ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್
ವಿಜಯ್​ ಸೇತುಪತಿ ಹಲ್ಲೆ ಮಾಡಿದ ದೃಶ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 03, 2021 | 8:42 PM

ನಟ ವಿಜಯ್​ ಸೇತುಪತಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಮಿಳು ಚಿತ್ರರಂಗದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್​ ಅವರು ಬೆಂಗಳೂರಿಗೆ ಆಗಮಿಸುವ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಬಗ್ಗೆ ವರದಿ ಆಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ತಮಿಳಿನಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿತ್ತು. ಆದರೆ, ಅವರು ಪುನೀತ್​ ಸಮಾಧಿಗೆ ನಮನ ಸಲ್ಲಿಸಲು ಬಂದಿದ್ದರು ಎಂಬುದು ತಿಳಿದು ಬಂದಿದೆ..  ತಮಿಳಿನ ‘ಮಾಸ್ಟರ್’ ಸಿನಿಮಾದ ಶೂಟಿಂಗ್​ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್​ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್​ ಸೇತುಪತಿ ಈ ಮೊದಲು ಮಾತನಾಡಿದ್ದರು.

ಇದನ್ನೂ ಓದಿ: ಬೆಂಗಳೂರಿನ ಎಸ್​ಆರ್​ವಿ ಥಿಯೇಟರ್​ನಲ್ಲಿ ಕೊನೆಯದಾಗಿ ಅಟೆಂಡ್​ ಮಾಡಿದ್ದ ಪುನೀತ್​; ಇಲ್ಲಿದೆ ಸಿಸಿಟಿವಿ ವಿಡಿಯೋ

‘ಮಗಳೆಂದು ಕಲ್ಪಿಸಿಕೊಂಡವಳ ಜೊತೆ ಅಂಥ ಕೆಲಸ ಮಾಡಲ್ಲ’; ಕೃತಿ ಶೆಟ್ಟಿ ಬಗ್ಗೆ ವಿಜಯ್​ ಸೇತುಪತಿ ಖಡಕ್​ ನಿರ್ಧಾರ

Published On - 7:42 pm, Wed, 3 November 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ