AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೆಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ ವಿಜಯ್ ಸೇತುಪತಿ

ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ಚಲನಚಿತ್ರ ಕಾರ್ಮಿಕರ ಸಂಘಕ್ಕೆ ಒಂದು ಕೋಟಿ ರೂಪಾಯಿಗಳನ್ನು ದಾನ ಮಾಡಿದ್ದಾರೆ. ಈ ಹಣವನ್ನು ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲು ಬಳಸಲಾಗುವುದು. ಅವರ ಈ ಉದಾರತೆಯು ಅಭಿಮಾನಿಗಳಲ್ಲಿ ಸಂತೋಷವನ್ನುಂಟುಮಾಡಿದೆ. ಈ ಅಪಾರ್ಟ್​ಮೆಂಟ್​ಗೆ ವಿಜಯ್ ಸೇತುಪತಿ ಅವರ ಹೆಸರು ಇಡಲಾಗುತ್ತದೆ’ ಎಂದು ರಮೇಶ್ ಬಾಲಾ ಹೇಳಿದ್ದಾರೆ.  

ಹಿಂದೆಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ ವಿಜಯ್ ಸೇತುಪತಿ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Feb 23, 2025 | 10:53 AM

Share

ವಿಜಯ್ ಸೇತುಪತಿ ಅವರು ನಟನೆ ಮೂಲಕ ಗಮನ ಸೆಳೆದವರು. ಈಗ ಅವರು ಸ್ಟಾರ್ ಹೀರೋ ಆಗಿದ್ದಾರೆ. ವಿಲನ್ ಹಾಗೂ ಹೀರೋ ಪಾತ್ರಗಳನ್ನು ಮಾಡಿ ಮೆಚ್ಚುಗೆ ಗಳಿಸಿದ್ದಾರೆ. ಈಗ ಅವರು ಹಿಂದೆ ಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅವರು ಇಷ್ಟೊಂದು ಹಣ ಕೊಟ್ಟಿದ್ದು ಯಾರಿಗೆ ಎಂಬ ಬಗ್ಗೆ ಇಲ್ಲಿದೆ ವಿವರ.

ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ಚಲನಚಿತ್ರ ಕಾರ್ಮಿಕರ ಸಂಘಕ್ಕೆ ಒಂದು ಕೋಟಿ ರೂಪಾಯಿ ಕೊಟ್ಟಿದ್ದಾರೆ. ಇದರ ಸದಸ್ಯರಿಗೆ ಮನೆಗಳ ನಿರ್ಮಾಣಕ್ಕೆ ಈ ಹಣ ಸಹಕಾರಿ ಆಗಲಿದೆ. ಕಷ್ಟಪಟ್ಟು ದುಡಿಯುವ ಕೆಲಸಗಾರರಿಗೆ ಮನೆ ನಿರ್ಮಾಣ ಆಗಲಿದೆ ಅನ್ನೋದು ವಿಶೇಷ. ಗೌರವಾರ್ಥವಾಗಿ ವಿಜಯ್ ಹೆಸರನ್ನು ಇಡಲಾಗುತ್ತದೆ.

ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ವಿಜಯ್ ಸೇತುಪತಿ 1.30 ಕೋಟಿ ರೂಪಾಯಿ ಹಣವನ್ನು ಯೂನಿಯನ್​ಗೆ ನೀಡಿದ್ದು, ಮನೆ ನಿರ್ಮಾಣ ಆಗಲಿದೆ. ಈ ಅಪಾರ್ಟ್​ಮೆಂಟ್​ಗೆ ವಿಜಯ್ ಸೇತುಪತಿ ಅವರ ಹೆಸರು ಇಡಲಾಗುತ್ತದೆ’ ಎಂದು ರಮೇಶ್ ಬಾಲಾ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ವಿಜಯ್ ಸೇತುಪತಿ ಅವರು 2024ರಲ್ಲಿ ಹಲವು ಸಿನಿಮಾಗಳು ರಿಲೀಸ್ ಕಂಡವು. ‘ಮೇರಿ ಕ್ರಿಸ್​ಮಸ್​’ ಸಿನಿಮಾ ಮೆಚ್ಚುಗೆ ಪಡೆಯಿತು. ಕತ್ರಿನಾ ಕೈಫ್​ ಜೊತೆ ಅವರು ತೆರೆ ಹಂಚಿಕೊಂಡರು. ಅವರ ನಟನೆಯ ‘ಮಹರಾಜ’ ಚಿತ್ರ ಸೂಪರ್ ಹಿಟ್ ಆಯಿತು. ‘ವಿಡುದಲೈ 2’ ಸಿನಿಮಾ ಕೂಡ ತೆರೆಗೆ ಬಂದಿದೆ. ಈ ಚಿತ್ರ ಅಂದುಕೊಂಡ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ.

ಇದನ್ನೂ ಓದಿ: ಚೀನಾದಲ್ಲೂ ‘ಮಹಾರಾಜ’ ಸಿನಿಮಾಗೆ ಜನರು ಫಿದಾ; ವಿಜಯ್ ಸೇತುಪತಿ ಚಿತ್ರಕ್ಕೆ ಭಾರಿ ಕಲೆಕ್ಷನ್​

2025ರಲ್ಲಿ ವಿಜಯ್ ನಟನೆಯ ಹಲವು ಸಿನಿಮಾಗಳು ರಿಲೀಸ್ ಆಗಲಿವೆ. ‘ಗಾಂಧಿ ಟಾಕ್ಸ್’ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಇದು ಮೂಕಿ ಚಿತ್ರ ಅನ್ನೋದು ವಿಶೇಷ. ಈ ಚಿತ್ರದ ರಿಲೀಸ್ ದಿನಾಂಕ ಇನ್ನೂ ತೆರೆಗೆ ಬಂದಿಲ್ಲ. ‘ಏಸ್’, ‘ಟ್ರೇನ್’ ಚಿತ್ರಗಳು ಈ ವರ್ಷ ತೆರೆಗೆ ಬರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್