ್ಲದೆ, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲು ಚಿತ್ರತಂಡ ಮುಂದಾಗಿದೆ.

ಈ ತಿಂಗಳು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ರಾಜ್ಯಾದ್ಯಂತ ಚುನಾವಣಾ ಕಾವು ಹೆಚ್ಚಿದೆ. ಈ ಕಾರಣದಿಂದಾಗಿ ‘ಜನ ನಾಯಗನ್’ ಚಿತ್ರವು ಚುನಾವಣೆಯ ನಂತರವಷ್ಟೇ ತೆರೆಗೆ ಬರಲಿದೆ. ಚಿತ್ರಕ್ಕೆ ರಿವೈಸಿಂಗ್ ಕಮಿಟಿ ಒಪ್ಪಿಗೆ ನೀಡಿದ್ದರೂ, ಸೆನ್ಸಾರ್ ಪ್ರಮಾಣಪತ್ರ ಇನ್ನೂ ಕೈಸೇರಬೇಕಿದೆ. ಈ ನಡುವೆ ಆಗಿರುವ ಲೀಕ್ ಘಟನೆಯು ಚಿತ್ರದ ವ್ಯವಹಾರದ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಈ ಲೀಕ್ ಹಿಂದೆ ಯಾವುದೋ ದೊಡ್ಡ ಪಿತೂರಿ ಇರಬಹುದು ಎಂದು ವಿಜಯ್ ಅಭಿಮಾನಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಸೋರಿಕೆಯಾದ ವಿಡಿಯೋಗಳನ್ನು ಯಾರೂ ಹಂಚಿಕೊಳ್ಳಬೇಡಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾರೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಕೆವಿಎನ್ ಪ್ರೊಡಕ್ಷನ್ಸ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾ ತಡ ಆಗಿದ್ದಕ್ಕೆ ನನಗೆ ನ್ಯಾಯ ಬೇಕು: ಗುಡುಗಿದ ವಿಜಯ್

ಇದು ವಿಜಯ್ ನಟನೆಯ ಕೊನೇ ಸಿನಿಮಾ ಎಂಬ ಕಾರಣದಿಂದ ಜಾಸ್ತಿ ಕುತೂಹಲ ನಿರ್ಮಾಣ ಆಗಿದೆ. ಆದರೆ ಚಿತ್ರಕ್ಕೆ ಹಲವು ವಿಘ್ನಗಳು ಎದುರಾಗುತ್ತಲೇ ಇವೆ. ಸದ್ಯಕ್ಕೆ ದೃಶ್ಯ ಲೀಕ್ ಆಗಿರುವ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಧಿಕೃತ ಹೇಳಿಕೆ ಹೊರಬರುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:51 pm, Thu, 9 April 26

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?